SSLC ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆ 27 ಕುಸಿತ: DDPI, BEO ಅಮಾನತು ಮಾಡಿ ಸಿಎಂ ಆದೇಶ
ವಿಜಯನಗರ, ಜೂನ್ 22: ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆ ಕುಸಿತವಾಗಿದೆ. ಹಾಗಾಗಿ ಡಿಡಿಪಿಐ, ಬಿಇಒ ಅಮಾನತು ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಜಿಲ್ಲಾ ಮಟ್ಟದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಯ ನಂತರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್.ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ 10 ನೇ ಸ್ಥಾನದಲ್ಲಿದ್ದ ಜಿಲ್ಲೆ 27 ನೇ ಸ್ಥಾನಕ್ಕೆ ಕುಸಿದಿದೆ. ಪ್ರಾಥಮಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಮಾತನಾಡಿದ್ದು ಪರೀಕ್ಷಾ ಅಕ್ರಮವಾಗಿರುವುದರಿಂದ ಇಷ್ಟೊಂದು ವ್ಯಾತ್ಯಾಸವಾಗಲು ಕಾರಣ ಎಂದು ಹೇಳಿದರು.

ಈ ಕಾರಣಕ್ಕಾಗಿ ಡಿಡಿಪಿಐ ಅವರನ್ನು ಅಮಾನತು ಗೊಳಿಸಲು ಹಾಗೂ ಬಿಇಒ ಗಳಿಗೆ ನೋಟೀಸು ಜಾರಿಮಾಡಲು ಸೂಚಿಸಲಾಗಿದೆ ಎಂದರು. ಶಿಕ್ಷಕರೂ ಕೂಡ ಇದಕ್ಕೆ ಕಾರಣಕರ್ತರು. ಜಿಲ್ಲಾ ಪಂಚಾಯತಿ ಸಿಇಒ ಕೂಡ ಇದಕ್ಕೆ ಜವಾಬ್ದಾರರಾಗಿರುವುದರಿಂದ ಅವರಿಗೂ ನೋಟೀಸು ಕೊಡುವಂತೆ ಸೂಚಿಸಲಾಗಿದೆ ಎಂದರು.
ಗ್ರಾಮೀಣಾಭಿವೃದ್ಧಿ, ಶಿಕ್ಷಣ, ಕೃಷಿ ಇಲಾಖೆಗಳ ಪರಿಶೀಲನೆ ನಡೆಸಲಾಗಿದೆ. ಬರಗಾಲಕ್ಕೆ ಒದಗಿಸಿದ್ದ ಇನ್ ಪುಟ್ ಸಬಸಿಡಿಯಲ್ಲಿ ಶೇ 100 ರಷ್ಟು ಸಾಧನೆಯನ್ನು ವಿಜಯನಗರ ಜಿಲ್ಲೆ ಮಾಡಿದೆ. ಎಲ್ಲ ರೈತರಿಗೂ ಸರ್ಕಾರದಿಮದ ನೀಡಲಾಗುವ ಸೌಲಭ್ಯವನ್ನುತಲುಪಿಸುವ ಕೆಲಸ ಮಾಡಿದ್ದಾರೆ. ಸುಮಾರು 130 ಕೋಟಿ ರೂ.ಗಳನ್ನು ತಲುಪಿಸಿದ್ದಾರೆ. ಸಾಮಾನ್ಯ ಜನರನ್ನು ಕಚೇರಿಗಳಿಗೆ ಅಲೆಸುವ ಕೆಲಸ ಮಾಡಬೇಡಿ ಎಂದು ಸ್ಪಷ್ಟ ಸೂಚನೆ ನೀಡಲಾಗಿದೆ. ವಿಳಂಬ ಭ್ರಷ್ಟಾಚಾರಕ್ಕೆ ಸಮವಾಗಿರುವುದರಿಂದ ವಿಳಂಬ ಮಾಡದೇ ಕಾಲಮಿತಿಯೊಳಗೆ ಕೆಲಸಗಳನ್ನು ಮುಗಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದರು.
