ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಿಜಯ ಭಾಸ್ಕರ್‌ ನೇಮಕ

By Nayana
|
Google Oneindia Kannada News

ಬೆಂಗಳೂರು, ಜೂನ್‌ 30: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಟಿ.ಎಂ ವಿಜಯ ಭಾಸ್ಕರ್‌ ನೇಮಕಕೊಂಡಿದ್ದಾರೆ. ರಾಜ್ಯ ಸರ್ಕಾರ ವಿಜಯ ಭಾಸ್ಕರ್‌ ಅವರನ್ನು ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಕೆ. ರತ್ನಪ್ರಭಾ ಇಂದು ನಿವೃತ್ತಿ ಹೊಂದಿದ್ದಾರೆ. ಇನ್ನು ಟಿ.ಎಂ. ವಿಜಯಭಾಸ್ಕರ್‌ ಅವರು ಅಧಿಕಾರ ಸ್ವೀಕಾರ ಮಾಡಬೇಕಿದೆ. ವಿಜಯ್ ಭಾಸ್ಕರ್‌ ಅವರು1983ರ ಕೇಡರ್‌ ಐಎಎಸ್‌ ಅಧಿಕಾರಿಯಾಗಿದ್ದರು. ಬಿಬಿಎಂಪಿಯ ಆಯುಕ್ತರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.

ವಿಜಯ್ ಭಾಸ್ಕರ್ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ? ವಿಜಯ್ ಭಾಸ್ಕರ್ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ?

ಇನ್ನು ರತ್ನಪ್ರಭಾ ಮುಂದುವರಿಕೆಗೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ ಬರೆದಿದ್ದು, ಆದ್ರೆ ಕೇಂದ್ರದಿಂದ ಇದುವರೆಗೂ ಯಾವುದೇ ಉತ್ತರ ಬಂದಿಲ್ಲ. ಈ ಹಿನ್ನೆಲೆಯಲ್ಲಿ ವಿಜಯ ಭಾಸ್ಕರ್ ನೇಮಕ ಮಾಡಲಾಗಿದೆ. 2017ರ ನವೆಂಬರ್‌ನಲ್ಲಿ 1981ನೇ ಬ್ಯಾಚ್ ಐಎಎಸ್ ಅಧಿಕಾರಿ ಕೆ.ರತ್ನಪ್ರಭಾ ಅವರನ್ನು ಮುಖ್ಯಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು. ಆಗಲೇ ವಿಜಯಭಾಸ್ಕರ್ ಅವರ ಹೆಸರು ಮುಖ್ಯಕಾರ್ಯದರ್ಶಿ ಹುದ್ದೆಗೆ ಕೇಳಿಬಂದಿತ್ತು.

vijay bhaskar is Karnataka new CS

ಗುರುವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಅರ್ಹರನ್ನು ನೇಮಕ ಮಾಡಲು ಮುಖ್ಯಮಂತ್ರಿಗಳಿಗೆ ಪರಮಾಧಿಕಾರ ನೀಡಲಾಗಿತ್ತು. ಕೇಂದ್ರ ಸರ್ಕಾರ ಕೆ.ರತ್ನಪ್ರಭಾ ಅವರ ಸೇವಾವಧಿಯನ್ನು ವಿಸ್ತರಣೆ ಮಾಡಲು ಅನುಮತಿ ನೀಡಿಲ್ಲ ಎಂದು ತಿಳಿದುಬಂದಿದೆ. ಆದ್ದರಿಂದ, ಮುಂದಿನ ಮುಖ್ಯ ಕಾರ್ಯದರ್ಶಿಯಾರಾಗಲಿದ್ದಾರೆ? ಎಂಬುದು ಕುತೂಹಲಕ್ಕೆ ತೆರೆ ಬಿದ್ದಿದೆ.

English summary
Senior IAS officer TM Vijaybhaskar has been oppointed as new chief secretary of karnataka. He is serve as chief secretary upto end of 2020 as he will be longest CS of the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X