ಭವಾನಿಗೆ ಜೈಲಾ, ಬೇಲಾ?: ಬಂಧನ ಭೀತಿಯಲ್ಲಿರುವ ರೇವಣ್ಣ ಪತ್ನಿಗೆ ಶುರುವಾಗಿದೆ ಡವಡವ

ಬೆಂಗಳೂರು, ಮೇ 31: ಹಾಸನ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಹಾಗೂ ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣ ದೇಶಾದ್ಯಂತ ರಾಷ್ಟ್ರಮಟ್ಟದಲ್ಲೂ ಬಾರೀ ಸದ್ದು ಮಾಡಿದ್ದು, ಗುರುವಾರ ತಡರಾತ್ರಿ ಪ್ರಜ್ವಲ್‌ ಅರೆಸ್ಟ್‌ ಆಗಿದ್ದಾರೆ. ಇತ್ತ ಪ್ರಜ್ವಲ್‌ ಬಂಧನವಾಗುತ್ತಿದ್ದಂತೆ ಗೌಡರ ಕುಟುಂಬ ತೀವ್ರ ಮುಜುಗರ ಅನುಭವಿಸುತ್ತಿದ್ದು, ಭವಾನಿ ರೇವಣ್ಣ ಅವರು ಸಹ ಬಂಧನದ ಭೀತಿಯಲ್ಲಿದ್ದಾರೆ.

ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋದ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ ತೀರ್ಪು ಇಂದು (ಶುಕ್ರವಾರ) ಪ್ರಕಟವಾಗಲಿದ್ದು, ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರಿಗೆ ಜೈಲಾ... ಬೇಲಾ... ಎಂಬುದು ತೀರ್ಮಾನವಾಗಲಿದೆ.

Verdict on bhavani revanna s anticipatory bail application will be announced on Today

ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಿದರೆ ಭವಾನಿ ರೇವಣ್ಣ ಅವರು ಜೈಲಿಗೆ ಹೋಗುವುದು ತಪ್ಪಲಿದೆ. ಆದರೆ, ನ್ಯಾಯಾಲಯವು ಜಾಮೀನು ಅರ್ಜಿಯನ್ನು ತಿರಸ್ಕರಿಸಿದರೆ ರೇವಣ್ಣ ಅವರ ಪತ್ರಿ ಭವಾನಿ ರೇವಣ್ಣ ಅವರು ಜೈಲಿಗೆ ಹೋಗುವುದು ಫಿಕ್ಸ್‌ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲವೂ ನ್ಯಾಯಾಲಯದ ತೀರ್ಪಿನ ಮೇಲೆ ನಿಂತಿದ್ದು, ಇಂದಿನ ತೀರ್ಪು ಸಾಕಷ್ಟು ಕುತೂಹಲ ಮೂಡಿಸಿದೆ.

ಮಹಿಳೆಯ ಅಪಹರಣ ಕೇಸ್‌ ನಲ್ಲಿ ಮಾಜಿ ಸಚಿವ ಹೆಚ್‌ ಡಿ ರೇವಣ್ಣ ಅವರು ಬಂಧನಕ್ಕೊಳಗಾಗಿ ಜಾಮೀನು ಪಡೆದುಕೊಂಡಿದ್ದಾರೆ. ಇದೀಗ ಭವಾನಿ ರೇವಣ್ಣ ಅವರಿಗೂ ಬಂಧನ ಭೀತಿ ಎದುಗಾಗಿದ್ದು, ಶುಕ್ರವಾರ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಯ್ದಿರಿಸಿದೆ. ನಿರೀಕ್ಷಣಾ ಜಾಮೀನು ನೀಡಿದರೆ ಭವಾನಿ ರೇವಣ್ಣ ಅವರು ಜೈಲಿಗೆ ಹೋಗುವುದು ತಪ್ಪಲಿದೆ. ಆದರೆ, ನ್ಯಾಯಾಲಯವು ಜಾಮೀನು ಅರ್ಜಿಯನ್ನು ತಿರಸ್ಕರಿಸಿದರೆ ಜೈಲಿಗೆ ಹೋಗುವುದು ಖಚಿತವಾಗಲಿದೆ.

ಪ್ರಜ್ವಲ್‌ ರೇವಣ್ಣಗೂ ಸಂಕಷ್ಟ

ಇನ್ನೂ ಹಾಸನ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ವಿರುದ್ಧ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಪ್ರಜ್ವಲ್‌ ತಮ್ಮ ವಿರುದ್ಧ ದಾಖಲಾದ ಎಲ್ಲಾ ಪ್ರಕರಣದಲ್ಲಿಯೂ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯೂ ಸಹ ಇಂದು (ಶುಕ್ರವಾರ) ನಡೆಯಲಿದೆ. ಸಿಐಡಿ ಪೊಲೀಸ್‌ ಠಾಣೆ, ಹೊಳೇನರಸೀಪುರ ಮತ್ತು ಸೈಬರ್‌ ಕ್ರೈಂ ಠಾಣೆಯಲ್ಲಿ ದಾಖಲಾದ ಮೂರು ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+