ರಾಜ್ಯದ ಖ್ಯಾತ ಉದ್ಯಮಿ ಸಿದ್ಧಾರ್ಥ ನಿಧನ: ಗಣ್ಯರ ಶೋಕದ ನುಡಿ

Recommended Video

      V G Siddhartha : ವಿ ಜಿ ಸಿದ್ಧಾರ್ಥ ಸಾವಿಗೆ ಕಂಬನಿ ಮಿಡಿದ ರಾಜಕೀಯ ಗಣ್ಯರು

      ಬೆಂಗಳೂರು, ಜುಲೈ 31: ರಾಜ್ಯದ ಘನತೆ ಹೆಚ್ಚಿಸಿದ್ದ ಉದ್ಯಮಿ ಸಿದ್ಧಾರ್ಥ ಅಕಾಲಿಕವಾಗಿ ನಿಧನರಾಗಿದ್ದು, ರಾಜ್ಯದ ರಾಜಕಾರಣಿಗಳು ಸಾವಿಗೆ ಕಣ್ಣೀರು ಮಿಡಿದಿದ್ದಾರೆ.

      ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅಳಿಯ ಸಹ ಆಗಿದ್ದ ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ ಅವರು, ಸೋಮವಾರ ಸಂಜೆ ವೇಳೆಗೆ ಮಂಗಳೂರಿನ ಬಳಿ ನೇತ್ರಾವತಿ ನದಿ ಸೇತುವೆ ಮೇಲೆ ಕಾಣೆ ಆಗಿದ್ದ ಸಿದ್ಧಾರ್ಥ ಅವರು ಇಂದು ಬೆಳಿಗ್ಗೆ ಮೃತದೇಹವಾಗಿ ಪತ್ತೆ ಆಗಿದ್ದಾರೆ. ಅವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

      ಸಿದ್ಧಾರ್ಥ ಅವರು ನಾಪತ್ತೆ ಆದಾಗಿನಿಂದಲೂ ಎಸ್‌.ಎಂ.ಕೃಷ್ಣ ಅವರ ನಿವಾಸಕ್ಕೆ ಗಣ್ಯರು ಬಂದು ಧೈರ್ಯ ಹೇಳುತ್ತಲಿದ್ದರು. ಇದೀಗ ಸಿದ್ಧಾರ್ಥ ಅವರು ಮೃತವಾಗಿರುವುದು ಖಚಿತವಾಗಿದ್ದು, ಬಹುತೇಕ ರಾಜಕೀಯ ಗಣ್ಯರು ಸಿದ್ಧಾರ್ಥ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

      ಸಿಎಂ ಯಡಿಯೂರಪ್ಪ ಅವರು ಸಿದ್ಧಾರ್ಥ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದು, 'ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರ ಅಳಿಯ ಹಾಗೂ 'ಕೆಫೆ ಕಾಫಿ ಡೇ' ಸಂಸ್ಥಾಪಕ ವಿ.ಜಿ. ಸಿದ್ಧಾರ್ಥ ಅವರ ನಿಧನ ತೀವ್ರ ಆಘಾತ ಹಾಗೂ ದುಃಖ ತಂದಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. "ಭಗವಂತನು ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ನೀಡಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ಸಿಗಲಿ." ಎಂದು ಟ್ವೀಟ್ ಮಾಡಿದ್ದಾರೆ.

      ದಾರುಣ ಸಾವಿನ ಬಗ್ಗೆ ತನಿಖೆ ಆಗಲಿ: ದೇವೇಗೌಡ

      ಮಾಜಿ ಪ್ರಧಾನಿ ದೇವೇಗೌಡ ಅವರು ಸಿದ್ಧಾರ್ಥ ಅವರ ಸಾವಿನ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿದ್ದು, 'ವಿ.ಜಿ. ಸಿದ್ಧಾರ್ಥ ಅವರ ಸಾವಿನ ವಿಷಯ ತಿಳಿದು ಆಘಾತವಾಗಿದೆ. ಸಿದ್ಧಾರ್ಥರವರದ್ದು ತುಂಬಾ ಸರಳ ವ್ಯಕ್ತಿತ್ವ. 35 ವರ್ಷಗಳಿಂದ ಅವರನ್ನು ನಾನು ನೋಡಿದ್ದೇನೆ. ಸಾವಿರಾರು ಜನರ ಸ್ವಾಭಿಮಾನದ ಬದುಕಿಗೆ ದಾರಿಯಾಗಿದ್ದರು. ಅವರ ಈ ದಾರುಣ ಸಾವಿನ ಬಗ್ಗೆ ಸರ್ಕಾರ ಸೂಕ್ತ ತನಿಖೆ ನಡೆಸಲಿ.' ಎಂದು ಮನವಿ ಮಾಡಿದ್ದಾರೆ.

