Get Updates
Get notified of breaking news, exclusive insights, and must-see stories!

K.B. Ganapathy: ಹಿರಿಯ ಪತ್ರಕರ್ತ ಕೆ.ಬಿ. ಗಣಪತಿ ನಿಧನ, ಗಣ್ಯರ ಸಂತಾಪ..

ಕರ್ನಾಟಕದ ಹಿರಿಯ ಪತ್ರಕರ್ತ, ಸ್ಟಾರ್ ಆಫ್ ಮೈಸೂರು ಮತ್ತು ಮೈಸೂರು ಮಿತ್ರ ಪತ್ರಿಕೆ ಸಂಸ್ಥಾಪಕ ಸಂಪಾದಕ ಕೆ.ಬಿ.ಗಣಪತಿ (KB Ganapati) ಅವರು ಹೃದಯಾಘಾತದಿಂದ ತಮ್ಮ 85ನೇ ವಯಸ್ಸಿನಲ್ಲಿ ಇಂದು ಭಾನುವಾರ ಬೆಳಗ್ಗೆ ನಿಧನರಾದರು. ಅಗಲಿದ ಆತ್ಮಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಬಿವೈ ವಿಜಯೇಂದ್ರ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, ಸೇರಿದಂತೆ ಇತರ ಸಂಘ ಸಂಸ್ಥೆಗಳ ಮುಖ್ಯಸ್ಥರು ಶೋಕ ವ್ಯಕ್ತಪಡಿಸಿದ್ದಾರೆ.

ಮಾಧ್ಯಮ ಕ್ಷೇತತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ್ದರು. ಅನೇಕ ಪತ್ರಕರ್ತರನ್ನು ರೂಪಿಸಿದ್ದರು. ಇವರಿಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ಸಹ ನೀಡಲಾಗಿದೆ. ಇಂದು ಹೃದಯಾಘಾತದಿಂದ ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ಅವರು ವಿಧಿವಶರಾದರು. ಮಧ್ಯಾಹ್ನ ಕೆ.ಸಿ.ಬಡಾವಣೆಯ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನರವೇರಿಸಲಾಯಿತು.

Veteran Journalist K B Ganapathy Passes Away at 85 politicians express condolence

ಪತ್ರಿಕಾ ರಂಗ ಬಡವಾಯಿತು: ಸಿಎಂ

ನನ್ನೂರಿನ‌ ಹಿರಿಯ ಪತ್ರಕರ್ತ ಮಿತ್ರರಾದ ಕೆ.ಬಿ.ಗಣಪತಿ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಗಣಪತಿಯವರ ಅಗಲಿಕೆಯಿಂದ ನಾಡಿನ‌ ಪತ್ರಿಕಾರಂಗ ಬಡವಾಗಿದೆ. ಸುಮಾರು ಐದು ದಶಕಗಳ ಕಾಲ ಪತ್ರಿಕೋದ್ಯಮದಲ್ಲಿ ಅವಿರತ ದುಡಿದ ಗಣಪತಿ ಅವರು ವಸ್ತುನಿಷ್ಠ ಹಾಗೂ ವೃತ್ತಿಪರ ಬರಹಗಳಿಗೆ ಹೆಸರುವಾಸಿ. "ಸ್ಟಾರ್ ಆಫ್ ಮೈಸೂರು" ಪತ್ರಿಕೆಯ ಮೂಲಕ‌ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಪಾರ ಓದುಗ ಬಳಗ ಸೃಷ್ಟಿಸಿದ ಗಣಪತಿಯವರು "ಮೈಸೂರು ಮಿತ್ರ" ದಿನಪತ್ರಿಕೆಯ ಸ್ಥಾಪಕ ಸಂಪಾದಕರಾಗಿ ಕೂಡ ಸೇವೆ ಸಲ್ಲಿಸಿದ್ದರು. ಪತ್ರಿಕೋದ್ಯಮದಲ್ಲಿ ಅವರು ಮೂಡಿಸಿರುವ ಹೆಜ್ಜೆಗುರುತುಗಳು ಯುವ ಪತ್ರಕರ್ತರಿಗೆ ಸ್ಪೂರ್ತಿ ಮತ್ತು ಮಾದರಿಯಾಗಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

ವಿಪಕ್ಷ ನಾಯಕ ಆರ್.ಅಶೋಕ್ ಅವರು ಸಹ ಸಂತಾಪ ಸೂಚಿಸಿದ್ದು, ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕರಾದ ಕೆ.ಬಿ. ಗಣಪತಿ ಅವರ ನಿಧನದ ಸುದ್ದಿ ಕೇಳಿ ತೀವ್ರ ದುಃಖಿತನಾಗಿದ್ದೇನೆ. ತಮ್ಮ ವರದಿಗಾರಿಕೆ ಹಾಗೂ ಅಂಕಣಗಳ ಮೂಲಕ ಪತ್ರಿಕಾ ರಂಗದಲ್ಲಿ ಸುಮಾರು 50 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿರುವ ಅವರು, ಕಾದಂಬರಿಕಾರರಾಗಿಯೂ ಸಾಹಿತ್ಯ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದಾರೆ.

