• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಮ ಮಂದಿರ ನಿರ್ಮಾಣ: ಮಾಜಿ ಸಿಎಂ ಕುಮಾರಸ್ವಾಮಿಗೆ ಎಚ್ಚರಿಕೆ ಕೊಟ್ಟ ವಿಎಚ್‌ಪಿ!

|
Google Oneindia Kannada News

ಬೆಂಗಳೂರು, ಫೆ. 16: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಕುರಿತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ವಿಶ್ವ ಹಿಂದೂ ಪರಿಷತ್ತು ತಿರುಗೇಟು ಕೊಟ್ಟಿದೆ. ಕುಮಾರಸ್ವಾಮಿ ಅವರು, ದೇಶಾದ್ಯಂತ ನಡೆಯುತ್ತಿರುವ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನದ ಕುರಿತಾಗಿ ಕುತೂಹಲಕಾರಿ ಹೇಳಿಕೆ ನೀಡಿದ್ದರು. ಕುಮಾಸ್ವಾಮಿ ಅವರ ಹೇಳಿಕೆ ಕುತೂಹಲದ ಜೊತೆಗೆ ಆತಂಕವನ್ನು ಸೃಷ್ಟಿ ಮಾಡುವಂತಿತ್ತು. ಅದು ಸಂಘ ಪರಿವಾರ ಸೇರಿದಂತೆ ಹಿಂದೂ ಸಂಘಟನೆಗಳ ಕಣ್ಣು ಕೆಂಪಗಾಗುವಂತೆ ಮಾಡಿದೆ.

ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನದ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ವಿವಾದಕ್ಕೀಡು ಮಾಡುವಂತಿತ್ತು. ರಾಮ ಮಂದಿರ ನಿರ್ಮಾಣದ ಬಳಿಕ ಲಕ್ಷಾಂತರ ಜನರ ಮಾರಣ ಹೋಮ ಆಗಬಹುದು ಎಂಬ ಅರ್ಥದಲ್ಲಿ ಕುಮಾರಸ್ವಾಮಿ ಅವರು ಹೇಳಿಕೆ ನೀಡಿದ್ದರು. ಕುಮಾರಸ್ವಾಮಿ ಅವರು ನೀಡಿದ್ದ ಹೇಳಿಕೆ ಏನು? ಅದಕ್ಕೆ ವಿಶ್ವ ಹಿಂದೂ ಪರಿಷತ್ ಕೊಟ್ಟಿರುವ ಪ್ರತ್ಯುತ್ತರ ಏನು? ಮುಂದಿದೆ ಸಂಪೂರ್ಣ ಮಾಹಿತಿ!

ಶ್ರೀರಾಮನ ಆದರ್ಶ ಪಾಲಿಸಿ

ಶ್ರೀರಾಮನ ಆದರ್ಶ ಪಾಲಿಸಿ

ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನದ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ಬಾಲಿಶ ಹಾಗೂ ಬೇಜವಾಬ್ದಾರಿಯಿಂದ ಕೂಡಿದೆ, ಅವರ ಹೇಳಿಕೆಯನ್ನು ವಿಎಚ್‌ಪಿ ತೀವ್ರವಾಗಿ ಖಂಡಿಸುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷೀನ ಸಂಘಟನಾ ಕಾರ್ಯದರ್ಶಿ ಬಸವರಾಜು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಯೋಧ್ಯೆ ರಾಮಮಂದಿರ ದೇಣಿಗೆ ಸಂಗ್ರಹ: ಎಚ್ಡಿಕೆ ಆರೋಪ ನಿಜವಾದರೆ ಎಂತಹ ದುರಂತ!ಅಯೋಧ್ಯೆ ರಾಮಮಂದಿರ ದೇಣಿಗೆ ಸಂಗ್ರಹ: ಎಚ್ಡಿಕೆ ಆರೋಪ ನಿಜವಾದರೆ ಎಂತಹ ದುರಂತ!

