ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿಘಂಟು ತಜ್ಞ, ಶತಾಯುಷಿ ಪ್ರೊ. ಜಿ. ವೆಂಕಟಸುಬ್ಬಯ್ಯ ನಿಧನ

|
Google Oneindia Kannada News

ಬೆಂಗಳೂರು, ಏಪ್ರಿಲ್ 19: ಕನ್ನಡ ನಿಘಂಟು ತಜ್ಞ, ಶತಾಯುಷಿ ಪ್ರೊ. ಜಿ. ವೆಂಕಟಸುಬ್ಬಯ್ಯ ನಿಧನರಾಗಿದ್ದಾರೆ.

ಅವರಿಗೆ 108 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಏ.18ರ ತಡರಾತ್ರಿ 1.30ರ ವೇಳೆಗೆ ಕೊನೆಯುಸಿರೆಳೆದಿದ್ದಾರೆ.

ಅವರು 1913ರ ಆಗಸ್ಟ್ 13ರಂದು ಜನಿಸಿದರು, ಅವರು ಭಾಷಾ ತಜ್ಞ, ಸಂಶೋಧಕ, ಬರಹಗಾರ, ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಕನ್ನಡ ನಿಘಂಟು ಶಾಸ್ತ್ರ ಪರಿಚಯ ಅವರ ಶ್ರೇಷ್ಠ ಗ್ರಂಥವಾಗಿದೆ.

G Venkatasubbaiah

ಇಗೋ ಕನ್ನಡದ ಮೂಲಕ ಇ-ನಿಘಂಟು ಸೃಷ್ಟಿಸಿದ್ದರು, ಜೀವಿ ಎಂದೇ ಸಾಹಿತ್ಯವಲಯದಲ್ಲಿ ಖ್ಯಾತರಾಗಿದ್ದ ಅವರು ಪಂಪ ಪ್ರಶಸ್ತಿ, ಕನ್ನಡ ಸಾಹಿತ್ಯ ಪ್ರಶಸ್ತಿ, ಪದ್ಮಶ್ರೀ, ಭಾಷಾ ಸಮ್ಮಾನ್ ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.

ಚಾಮರಾಜಪೇಟೆಯ ಚಿತಾಗಾರದಲ್ಲಿ ಮಧ್ಯಾಹ್ನ 12.30ಕ್ಕೆ ಅಂತ್ಯಕ್ರಿಯೆ ನಡೆಯಲಿದೆ. ಜಯನಗರ 7ನೇ ಬ್ಲಾಕ್ ನಿವಾಸದ ಮುಂದೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

1913 ರಲ್ಲಿ ಮೈಸೂರಿನಲ್ಲಿ ಜನಿಸಿದ ವೆಂಕಟಸುಬ್ಬಯ್ಯನವರು, ಮೈಸೂರಿನಲ್ಲಿಯೆ ಬೆಳೆದವರು. ಇವರ ತಂದೆ ಗಂಜಾಂ ತಿಮ್ಮಣ್ಣಯ್ಯನವರು ಸಂಸ್ಕೃತ ಹಾಗು ಕನ್ನಡದ ವಿದ್ವಾಂಸರಾಗಿದ್ದರು.

1937ರಲ್ಲಿ ಮೈಸೂರು ಮಹಾರಾಜ ಕಾಲೇಜಿನಿಂದ ಎಂ.ಎ. ಪದವಿಯನ್ನು ಪಡೆದ ಇವರಿಗೆ ಪ್ರಥಮ ಸ್ಥಾನ ಪಡೆದದ್ದಕ್ಕಾಗಿ ಸುವರ್ಣಪದಕವನ್ನು ಬಹುಮಾನವಾಗಿ ಕೊಡಲಾಯಿತು. ಮುಂದೆ ಇವರು ಬಿ.ಟಿ. ಪದವಿಯನ್ನೂ ಕೂಡ ಪಡೆದರು1939 ರಿಂದ ಪ್ರಾರಂಭಿಸಿ ಸುಮಾರು ೪೦ ವರ್ಷಗಳ ಕಾಲ ಇವರು ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವರು.

