• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ವಿ.ಜಿ. ಸಿದ್ಧಾರ್ಥ ನಾಪತ್ತೆ : ಎಸ್‌.ಎಂ.ಕೃಷ್ಣ ಭೇಟಿಯಾದ ಸಿದ್ದರಾಮಯ್ಯ

|

ಬೆಂಗಳೂರು, ಜುಲೈ 30 : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್. ಎಂ.ಕೃಷ್ಣ ನಿವಾಸಕ್ಕೆ ಭೇಟಿ ನೀಡಿದರು. ಎಸ್. ಎಂ. ಕೃಷ್ಣ ಅಳಿಯ ವಿ.ಜಿ. ಸಿದ್ಧಾರ್ಥ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು ಹುಡುಕಾಟ ನಡೆಯುತ್ತಿದೆ.

ಮಂಗಳವಾರ ಮಧ್ಯಾಹ್ನ ಸಿದ್ದರಾಮಯ್ಯ ಬೆಂಗಳೂರಿನ ಸದಾಶಿವ ನಗರದಲ್ಲಿರುವ ಎಸ್. ಎಂ. ಕೃಷ್ಣ ನಿವಾಸಕ್ಕೆ ಭೇಟಿ ನೀಡಿದರು. ಮಾಜಿ ಸ್ಪೀಕರ್ ರಮೇಶ್ ಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಈ ಸಂದರ್ಭದಲ್ಲಿ ಜೊತೆಗಿದ್ದರು.

ಸಿದ್ಧಾರ್ಥ ಮಾಡಿದ್ದ ಸಾಲ 8000 ಕೋಟಿ ರೂ.ಗೂ ಅಧಿಕ, ಇಲ್ಲಿದೆ ಪಟ್ಟಿಸಿದ್ಧಾರ್ಥ ಮಾಡಿದ್ದ ಸಾಲ 8000 ಕೋಟಿ ರೂ.ಗೂ ಅಧಿಕ, ಇಲ್ಲಿದೆ ಪಟ್ಟಿ

ಎಸ್. ಎಂ. ಕೃಷ್ಣ ಜೊತೆ ಕೆಲವು ಹೊತ್ತು ಚರ್ಚೆ ನಡೆಸಿದ ಸಿದ್ದರಾಮಯ್ಯ ಅವರಿಗೆ ಧೈರ್ಯ ಹೇಳಿದರು. ಎಸ್. ಎಂ. ಕೃಷ್ಣ ಅಳಿಯ ಮತ್ತು ಕೆಫೆ ಕಾಫಿ ಡೇ ಮಾಲೀಕ ವಿ.ಜಿ. ಸಿದ್ಧಾರ್ಥ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು ಹುಡುಕಾಟ ನಡೆಯುತ್ತಿದೆ.

ಸಿದ್ಧಾರ್ಥ ಸಹಿಯಲ್ಲಿ ವ್ಯತ್ಯಾಸ? ಹೊಸ ಅನುಮಾನಸಿದ್ಧಾರ್ಥ ಸಹಿಯಲ್ಲಿ ವ್ಯತ್ಯಾಸ? ಹೊಸ ಅನುಮಾನ

ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, "ಸಿದ್ಧಾರ್ಥ ಅವರು ನಾಪತ್ತೆಯಾಗಿರುವ ವಿಚಾರ ತಿಳಿದು ಸಂಕಟವಾಯಿತು. ಅವರು ಸುರಕ್ಷಿತವಾಗಿ ಮರಳಿ ಬರಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಹೇಳಿದರು.

ಸಿದ್ಧಾರ್ಥ ನಾಪತ್ತೆ: ಕೃಷ್ಣರನ್ನು ಭೇಟಿ ಮಾಡಿ ಧೈರ್ಯ ಹೇಳಿದ ದೇವೇಗೌಡ್ರುಸಿದ್ಧಾರ್ಥ ನಾಪತ್ತೆ: ಕೃಷ್ಣರನ್ನು ಭೇಟಿ ಮಾಡಿ ಧೈರ್ಯ ಹೇಳಿದ ದೇವೇಗೌಡ್ರು

ಕಾಂಗ್ರೆಸ್ ನಾಯಕರ ಭೇಟಿ

ಕಾಂಗ್ರೆಸ್ ನಾಯಕರ ಭೇಟಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವರಾದ ಕೃಷ್ಣ ಬೈರೇಗೌಡ, ಕೆ. ಜೆ. ಜಾರ್ಜ್, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸದಾಶಿವ ನಗರದಲ್ಲಿರುವ ಎಸ್. ಎಂ. ಕೃಷ್ಣ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.

ಆತ್ಮಹತ್ಯೆ ಎನ್ನುವುದು ಖಚಿತವಾಗಿಲ್ಲ

ಆತ್ಮಹತ್ಯೆ ಎನ್ನುವುದು ಖಚಿತವಾಗಿಲ್ಲ

ಎಸ್. ಎಂ. ಕೃಷ್ಣ ನಿವಾಸದ ಮುಂದೆ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, "ಸಿದ್ಧಾರ್ಥ ಅವರು ಕಾಣೆಯಾಗಿದ್ದಾರಾ ಅಥವಾ ಆತ್ಮಹತ್ಯೆಯೋ? ಎನ್ನುವುದು ಖಚಿತವಾಗಿಲ್ಲ" ಎಂದು ಹೇಳಿದರು.

ದೇಶ-ವಿದೇಶದಲ್ಲಿ ಸಾಧನೆ

ದೇಶ-ವಿದೇಶದಲ್ಲಿ ಸಾಧನೆ

"ದೇಶ-ವಿದೇಶದಲ್ಲಿ ಕಾಫಿ ಡೇ ಆರಂಭ ಮಾಡುವ ಮೂಲಕ ಸಿದ್ಧಾರ್ಥ ಅವರು ಸಾಧನೆ ಮಾಡಿದ್ದಾರೆ. ಸುಮಾರು 1 ಲಕ್ಷ ಜನರಿಗೆ ಉದ್ಯೋಗ ಕೊಟ್ಟಿದ್ದಾರೆ. ಸಿದ್ಧಾರ್ಥ ಅವರ ಪತ್ರ ಬಹಿರಂಗ ಆಗಿರುವುದರಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ" ಎಂದು ಸಿದ್ದರಾಮಯ್ಯ ಹೇಳಿದರು.

ಐಟಿ ವಿರುದ್ಧ ಆಕ್ರೋಶ

ಐಟಿ ವಿರುದ್ಧ ಆಕ್ರೋಶ

"ಐಟಿಯವರು ಕಿರುಕುಳ ಕೊಡ್ತಾರೆ ಕಾನೂನು ಪ್ರಕಾರ ತನಿಖೆ ಮಾಡಲ್ಲ ಮಾನಸಿಕ ಸ್ಥೈರ್ಯ ಕುಗ್ಗಿಸುತ್ತಾರೆ" ಎಂದು ಸಿದ್ದರಾಮಯ್ಯ ಆದಾಯ ತೆರಿಗೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

English summary
Karnataka Congress Legislative Party leader Siddaramaiah along with Former Speaker K.R.Ramesh Kumar met the S.M.Krishna. Former CM S.M.Krishna's son in law V.G. Siddhartha has been missing from Mangaluru on July 29, evening.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X