ದೇಶಾದ್ಯಂತ ಇಡೀ ಸಮಾಜ ಧನಾತ್ಮಕವಾಗಿ ನಿಧಿ ಸಮರ್ಪಣೆ ಮಾಡುತ್ತಿದೆ. ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಿಸಲು ಸಹಾಯವಾಗುವಂತೆ ಜನಸಾಮಾನ್ಯರು ದೇಣಿಗೆ ಕೊಡುತ್ತಿದ್ದಾರೆ. ಈ ಸಂದರ್ಭಧಲ್ಲಿ ಮಾಜಿ ಮುಖ್ಯಮಂತ್ರಿಯೊಬ್ಬರಿಂದ ಇಂತಹ ಬೇಜವಾಬ್ದಾರಿ ಹೇಳಿಕೆ ಸಲ್ಲದು. ವಿಹಿಂಪ ಸೇರಿದಂತೆ ಹಲವು ಸಂಘಟನೆಗಳ ಕಾರ್ಯಕರ್ತರು ಮನೆ ಮನೆಗೆ ತೆರಳಿ ನಿಧಿಯನ್ನು ಸಂಗ್ರಹಿಸುವಾಗ ಇಂತಿಷ್ಟೇ ಹಣವನ್ನು ದಾನ ಮಾಡಬೇಕೆಂದು ಕೇಳುವುದಿಲ್ಲ.

ಬೇಜವಾಬ್ದಾರಿ ಮಾಜಿ ಸಿಎಂ!

ಬೇಜವಾಬ್ದಾರಿ ಮಾಜಿ ಸಿಎಂ!

ಪ್ರಭು ಶ್ರೀರಾಮನ ಆದರ್ಶವನ್ನು ಜೀವನದಲ್ಲಿ ಪಾಲಿಸಬೇಕು, ಹಾಗೂ ಈ ದೇಶದ ಅಸ್ಮಿತೆಯಾದ ಶ್ರೀರಾಮನ ಮಂದಿರಕ್ಕೆ ವಿವಿಧ ಸ್ಥರದ ಹಲವಾರು ಜನಸಾಮಾನ್ಯರು ತಮ್ಮ ಕೊಡುಗೆ ಸಮರ್ಪಣೆ ಮಾಡುತ್ತಿರುವುದನ್ನು ಗಮನಿಸಬೇಕು.

ರಾಜ್ಯದ ಮುಖ್ಯಮಂತ್ರಿಯಾಗಿದ್ದವರು ಇಂತಹ ಬೇಜವಾಬ್ದಾರಿ ಹೇಳಿಕೆಯನ್ನು ವಿಹಿಂಪ ಖಂಡಿಸುತ್ತದೆ, ಹಾಗೂ ಆರೆಸ್ಸೆಸ್ ಅಂತಹ ಸಂಘಟನೆಯ ಬಗ್ಗೆ, ವೃಥಾ ಆರೋಪ ಮಾಡುವುದು ಯಾವುದೇ ಶೋಭೆ ತರುವುದಿಲ್ಲ ಎಂದು ಹೇಳಿದ್ದಾರೆ. ಸಾರ್ವಜನಿಕ ವಲಯದಲ್ಲಿ ಸೊರಗುತ್ತಿರುವ ಸಂವಾದ ಹಾಗೂ ಅದರಲ್ಲಿ ನೇರವಾಗಿ ಭಾಗಿಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ನಡೆಗೆ ವಿಹಿಂಪ ಆಕ್ಷೇಪ ವ್ಯಕ್ತಪಡಿಸುತ್ತದೆ ಎಂದು ಬಸವರಾಜು ಹೇಳಿದ್ದಾರೆ.

ತಿಳಿದುಕೊಂಡು ಮಾತನಾಡಿ!

ತಿಳಿದುಕೊಂಡು ಮಾತನಾಡಿ!

