ಸಚಿವ ಎಂ.ಕೃಷ್ಣಪ್ಪ ಸಂಕ್ಷಿಪ್ತ ಪರಿಚಯ

By: ಒನ್ ಇಂಡಿಯಾ ಪ್ರತಿನಿಧಿ
Subscribe to Oneindia Kannada

ಬೆಂಗಳೂರು, ಸೆಪ್ಟೆಂಬರ್ 06 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟ ವಿಸ್ತರಣೆ ಮಾಡಿದ್ದಾರೆ. ಬೆಂಗಳೂರಿನ ವಿಜಯನಗರ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ಅವರು ಸಂಪುಟ ದರ್ಜೆ ಸಚಿವರಾಗಿ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ.

ಹಿಂದಿನ ಬಾರಿ ಸಂಪುಟ ಪುನಾರಚನೆಗೊಂಡಾಗ ಎಂ.ಕೃಷ್ಣಪ್ಪ ಅವರು ಸಂಪುಟ ಸೇರಬೇಕಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಅವರಿಗೆ ಸಚಿವರಾಗುವ ಅವಕಾಶ ಕೈತಪ್ಪಿತ್ತು. ಆದರೆ, ಈ ಬಾರಿ ಯಾವ ಸುಳಿವೂ ನೀಡದೆ ಸಿದ್ದರಾಮಯ್ಯ ಸಂಪುಟ ವಿಸ್ತರಣೆ ಮಾಡಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ.[ಸಚಿವರಾಗಿ ವಿಜಯನಗರದ ಶಾಸಕ ಎಂ ಕೃಷ್ಣಪ್ಪ ಪ್ರಮಾಣ]

Vijayanagar MLA M.Krishnappa profile

ಒಕ್ಕಲಿಗ ಸಮುದಾಯಕ್ಕೆ ಸೇರಿದ ಎಂ.ಕೃಷ್ಣಪ್ಪ ಅವರು ರಿಯಲ್ ಎಸ್ಟೇಟ್ ಉದ್ಯಮಿ. ನಗರದ ಹಲವು ಬಡಾವಣೆಗಳನ್ನು ನಿರ್ಮಾಣ ಮಾಡಿರುವ ಅವರು ಲೇಔಟ್‌ ಕೃಷ್ಣಪ್ಪ ಎಂದೂ ಕರೆಯಲಾಗುತ್ತದೆ. ಒಂದು ಬಾರಿ ವಿಧಾನಪರಿಷತ್ ಸದಸ್ಯ ಹಾಗೂ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಕೃಷ್ಣಪ್ಪ ಅವರು ಮೊದಲ ಬಾರಿಗೆ ಸಚಿವರಾಗಿದ್ದಾರೆ. ಎಂ.ಕೃಷ್ಣಪ್ಪ ಅವರ ಸಂಕ್ಷಿಪ್ತ ಪರಿಚಯ ಇಲ್ಲಿದೆ...

* ಎಂ.ಕೃಷ್ಣಪ್ಪ ಅವರು ಬಿಎಸ್ಸಿ ಪದವೀಧರರು
* 2000 ದಿಂದ 2006ರ ತನಕ ವಿಧಾನಪರಿಷತ್ ಸದಸ್ಯರಾಗಿದ್ದರು
* 2008ರಲ್ಲಿ ವಿಜಯನಗರ ಕ್ಷೇತ್ರದಿಂದ ಸ್ಪರ್ಧಿಸಿ ಅವರು ಶಾಸಕರಾಗಿ ಆಯ್ಕೆಯಾಗಿದ್ದರು
* 2013ರಲ್ಲಿ ಪುನಃ ಅದೇ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದಾರೆ
* 2008ರಿಂದ 2013ರ ತನಕ ಕೃಷ್ಣಪ್ಪ ಅವರು ಕಾಂಗ್ರೆಸ್ ಪಕ್ಷದ ಖಜಾಂಚಿಯಾಗಿದ್ದರು
* 2004ರಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು
* ಎಂ.ಕೃಷ್ಣಪ್ಪ ಅವರ ಪುತ್ರ ಪ್ರಿಯಕೃಷ್ಣ ಅವರು ಗೋವಿಂದರಾಜನಗರ ಕ್ಷೇತ್ರದ ಶಾಸಕರು

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Bengaluru Vijayanagar MLA M.Krishnappa sworn in as a cabinet minister in the CM Siddaramaiah government on Monday. Here are the brief profile of M.Krishnappa.
Please Wait while comments are loading...