      ಸಿದ್ಧಾರ್ಥ ಸಾವು ಸಿದ್ದರಾಮಯ್ಯ ಶಂಕೆ

      ಉದ್ಯಮಿ ವಿ.ಜಿ.ಸಿದ್ಧಾರ್ಥ ಅವರ ಅನಿರೀಕ್ಷಿತ ಸಾವಿನಿಂದ ಆಘಾತಕೀಡಾಗಿದ್ದೇನೆ. ತಮ್ಮ ಪಾಲಿಗೆ ಮಗನೇ ಆಗಿದ್ದ ಸಿದ್ಧಾರ್ಥ ಅವರ ಅಗಲಿಕೆಯಿಂದ ಎಸ್.ಎಂ.ಕೃಷ್ಣ ಮತ್ತು ಕುಟುಂಬ ವರ್ಗ ಅನುಭವಿಸುತ್ತಿರುವ ನೋವು-ಸಂಕಟಗಳನ್ನು ನಾನು ಅರ್ಥಮಾಡಿಕೊಳಬಲ್ಲೆ. ಅವರ ಕುಟುಂಬಕ್ಕೆ ನನ್ನ‌ ಸಂತಾಪಗಳು. ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಜೊತೆಗೆ ಸಿದ್ಧಾರ್ಥ ಅವರ ಸಾವಿನ ಬಗ್ಗೆ ಕೆಲವು ಅನುಮಾನಗಳನ್ನೂ ಎತ್ತಿರುವ ಅವರು, ಶೀಘ್ರ ತನಿಖೆಗೆ ಒತ್ತಾಯಿಸಿದ್ದಾರೆ.

      25 ವರ್ಷದಿಂದ ಸಿದ್ಧಾರ್ಥ ಅವರನ್ನು ಬಲ್ಲೆ: ಕುಮಾರಸ್ವಾಮಿ

      ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಿದ್ಧಾರ್ಥ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಿಡಿಸದ್ದಾರೆ. 'ಉದ್ಯಮಿ ಹಾಗೂ ಆತ್ಮೀಯ ಗೆಳೆಯ ಸಿದ್ಧಾರ್ಥ ಅವರ ನಿಧನದ ಸುದ್ದಿ ತಿಳಿದು ಆಘಾತಗೊಂಡಿದ್ದೇನೆ. ಕಳೆದ 25 ವರ್ಷಗಳ ಸ್ನೇಹಿತ ಸಿದ್ಧಾರ್ಥ ಅವರು ಕರ್ನಾಟಕದ ಕಾಫಿ ಉದ್ಯಮವನ್ನು ವಿಶ್ವಕ್ಕೆ ಪರಿಚಯಿಸಿದ್ದರು. ಸಹಸ್ರಾರು ನೌಕರರಿಗೆ ತಮ್ಮ ಸಂಸ್ಥೆಗಳಲ್ಲಿ ಅವಕಾಶ ಕಲ್ಪಿಸಿದ್ದರು. ಅವರ ನಿಧನದಿಂದ ಕರ್ನಾಟಕ ಶ್ರೇಷ್ಠ ಉದ್ಯಮಿಯೊಬ್ಬರನ್ನು ಕಳೆದುಕೊಂಡಿದೆ ಎಂದಿದ್ದಾರೆ.

      ಏನು ಹೇಳಬೇಕೋ ತಿಳಿಯುತ್ತಿಲ್ಲ: ಸದಾನಂದಗೌಡ

      ಅತ್ಯಂತ ಸಭ್ಯ, ಸುಸಂಸ್ಕೃತ ವ್ಯಕ್ತಿ ,ಕಾಫಿ ಕಿಂಗ್ ಎಂದೇ ಪ್ರಖ್ಯಾತ ರಾಗಿದ್ದ ಕೆಫೆ ಕಾಫಿ ಡೇ ಸಂಸ್ಥಾಪಕ ಯುವ ಉದ್ಯಮಿ ಚಿಕ್ಕಮಗಳೂರು ಮೂಲದ ಸಿದ್ದಾರ್ಥ ರವರ ಜೀವನ ಈ ರೀತಿ ಅಂತ್ಯವಾದದ್ದು ಆಘಾತಕರ. ನಂಬಲಾಸಾಧ್ಯ. ಏನು ಹೇಳಬೇಕು ತಿಳಿಯುತ್ತಿಲ್ಲ.ಇದನ್ನು ಎದುರಿಸುವ ಮನೋ ಶಕ್ತಿ ಅವರ ಕುಟುಂಬಕ್ಕೆ ಸಿಗಲೆಂದು ದೇವರಲ್ಲಿ ಪ್ರಾರ್ಥನೆ. ಎಂದು ಕೇಂದ್ರ ಸಚಿವ ಸದಾನಂದಗೌಡ ಟ್ವೀಟ್ ಮಾಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+