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿಕೆ ಕೊಡುವ ಮೊದಲು ಅಭಿಯಾನದ ಬಗ್ಗೆ ತಿಳಿದುಕೊಳ್ಳಬೇಕಿತ್ತು. ಹಾಗೆ ಹೇಳಿಕೆ ಕೊಟ್ಟಿರುವುದಕ್ಕೆ ಅವರ ಬಳಿ ಯಾವುದೇ ಪುರಾವೆಗಳು ಇಲ್ಲ. ಉನ್ನತ ಸ್ಥಾನದಲ್ಲಿದ್ದವರು ಈ ರೀತಿಯ ಬೇಜವಾಬ್ದಾರಿ ಹೇಳಿಕೆ ಕೊಟ್ಟಿರುವುದನ್ನು ವಿಶ್ವ ಹಿಂದೂ ಪರಿಷದ್ ಗಂಭೀರವಾಗಿ ಪರಿಗಣಿಸಿದೆ. ದೇಶ ಭಕ್ತ ಸಂಘಟನೆ ರಾಷ್ಟ್ರೀಯ ಸ್ವಯಂ ಸೇವಕ ಬಗ್ಗೆ ಹಗುರವಾಗಿ ಮಾತನಾಡಿರುವುದು ಖಂಡನೀಯ. ಒಬ್ಬ ಮಾಜಿ ಮುಖ್ಯಮಂತ್ರಿಗಳಿಂದ ಈ ರೀತಿಯ ಬೇಜವಾಬ್ದಾರಿ ಹೇಳಿಕೆಗಳನ್ನು ನಿರೀಕ್ಷಿಸಿರಲಿಲ್ಲ. ಮುಂದೆ ಎಚ್ಚರಿಕೆಯಿಂದ ಹೇಳಿಕೆ ನೀಡಲಿ ಎಂದು ವಿಎಚ್‌ಪಿ ಪ್ರಮುಖರು ಎಚ್ಚರಿಕೆ ನೀಡಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು?

ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು?

ರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಯಾತಕ್ಕೆ ಹೀಗೆ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಂಶಯ ವ್ಯಕ್ತಪಡಿಸಿದ್ದರು. ಜೊತೆಗೆ ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುತ್ತದೆ ಗೊತ್ತಿಲ್ಲ ಎಂದಿದ್ದರು.

ಜರ್ಮನಿಯಲ್ಲಿ ನಾಜಿ ಹುಟ್ಟಿದ ಕಾಲದಲ್ಲೇ ಆರ್‌ಎಸ್‌ಎಸ್‌ ಹುಟ್ಟಿದೆ ಎಂದು ಇತಿಹಾಸ ತಜ್ಞರು ಹೇಳುತ್ತಾರೆ. ಆರ್‌ಎಸ್‌ಎಸ್‌ ಕೂಡ ಆ ನೀತಿಗಳನ್ನೇ ಜಾರಿ ಮಾಡಿದರೆ ಮುಂದೇನಾಗುತ್ತದೆಂಬ ಆತಂಕವಿದೆ. ದೇಶದಲ್ಲಿ ಮೂಲಭೂತ ಹಕ್ಕನ್ನೆ ಕಸಿಯಲಾಗುತ್ತಿದೆ. ಸ್ವತಂತ್ರವಾಗಿ ಭಾವನೆಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲದ ಸ್ಥಿತಿ ಇದೆ. ಇದು ಅಘೋಷಿತ ತುರ್ತು ಪರಿಸ್ಥಿತಿ.

ಯಾರೊಬ್ಬರೂ ತಮ್ಮ ಭಾವನೆಗಳನ್ನು ಹೇಳಿಕೊಳ್ಳಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಮಾಧ್ಯಮಗಳು ಸರ್ಕಾರದ ಭಾವನೆಗಳನ್ನು ಎತ್ತಿಹಿಡಿದರೆ ಯಾರಿಗೆ ಏನಾಗುತ್ತದೆಯೋ ಗೊತ್ತಿಲ್ಲ. ಇನ್ನು ಜನಸಾಮಾನ್ಯರ ಪರಿಸ್ಥಿತಿ ಏನಾಗಬಹುದು? ಈ ವಾತಾವರಣವನ್ನು ನೋಡಿದಾಗ ದೇಶದಲ್ಲಿ ಏನು ಬೇಕಾದರೂ ಆಗಬಹುದು ಎಂಬುದಂತೂ ನಿಚ್ಚಳವಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದರು.

English summary
VHP Slams 'irresponsible' Kumaraswamy Alleging 'Nazi Tactics' In Ram Mandir Fundraising Vishwa Hindu Parishad slams irresponsible Former CM H D Kumaraswamy Alleging Nazi Tactics in Sri Ram Mandir Nidhi Samarpana Abhiyan. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X