ಅಂಗನವಾಡಿ, ಆಸ್ಪತ್ರೆ, ಶಾಲೆ ಹಾಸ್ಟಲ್‍ಗಳಿಗೆ, ಸಶ್ಮಾನಗಳಿಗೆ ನೀಡಲಾಗಿರುವ ಜಮೀನನ್ನು ಬಾಕಿಇಡದೇ ತಲುಪಿಸೇಕೆಂದು ಸೂಚಿಸಲಾಗಿದೆ. ಪ್ರತಿ ತಾಲ್ಲೂಕು ಕಚೇರಿಗಳಲ್ಲಿ ತಾಲ್ಲೂಕಿನಲ್ಲಿನ ಸರ್ಕಾರಿ ಜಮೀನನ್ನು ಗುರುತಿಸಿ ಪ್ರದರ್ಶಿಸಬೇಕು. ಸರ್ಕಾರಿ ಜಮೀನು ಅತಿಕ್ರಮಣಕ್ಕೊಳಗಾಗಿದ್ದರೆ ಅದನ್ನು ತೆರವು ಗೊಳಿಸಿ ಸಾರ್ವಜನಿಕ ಉಪಯೋಗಕ್ಕೆ ತಕ್ಷಣ ಕೊಡುವ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಎಸಿ ಯವರಿಗೆ ಸ್ಪಷ್ಟ ಸೂಚನೆ ನಿಡಲಾಗಿದೆ ಎಂದರು.
ಕೆರೆಗಳನ್ನು ಉಳಿಸಲು ಹೂಳೆತ್ತುವ ಕೆಲಸವನ್ನು ಉದ್ಯೋಗ್ಯ ಖಾತ್ರಿ ಯೋಜನೆಯ ಮೂಲಕ ಕೈಗೊಳ್ಳಬೇಕು. ಹಿನ್ನೀರು ಪ್ರದೇಶ ಒತ್ತುವರಿಯಾಗಿದ್ದರೆ ಕೂಡಲೇ ಬಿಡಿಸಬೇಕು. ನೀರು ಸಲೀಸಲಾಗಿ ಕೆರೆಗಳಿಗೆ ಹೋಗಬೇಕು ಸುತ್ತ ರಿವಿಟ್‍ಮೆಂಟ್ ಮಾಡಿ ಕಾಲುವೆ ಸ್ವಚ್ಛಗೊಳಿಸಬೇಕೆಂದು ಸೂಚನೆ ನೀಡಿದ್ದೇನೆ ಎಂದರು.
ವಿಜಯನಗರ ಜಿಲ್ಲೆ ಮಾತ್ರವಲ್ಲದೇ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಎಸ್.ಎಸ್.ಎಲ್ ಸಿ ಪರೀಕ್ಷೆಯಲ್ಲಿ ಫಲಿತಾಂಶ ಕಡಿಮೆಯಾಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಅಕ್ರಮಗಳನ್ನು ತಪ್ಪಿಸಿದ್ದೇವೆ ಅದಕ್ಕಾಗಿ ಫಲಿತಾಂಶ ಕಡಿಮೆಯಾಗಿದೆ ಎಂದು ಹೇಳಿದ್ದಾರೆ ಮುಂದಿನ ವರ್ಷ ಕೃಪಾಂಕವನ್ನು ನೀಡಬಾರದೆಂಬ ಸೂಚನೆ ನೀಡಲಾಗಿದೆ ಎಂದರು. ಮೆರಿಟ್ ಆಧಾರದ ಮೇಲೆ ಉತ್ತೀರ್ಣರಾನ್ನಗಿಸುವುದಲ್ಲದೇ ಕೋಚಿಂಗ್ ಕೂಡ ಸುಧಾರಣೆಯಾಗಬೇಕೆಂದು ನೀಡಬೇಕು ಎಂದು ಸೂಚಿಸಿದ್ದೇನೆ ಎಂದರು.
