ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಡಿ. ಬಿ. ಇನಾಮಾದಾರ್ ನಿಧನ

ಬೆಂಗಳೂರು, ಏಪ್ರಿಲ್ 25; ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ನಾಯಕ ಡಿ. ಬಿ. ಇನಾಮಾದಾರ್ ನಿಧನ ಹೊಂದಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ದಾನಪ್ಪಗೌಡ ಬಸವನಗೌಡ ಇನಾಮಾದಾರ್ (73) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಶ್ವಾಸಕೋಶ ಮತ್ತು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Veteran Congress Leader DB Inamdar No More

ಬೆಳಗಾವಿ ಜಿಲ್ಲೆಯ ಕಿತ್ತೂರು ವಿಧಾನಸಭಾ ಕ್ಷೇತ್ರದಿಂದ 5 ಬಾರಿ ಡಿ. ಬಿ. ಇನಾಮಾದಾರ್ ಶಾಸಕರಾಗಿ ಆಯ್ಕೆಯಾಗಿದ್ದರು. ಸಚಿವರಾಗಿಯೂ ಸಹ ಕೆಲಸ ಮಾಡಿದ್ದರು. ಈ ಬಾರಿಯ ಚುನಾವಣೆಗೆ ಸಹ ಅವರು ಕಾಂಗ್ರೆಸ್‌ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅನಾರೋಗ್ಯದ ಕಾರಣ ಅವರಿಗೆ ಟಿಕೆಟ್ ನಿರಾಕರಿಸಲಾಗಿತ್ತು.

ಡಿ. ಬಿ. ಇನಾಮಾದಾರ್ ಜನತಾ ಪಕ್ಷದಿಂದ ಎರಡು ಮತ್ತು ಕಾಂಗ್ರೆಸ್‌ನಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎಸ್. ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಸಚಿವರಾಗಿಯೂ ಕೆಲಸ ಮಾಡಿದ್ದಾರೆ. 2018ರ ಚುನಾವಣೆಯಲ್ಲಿ ಕಿತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. 40,293 ಮತಗಳನ್ನು ಪಡೆದು ಬಿಜೆಪಿಯ ದಾನಪ್ಪ ಗೌಡ ಬಸನಗೌಡ ಇನಾಮದಾರ ವಿರುದ್ಧ ಸೋಲು ಕಂಡಿದ್ದರು.

ರಾಜೀನಾಮೆ ಘೋಷಣೆ ಮಾಡಿದ್ದರು; 2018ರ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಡಿ. ಬಿ. ಇನಾಮಾದಾರ್‌ಗೆ ಟಿಕೆಟ್ ಘೋಷಣೆ ಮಾಡಲು ತಡ ಮಾಡಿತ್ತು. ಆಗ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಅವರು ಘೋಷಣೆ ಮಾಡಿದ್ದರು. ಆದರೆ ಬಳಿಕ ಯೂ-ಟರ್ನ್ ತೆಗೆದುಕೊಂಡಿದ್ದರು. ಕಾಂಗ್ರೆಸ್‌ನಲ್ಲೇ ಉಳಿದಿದ್ದರು.

ಡಿ. ಬಿ. ಇನಾಮಾದಾರ್‌ 1983ರಲ್ಲಿ ಜನತಾ ಪಕ್ಷದಿಂದ ಕಿತ್ತೂರು ಕ್ಷೇತ್ರದಿಂದ ಕಣಕ್ಕಿಳಿದು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. 1985ರಲ್ಲಿಯೂ ಮತ್ತೆ ಜನತಾ ಪಕ್ಷದಿಂದ ಗೆಲುವು ಸಾಧಿಸಿದರು.

1994ರಲ್ಲಿ ಕಾಂಗ್ರೆಸ್ ಸೇರಿದ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜೊತೆ ಒಡನಾಟ ಹೊಂದಿದ್ದರು. 1994, 1999 ಮತ್ತು 2013ರ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಗೆಲುವು ಸಾಧಿಸಿದರು. ದೇವರಾಜ ಅರಸ್, ಎಸ್. ಎಂ. ಕೃಷ್ಣ ಮತ್ತು ಎಸ್. ಬಂಗಾರಪ್ಪ ಸಂಪುಟದಲ್ಲಿ ಸಚಿವರಾಗಿದ್ದರು.

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿಯೂ ಕಿತ್ತೂರು ಕ್ಷೇತ್ರದಲ್ಲಿ ಡಿ. ಬಿ. ಇನಾಮಾದಾರ್‌ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಪಕ್ಷ ಬಾಬಾ ಸಾಹೇಬ್ ಡಿ. ಪಾಟೀಲ್‌ಗೆ ಟಿಕೆಟ್ ನೀಡಿದೆ. ಬಿಜೆಪಿಯಿಂದ ಹಾಲಿ ಶಾಸಕ ದಾನಪ್ಪ ಗೌಡ ಬಸನಗೌಡ ಇನಾಮದಾರ ಅಭ್ಯರ್ಥಿ. ಜೆಡಿಎಸ್‌ನಿಂದ ಅಶ್ವಿನಿ ಸಿಂಗಯ್ಯ ಪೂಜಾರೆ ಅಭ್ಯರ್ಥಿಯಾಗಿದ್ದಾರೆ.

ಸಿದ್ದರಾಮಯ್ಯ ಸಂತಾಪ; ಮಾಜಿ ಸಚಿವ ಡಿ. ಬಿ. ಇನಾಮಾದಾರ್ ನಿಧನಕ್ಕೆ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಟ್ವೀಟ್‌ ಮಾಡಿರುವ ಅವರು, "ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಮಾಜಿ ಸಚಿವರು ಆದ ಡಿ. ಬಿ. ಇನಾಂದಾರ್ ಅವರ ನಿಧನದ ಸುದ್ದಿ ಕೇಳಿ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಕುಟುಂಬ ಸದಸ್ಯರು ಮತ್ತು ಅಭಿಮಾನಿಗಳಿಗೆ ಇನಾಂದಾರ್ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಸಿಗಲಿ" ಎಂದು ಸಂತಾಪದಲ್ಲಿ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+