'ಇಗೋ ಕನ್ನಡ' 12-5-91 ರಿಂದ ಕನ್ನಡದ ಜನಪ್ರಿಯ ಪತ್ರಿಕೆಯಾದ ಪ್ರಜಾವಾಣಿಯಲ್ಲಿ ಪುಟ್ಟ ಅಂಕಣವಾಗಿ ಪ್ರಾರಂಭವಾಯಿತು. ಕನ್ನಡದ ಶಿಷ್ಟ ಬರವಣಿಗೆಯನ್ನು ಸಾರ್ವಜನಿಕರಿಗೆ ತಿಳಿಯ ಪಡಿಸಲು ಆರಂಭಿಸಿದ ಈ ಅಂಕಣವು ಕೆಲವೇ ದಿನಗಳಲ್ಲಿ ಹಲವರ ಗಮನವನ್ನೂ, ಉತ್ಸಾಹವನ್ನೂ ತನ್ನತ್ತ ಸೆಳೆಯಿತು.

ಕನ್ನಡವನ್ನು ಅಭ್ಯಾಸ ಮಾಡಿದವರಿಂದಲೂ, ಶ್ರೀಸಾಮಾನ್ಯರಿಂದಲೂ ಬಂದ ವೈವಿಧ್ಯಮಯ ಪ್ರಶ್ನೆಗಳಿಗೆ ಉತ್ತರ ನೀಡುವುದರಲ್ಲಿ ತೊಡಗಿಸಿಕೊಂಡ ಈ ಅಂಕಣ, ಹಲವರ ಭಾಷೆಗೆ ಸಂಬಂಧಿಸಿದ ಸಂದೇಹಗಳನ್ನು ನಿವಾರಣೆ ಮಾಡಿತು.

Recommended Video

#Covid19update : ಒಂದೇ ದಿನ ದೇಶದಲ್ಲಿ 2,73,810 ಜನರಿಗೆ ಕೊರೊನಾ ಸೋಂಕು! | Oneindia Kannada

ಇಂತಹ ಭಾಷೆಗೆ ಸಂಬಂಧಿಸಿದ ಪ್ರಶ್ನೋತ್ತರಗಳನ್ನು ಒಟ್ಟುಗೂಡಿಸಿ ವೆಂಕಟಸುಬ್ಬಯ್ಯನವರು ಇಗೋ ಕನ್ನಡ ಎಂಬ ಹೆಸರಲ್ಲೇ ಒಂದು ಸಾಮಾಜಿಕ ನಿಘಂಟನ್ನು ಹೊರತಂದದ್ದುಂಟು.
ಪ್ರಶಸ್ತಿಗಳು:
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ.
ಪಂಪ ಪ್ರಶಸ್ತಿ (2015)
ನಾಡೋಜ ಪ್ರಶಸ್ತಿ (2005)
1974 ರಲ್ಲಿ ಬೀದರನಲ್ಲಿ ನಡೆದ ಪ್ರಥಮ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
2011ರಲ್ಲಿ ಬೆಂಗಳೂರಿನಲ್ಲಿ ನಡೆದ ಅಖಿಲ ಭಾರತ 77ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
2014ನೇ ಸಾಲಿನ ಪಂಪ ಪ್ರಶಸ್ತಿ; (ದಿ. 7/02/2015 ರಂದು ಬನವಾಸಿಯ ಮಯೂರವರ್ಮ ವೇದಿಕೆಯಲ್ಲಿ ಅನುಪಸ್ಥಿತಿಯಲ್ಲಿ ಪ್ರದಾನ)
2017ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ
2018ರ "ಭಾಷಾ ಸಮ್ಮಾನ್‌" (ಕೇಂದ್ರ ಸಾಹಿತ್ಯ ಅಕಾಡೆಮಿ) ( ಕೃಪೆ-ವಿಕಿಪಿಡಿಯಾ)

English summary
Veteran Kannada Writer G Venkatasubbaiah Passes Aaway in Bengaluru On Sunday latenight.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X