ಡಿಎಂಎಫ್ ಬಗ್ಗೆ ಗೊಂದಲವಿರುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ ಈ ಬಗ್ಗೆ ಸಂಬಂಧ ಪಟ್ಟ ಕಾರ್ಯದರ್ಶಿಯವರೊಂದಿಗೆ ಮಾತನಾಡಿದ್ದು 218 ಕೋಟಿ ರೂ.ಗಳು ಬರಬೇಕೆಂದು ಹೇಳುತ್ತಿದ್ದು ಬಳ್ಳಾರಿಯವರು ಅಷ್ಟು ಕೊಡಬೇಕಿಲ್ಲ ಎಂದು ಹೇಳುತ್ತಿದ್ದಾರೆ. ಜಿಲ್ಲೆಗಳು ವಿಭಜನೆಯಾದ ನಂತರ 28% ವಿಜಯನಗರಕ್ಕೆ, 72 % ಬಳ್ಳಾರಿಗೆ ನೀಡಲು ತೀರ್ಮಾನವಾಗಿದೆ. ಅದರ ಪ್ರಕಾರವೂ 218 ಕೋಟಿ ರೂ.ಗಳು ಬರಬೇಕು ಎಂದು ವಿಜಯನಗರ ಜಿಲ್ಲಾಧಿಕಾರಿಗಳು ತಿಳಿಸಿದ್ದು, ಬಳ್ಳಾರಿ ಡಿಸಿ ಅಷ್ಟೊಂದು ಕೊಡಬೇಕಿಲ್ಲ ಎನ್ನುತ್ತಿದ್ದಾರೆ. ಈ ಬಗ್ಗೆ ಇತ್ಯರ್ಥ ಮಾಡಲಾಗುವುದು ಎಂದರು.
ಸಂಸದ ಇ.ತುಕಾರಾಂ ಅವರು ಸಂಡೂರು ಶಾಸಕರಾಗಿದ್ದಾಗ ಗಣಿಗಾರಿಕೆಗೆ ಅವಕಾಶ ಕೊಡಬಾರದು ಎಂದು ಪತ್ರ ಬರೆದಿರುವ ಬಗ್ಗೆ ಮಾಧ್ಯಮದವರು ಮುಖ್ಯಮಂತ್ರಿಗಳ ಗಮನ ಸೆಳೆದಾಗ ಮಾತನಾಡಿ ತುಕಾರಾಂ ಅವರು ಯಾವ ಸಂದರ್ಭದಲ್ಲಿ ಮಾತನಾಡಿದ್ದಾರೆ ಎಂದು ಗೊತ್ತಿಲ್ಲ. ಅದನ್ನು ತಿಳಿದುಕೊಂಡು ಮಾತನಾಡುತ್ತೇನೆ ಎಂದರು.
ದೇವದಾರಿ ಗಣಿ ಕಂಪನಿಗೆ ಹೊಸದಾಗಿ ನೀಡಿರುವ ಪರವಾನಗಿಯ ಬಗ್ಗೆ ಮಾತನಾಡಿ ಈ ಬಗ್ಗೆ ಹೊಸದಾಗಿ ಕೇಂದ್ರ ಭಾರಿ ಕೈಗಾರಿಕಾ ಹಾಗೂ ಉಕ್ಕು ಸಚಿವರು ಹೇಳಿದ್ದು, ಇದರ ಬಗ್ಗೆ ಬಳ್ಳಾರಿ ಜಿಲ್ಲಾಧಿಕಾರಿಯವರಿಗೆ ವರದಿ ಸಲ್ಲಿಸಲು ಸೂಚಿಸಿದ್ದೇನೆ. ವರದಿ ಬಂದ ನಂತರ ಸರ್ಕಾರದ ಅಭಿಪ್ರಾಯವೇನು ಎಂದು ತಿಳಿಸುವುದಾಗಿ ಹೇಳಿದರು. ಕುಮಾಸ್ವಾಮಿ ದೇವಸ್ಥಾನದ ಬಳಿ ಗಣಿಗಾರಿಕೆಗೆ ಅವಕಾಶ ಕೊಡಬಾರದು ಎಂದು ಪರಿಸರಪ್ರೇಮಿಗಳು ಆಕ್ಷೇಪವೆತ್ತಿರುವ ಬಗ್ಗೆ ಪತ್ರಿಕ್ರಿಯೆ ನೀಡಿ ವರದಿ ಬರಲಿ ತಿಳಿಸುತ್ತೇನೆ ಎಂದರು.
-
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು











Click it and Unblock the Notifications