ಬಿಜೆಪಿ ಶಾಸಕ ಆನಂದ್ ಸಿಂಗ್ ರಾಜೀನಾಮೆ
ಬೆಂಗಳೂರು, ಏ. 13 : ಅಚ್ಚರಿಯ ಬೆಳವಣಿಗೆಯೊಂದರಲ್ಲಿ ವಿಜಯನಗರ (ಬಳ್ಳಾರಿ) ಕ್ಷೇತ್ರದ ಬಿಜೆಪಿ ಶಾಸಕ ಆನಂದ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ಗುರುವಾರ ಲೋಕಾಯುಕ್ತ ವಿಶೇಷ ತನಿಖಾ ತಂಡ ಆನಂದ್ ಸಿಂಗ್ ಅವರನ್ನು ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಬಂಧಿಸಿತ್ತು.
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆನಂದ್ ಸಿಂಗ್ ಕಾರಾಗೃಹದ ಎಡಿಜಿಪಿ ಅವರ ಮೂಲಕ ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಸೋಮವಾರ ತಮ್ಮ ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾರೆ. ಸಮಾಜ ಸೇವೆ ಮಾಡಲು ಸಾಧ್ಯವಾಗುತ್ತಿಲ್ಲ, ಆದ್ದರಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ. [ಶಾಸಕ ಆನಂದ್ ಸಿಂಗ್ ಬಂಧನ]
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಆನಂದ್ ಸಿಂಗ್ ಅವರನ್ನು 2013ರ ಅಕ್ಟೋಬರ್‌ನಲ್ಲಿ ಬಂಧಿಸಿತ್ತು. 2015ರ ಜನವರಿಯಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ಆನಂದ್ ಸಿಂಗ್ ಅವರಿಗೆ ಜಾಮೀನು ನೀಡಿತ್ತು, ಅವರು ಜೈಲಿನಿಂದ ಬಿಡುಗಡೆಯಾಗಿದ್ದರು. [ಆನಂದ್ ಸಿಂಗ್ ಗೆ ಜಾಮೀನು]
ಶಾಸಕನಾಗಿ ನಾನು ಜನರ ಜೊತೆ ಇದ್ದು ಕೆಲಸ ಮಾಡಬೇಕು. ಜೈಲಿನಲ್ಲಿರುವುದರಿಂದ ನನ್ನ ಕ್ಷೇತ್ರದ ಜನರಿಗೆ ಕೆಲಸಗಳನ್ನು ಮಾಡಿಕೊಡಲು ಆಗುತ್ತಿಲ್ಲ. ಆದ್ದರಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ವಿವರಣೆ ನೀಡಿದ್ದಾರೆ.

ಜೈಲಿನಿಂದಲೇ ರಾಜೀನಾಮೆ ಸಲ್ಲಿಕೆ
ವಿಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಆನಂದ್ ಸಿಂಗ್ ತಮ್ಮ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ. ಕಳೆದ ಗುರುವಾರ ಲೋಕಾಯುಕ್ತ ವಿಶೇಷ ತನಿಖಾ ತಂಡ ಆನಂದ್ ಸಿಂಗ್ ಅವರನ್ನು ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿತ್ತು. ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಅಲ್ಲಿಂದಲೇ ಸ್ಪೀಕರ್‌ಗೆ ರಾಜೀನಾಮೆ ರವಾನಿಸಿದ್ದಾರೆ.

ಸಿಬಿಐ ಅಧಿಕಾರಿಗಳು ಬಂಧಿಸಿದ್ದರು
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಆನಂದ್ ಸಿಂಗ್ ಅವರನ್ನು 2013ರ ಅಕ್ಟೋಬರ್‌ನಲ್ಲಿ ಸಿಬಿಐ ಬಂಧಿಸಿತ್ತು. ವಿದೇಶದಿಂದ ಆಗಮಿಸುತ್ತಿದ್ದ ಅವರನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಅವರಿಗೆ 2015ರ ಜನವರಿಯಲ್ಲಿ ಷರತ್ತುಬದ್ಧ ಜಾಮೀನು ನೀಡಿತ್ತು, ಅವರು ಜೈಲಿನಿಂದ ಬಿಡುಗಡೆಯಾಗಿದ್ದರು.

ಲೋಕಾಯುಕ್ತರಿಂದ ಬಂಧನ
ಲೋಕಾಯುಕ್ತ ವಿಶೇಷ ತನಿಖಾ ತಂಡ ಕಳೆದ ಗುರುವಾರ ಆನಂದ್ ಸಿಂಗ್ ಅವರನ್ನು ಪುನಃ ಬಂಧಿಸಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಅವರು ಅಲ್ಲಿಂದಲೇ ರಾಜೀನಾಮೆ ಪತ್ರವನ್ನು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಕಳುಹಿಸಿದ್ದು, ರಾಜೀನಾಮೆಯನ್ನು ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ. ಸಮಾಜ ಸೇವೆ ಮಾಡಲು ಸಾಧ್ಯವಾಗದ ಹಿನ್ನಲೆಯಲ್ಲಿ ರಾಜೀನಾಮೆ ನೀಡುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ಬಿಜೆಪಿ ಬಿಡುತ್ತೇನೆ ಎಂದು ಹೇಳಿದ್ದರು
ಆನಂದ್ ಸಿಂಗ್ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಂಪುಟದಲ್ಲಿ ಪವಾಸೋದ್ಯಮ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾಗ ಬಿಜೆಪಿ ತೊರೆದು 2013ರ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದರು. ಆದರೆ, ಬಿಜೆಪಿ ಟಿಕೆಟ್ ಪಡೆದು ಚುನಾವಣೆಗೆ ಸ್ಪರ್ಧಿಸಿ ವಿಜಯನಗರ ಕ್ಷೇತ್ರದಿಂದ 2ನೇ ಬಾರಿ ಗೆಲುವು ಸಾಧಿಸಿದ್ದರು.

ಆನಂದ್ ಸಿಂಗ್ ಮೇಲಿರುವ ಆರೋಪಗಳೇನು?
ಆನಂದ್ ಸಿಂಗ್ ವೈಷ್ಣವಿ ಮಿನರಲ್ಸ್ ಮೂಲಕ ಅಕ್ರಮವಾಗಿ ಬೇಲೇಕೇರಿ ಬಂದರಿನಿಂದ ಅದಿರು ಸಾಗಣೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಜನವರಿ 2009 ರಿಂದ ಮೇ 2010ರ ಅವಧಿಯಲ್ಲಿ ಬೇಲೇಕೇರಿ ಬಂದರಿನಿಂದ ಮುಖ್ಯವಾಗಿ ಚೀನಾ, ಸಿಂಗಪುರ ಸೇರಿದಂತೆ ವಿದೇಶಕ್ಕೆ ಕಬ್ಬಿಣದ ಅದಿರನ್ನು ಸಾಗಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು ಎಂಬುದು ಆರೋಪ.












Click it and Unblock the Notifications