ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನರಗುಂದ 'ಬಯಲು ಬಹಿರ್ದೆಸೆ ಮುಕ್ತ' ತಾಲೂಕು ಎಂದು ಘೋಷಣೆ

|
Google Oneindia Kannada News

ಗದಗ, ಸೆಪ್ಟೆಂಬರ್ 26 : ಗದಗ ಜಿಲ್ಲೆಯ ನರಗುಂದ 'ಬಯಲು ಬಹಿರ್ದೆಸೆ ಮುಕ್ತ' ತಾಲೂಕು ಎಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಘೋಷಣೆ ಮಾಡಿದರು. ನರಗುಂದ 34 ಗ್ರಾಮಗಳನ್ನು ಹೊಂದಿರುವ ತಾಲೂಕಾಗಿದ್ದು, ಗ್ರಾಮದ ಎಲ್ಲಾ ಮನೆಗಳಲ್ಲಿ ಶೌಚಾಲಯ ನಿರ್ಮಿಸಲಾಗಿದೆ.

ಕೊಪ್ಪಳದಲ್ಲಿ 200 ಗಂಟೆಗಳಲ್ಲಿ 21,129 ಶೌಚಾಲಯ ನಿರ್ಮಾಣಕೊಪ್ಪಳದಲ್ಲಿ 200 ಗಂಟೆಗಳಲ್ಲಿ 21,129 ಶೌಚಾಲಯ ನಿರ್ಮಾಣ

ಮಂಗಳವಾರ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದ ಸಂಯುಕ್ತ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ಸಮಾರಂಭದಲ್ಲಿ ವೆಂಕಯ್ಯ ನಾಯ್ಡು ಪಾಲ್ಗೊಂಡಿದ್ದರು. 'ನರಗುಂದ ತಾಲೂಕು ಬಯಲು ಬಹಿರ್ದೆಸೆ ಮುಕ್ತ ಎಂದು ಘೋಷಿಸಿದ ಅವರು, ದೇಶದ ಇತಿಹಾಸದಲ್ಲಿ ಈ ಗ್ರಾಮದ ಹೆಸರು ಚಿರಸ್ಥಾಯಿಯಾಗಿ ಉಳಿಯಲಿದೆ' ಎಂದರು.

 Venkaiah Naidu announces Naragund as open defecation free taluk of Karnataka

'ತಮ್ಮ ಗ್ರಾಮಗಳ ಅಭಿವೃದ್ಧಿ ಬಗ್ಗೆ ಯುವಜನತೆ ಶದ್ಧೆ ವಹಿಸಬೇಕು ಎಂದು ಕರೆ ನೀಡಿದ ವೆಂಕಯ್ಯ ನಾಯ್ಡು, ಬಯಲು ಬಹಿರ್ದೆಸೆ ಮುಕ್ತ ತಾಲೂಕು ರಚನೆಗೆ ಶ್ರಮಿಸಿದ 13 ಗ್ರಾಮ ಪಂಚಾಯಿತಿಗಳ ಅಧ್ಯಕ್ಷರನ್ನು ಸನ್ಮಾನಿಸಿದರು.

ಕ್ರಾಂತಿ ಮಾಡಿದ ಸಿಇಒ, ದಾವಣಗೆರೆ ಬಯಲು ಶೌಚ ಮುಕ್ತ ಜಿಲ್ಲೆಕ್ರಾಂತಿ ಮಾಡಿದ ಸಿಇಒ, ದಾವಣಗೆರೆ ಬಯಲು ಶೌಚ ಮುಕ್ತ ಜಿಲ್ಲೆ

'ಕೊಣ್ಣೂರು ಸ್ಚಚ್ಛ ಭಾರತ ಮಿಷನ್' ಎಂಬ ಕಾರ್ಯಕ್ರಮದಡಿ ನರಗುಂದದಲ್ಲಿ ಶೌಚಾಲಯ ನಿರ್ಮಿಸುವ ಕಾರ್ಯವನ್ನು ಕೈಗೊಳ್ಳಲಾಗಿತ್ತು. ಸುಮಾರು 34 ಗ್ರಾಮಗಳನ್ನು ಹೊಂದಿರುವ ತಾಲೂಕಿನಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದ್ದು, ಜನರು ಗ್ರಾಮ ಪಂಚಾಯಿತಿ ನೆರವಿನಿಂದ ಮನೆಯಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಂಡಿದ್ದಾರೆ.

ಇದೇ ಕಾರ್ಯಕ್ರಮದಲ್ಲಿ ವೆಂಕಯ್ಯ ನಾಯ್ಡು ಅವರು ನರಗುಂದದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೂ ಚಾಲನೆ ನೀಡಿದರು. ತಾಜ್ಯ ಸಂಸ್ಕರಣಾ ಘಟಕ, ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದರು.

ಮೈಸೂರಿಗರಿಗೆ ಉಚಿತ ಶೌಚಾಲಯ ನಿರ್ಮಿಸಿಕೊಟ್ಟ ಚಂಢೀಗಡದ ಯುವತಿಮೈಸೂರಿಗರಿಗೆ ಉಚಿತ ಶೌಚಾಲಯ ನಿರ್ಮಿಸಿಕೊಟ್ಟ ಚಂಢೀಗಡದ ಯುವತಿ

ರಾಜ್ಯಪಾಲ ವಜುಭಾಯಿ ವಾಲಾ, ಗ್ರಾಮೀಣಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

English summary
Vice president M.Venkaiah Naidu on September 26, 2017 announced Gadag district Naragund taluk as open defecation free taluk of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X