CT Ravi vs Laxmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್‌ ಕೇಸ್‌ನಲ್ಲಿ ಸಿಐಡಿಗೆ ಸಿಕ್ತು ಒರಿಜಿನಲ್‌ ವಿಡಿಯೋ: ಮತ್ತೆ ಅರೆಸ್ಟ್‌ ಆಗ

ಬೆಂಗಳೂರು,ಜನವರಿ17: ಬೆಳಗಾವಿ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿಟಿ ರವಿ ಅವಾಚ್ಯ ಶಬ್ಧದಿಂದ ನಿಂದಿಸಿದ ಪ್ರಕರಣ ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿತ್ತು. ಇದೀಗ ಈ ಪ್ರಕರಣಕ್ಕೆ ಒಂದು ತಿಂಗಳ ಬಳಿಕ ರೋಚಕ ಟ್ವಿಸ್ಟ್‌ ಸಿಕ್ಕಿದ್ದು, ಬಿಜೆಪಿ ನಾಯಕ ಸಿಟಿ ರವಿಗೆ ದೊಡ್ಡ ಸಂಕಷ್ಟ ಎದುರಾಗಿದೆ.

ಬೆಳಗಾವಿಯ ಸುವರ್ಣಸೌಧದ ಪರಿಷತ್‌ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸಿಐಡಿ ತನಿಖೆ ವೇಗ ಪಡೆದುಕೊಂಡಿದೆ. ವಿಧಾನ ಪರಿಷತ್‌ನ ಅಸಲಿ ವಿಡಿಯೋ ಇದೀಗ ಸಿಐಡಿ ತಂಡಕ್ಕೆ ಲಭ್ಯವಾಗಿದೆ. ಇದರಲ್ಲಿ ಸಿಟಿ ರವಿ ಅವರು ಏಳು ಬಾರಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ನಿಂದಿಸಿದ್ದಾರೆ ಎಂಬುದು ಬಹುತೇಕ ಖಚಿತವಾಗಿದೆ. ಈ ವಿಡಿಯೋ ಸಾಕ್ಷ್ಯ ಸಿಟಿ ರವಿಗೆ ದೊಡ್ಡ ಸಂಕಷ್ಟಕ್ಕೆ ಸಿಲುಕಿದ್ದು, ಯಾವುದೇ ಕ್ಷಣದಲ್ಲಾದರೂ ಸಿಟಿ ರವಿ ಅವರನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆಯಬಹುದು ಎಂದು ಹೇಳಲಾಗುತ್ತಿದೆ.

Video record Confirms CT Ravi used Unparliamentary words against Lakshmi Hebbalkar

ಲಕ್ಷ್ಮೀ ಹೆಬ್ಬಾಳ್ಕರ್‌ ನೇರವಾಗಿಯೇ ನನ್ನನ್ನು ಸಿಟಿ ರವಿ ನಿಂದಿಸಿದ್ದಾರೆ ಎಂದಿದ್ದರು. ಆದರೆ, ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿಟಿ ರವಿ ನಾನು ನಿಂದಿಸಿಲ್ಲ, ನನ್ನ ಪದವನ್ನು ತಪ್ಪಾಗಿ ಕೇಳಿಸಿಕೊಂಡಿದ್ದಾರೆ ಎಂದಿದ್ದರು. ಪರಿಷತ್‌ನ ಯೂಟ್ಯೂಬ್‌ ಲೈವ್‌ನಲ್ಲಿಯೂ ಕೂಡ ಘಟನೆ ನಡೆದ ಭಾಗ ಮ್ಯೂಟ್‌ ಆಗಿತ್ತು. ಅದಲ್ಲದೇ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಕೂಡ ಸಿಟಿ ರವಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ನಿಂದಿಸಿರುವುದಕ್ಕೆ ಯಾವುದೇ ಸಾಕ್ಷಿಗಳಿಲ್ಲ, ಖಾಸಗಿ ವಾಹಿನಿಗಳಲ್ಲಿ ಬಂದ ವಿಡಿಯೋವನ್ನು ಸಾಕ್ಷಿಯಾಗಿ ಪರಿಗಣಿಸಲು ಆಗಲ್ಲ ಎಂದಿದ್ದರು.