ಕೆ.ಬಿ. ಗಣಪತಿ ಅವರ ಆತ್ಮಕ್ಕೆ ಸದ್ಗತಿ ದೊರೆಯಲು, ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಮತ್ತು ಬಂಧುಗಳಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

ಮರೆಯಾದ 'ಸ್ಟಾರ್ ಆಫ್ ಮೈಸೂರು'

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಐದು ದಶಕಗಳಷ್ಟು ಕಾಲ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸಿದ, 'ಮೈಸೂರು ಮಿತ್ರ' ಮತ್ತು 'ಸ್ಟಾರ್ ಆಫ್ ಮೈಸೂರು' ಹೆಸರಾಂತ ಪತ್ರಿಕೆಗಳನ್ನು ಕಟ್ಟಿ ಬೆಳೆಸಿದ ಹಿರಿಯ ಪತ್ರಕರ್ತ ಕೆ.ಬಿ. ಗಣಪತಿ ಅವರ ನಿಧನದ ಸುದ್ದಿ ತಿಳಿದು ಆಘಾತವಾಗಿದೆ. ಅಪಾರ ಪ್ರಾಪಂಚಿಕ ಜ್ಞಾನವನ್ನು ಹೊಂದಿದ್ದ ಅವರ ಲೇಖನಿಯಿಂದ ಹೊರಹೊಮ್ಮಿದ ಪ್ರತಿಯೊಂದು ಅಕ್ಷರಗಳು ಕೂಡಾ ಸಮಾಜದ ಮೇಲೆ ಗಾಢವಾದ ಪರಿಣಾಮ ಬೀರುವಂಥ ಶಕ್ತಿಯನ್ನು ಹೊಂದಿದ್ದವು. ಅವರು ಮೈಸೂರಿನಲ್ಲಿ ಮಾತ್ರವಲ್ಲದೇ ದೇಶ- ವಿದೇಶಗಳಲ್ಲೂ ಅಪಾರ ಓದುಗ ಬಳಗವನ್ನು ಸೃಷ್ಟಿಸಿಕೊಂಡಿದ್ದರು.ಅಗಲಿದ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಶೋಕ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಮೈಸೂರು ಮಾಧ್ಯಮ ಕ್ಷೇತ್ರದ ಭೀಷ್ಮರಂತೆ ಸತತ ಐದು ದಶಕಗಳ ಅವಧಿಯವರೆಗೆ ಪತ್ರಿಕಾ ಹಾಗೂ ಸಾಹಿತ್ಯ ವಲಯದಲ್ಲಿ ತಮ್ಮನ್ನು ಸಮರ್ಪಿಸಿಕೊಂಡು ಮೈಸೂರು ಭಾಗ ಹಾಗೂ ಸಮಗ್ರ ಕರ್ನಾಟಕದ ಆಗು ಹೋಗುಗಳ ಬಗ್ಗೆ ಸದಾ ಕಾಳಜಿ ವಹಿಸುತ್ತಿದ್ದ ನನ್ನ ಅತ್ಯಂತ ಆತ್ಮೀಯರು ಹಾಗೂ ಮಾರ್ಗದರ್ಶಕರಾಗಿದ್ದ ಡಾ.ಕೆ.ಬಿ. ಗಣಪತಿ ಅವರ ನಿಧನದ ಸುದ್ದಿ ಆಘಾತ ತರಿಸಿದೆ.

ಕೆ.ಬಿ.ಜಿ ಅವರ ನಿಧನದಿಂದ ಮೈಸೂರು ಮಾಧ್ಯಮ ಕ್ಷೇತ್ರದಲ್ಲಿ ಶೂನ್ಯ ಆವರಿಸಿದೆ, ಅವರ ಅಪಾರ ಅಭಿಮಾನಿಗಳಿಗೆ ಹಾಗೂ ಕುಟುಂಬ ವರ್ಗಕ್ಕೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ಲಭಿಸಲಿ ಎಂದು ದೇವರಲ್ಲಿ ಪ್ರಾರ್ಥಿಸಿ, ಅವರ ಅಭಿಮಾನಿಗಳ ಹಾಗೂ ಕುಟುಂಬ ವರ್ಗದ ನೋವಲ್ಲಿ ನಾನೂ ಭಾಗಿಯಾಗಿದ್ದೇನೆ.

ಮೈಸೂರು ಮಿತ್ರ ಹಾಗೂ ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಮೂಲಕ ಕೆಬಿಜಿ ಯವರು ಮೈಸೂರು ಭಾಗದ ಜನರ ಹೃದಯದಲ್ಲಿ ಸದಾ ಸ್ಮರಣೀಯರಾಗಿರುತ್ತಾರೆ. ಅವರ ಆದರ್ಶದ ಬದುಕು, ಸಾಮಾಜಿಕ ಹಾಗೂ ಮಾಧ್ಯಮ ಕಳಕಳಿ ಮುಂದಿನ ಪೀಳಿಗೆಗೆ ಸದಾ ದಾರಿ ದೀಪವಾಗಿದೆ. ಮಾನ್ಯ ಕೆಬಿಜಿ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಸಂತಾಪ ಸೂಚಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+