ಇದೀಗ ಈ ಪ್ರಕರಣಕ್ಕೆ ಡೆಡ್‌ ಎಂಡ್‌ ಮಾಡಿತ್ತು. ಆದರೆ, ಈಗ ಸಿಐಡಿಗೆ ಸದನದಲ್ಲಿನ ಸರ್ಕಾರಿ ಟಿವಿಯಲ್ಲಿನ ವಿಡಿಯೋವೇ ಸಿಕ್ಕಿರುವುದು ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಂತಾಗಿದೆ. ಸಿಟಿ ರವಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಘಟನೆಯ ಕುರಿತು ವಿಡಿಯೋ ಆಡಿಯೋ ದಾಖಲೆ ನೀಡುವಂತೆ ರಾಜ್ಯ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆಗೆ ಸಿಐಡಿ ಮನವಿ ಮಾಡಿತ್ತು. 4 ಗಂಟೆ ವಿಡಿಯೋವನ್ನು ಇಲಾಖೆಯಿಂದ ನೀಡಲಾಗಿದೆ. ಇದರಲ್ಲಿ ಸಿಟಿ ರವಿ ಲಕ್ಷ್ಮೀ ಹೆಬ್ಬಾಳ್ಕರ್‌ ಅವರನ್ನು 7 ಬಾರಿ ಅವಾಚ್ಯವಾಗಿ ನಿಂದಿಸಿರುವುದು ರೆಕಾರ್ಡ್‌ ಆಗಿದೆ ಎಂದು ತಿಳಿದುಬಂದಿದೆ.

ಇನ್ನೂ ಈ ಪ್ರಕರಣದಲ್ಲಿ ಇನ್ನಷ್ಟು ಖಚಿತಪಡಿಸಿಕೊಳ್ಳಲು ಸಿಐಡಿ ಮುಂದಾಗಿದ್ದು, ವಿಡಿಯೋವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿದೆ. ಆ ವಿಡಿಯೋದಲ್ಲಿ ಕೇಳಿ ಬರುವ ದನಿ ಸಿಟಿ ರವಿ ಅವರದ್ದು, ಹೌದೋ, ಅಲ್ಲವೋ ಎಂಬುದನ್ನು ಖಚಿತಪಡಿಸಿಕೊಂಡ ಬಳಿಕ ಕಾನೂನು ಕ್ರಮಗಳನ್ನು ಮುಂದುವರಿಸಲು ಸಿಐಡಿ ಪೊಲೀಸರು ನಿರ್ಧರಿಸಿದ್ದಾರೆ.

ಕಾಂಗ್ರೆಸ್‌ನ ಇಬ್ಬರು ವಿಧಾನ ಪರಿಷತ್‌ ಸದಸ್ಯರು ಗುರುವಾರ ಸಿಐಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಉಮಾಶ್ರೀ ಮತ್ತು ನಾಗರಾಜ್‌ ಯಾದವ್‌ ಅವರು ಸಿಐಡಿ ಅಧಿಕಾರಿಗಳಿಗೆ ಪ್ರಕರಣ ಸಂಬಂಧ ವಿಸ್ತೃತ ಮಾಹಿತಿ ನೀಡಿ, ರವಿ ಅವರು ಕಲಾಪದ ವೇಳೆ ಅಶ್ಲೀಲ ಪದ ಬಳಸಿ ಲಕ್ಷ್ಮೀ ಹೆಬ್ಬಾಳ್ಕರ್‌ ಅವರನ್ನು ನಿಂದಿಸಿದ್ದು ನಿಜವೆಂದು ಹೇಳಿಕೆ ದಾಖಲಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+