ವಿಜಯಪುರದಲ್ಲಿ ಬಾಲಕಿ ಕೊಲೆ ಪ್ರಕರಣ: ಚಿಕ್ಕಮಗಳೂರು ಬಂದ್
ಚಿಕ್ಕಮಗಳೂರು, ಡಿಸೆಂಬರ್ 22 : ವಿಜಯಪುರದಲ್ಲಿ ನಡೆದ ಬಾಲಕಿ ಕೊಲೆ ಪ್ರಕರಣವನ್ನು ಖಂಡಿಸಿ ಕನ್ನಡ ಪರ, ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಶುಕ್ರವಾರ ಚಿಕ್ಕಮಗಳೂರು ಬಂದ್ ಗೆ ಕರೆ ನೀಡಿದ್ದಾರೆ.
ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಬಂದ್ ಮಾಡಲು ಕರೆ ನೀಡಿದ್ದು, ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜತೆಗೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಆಪರಾಧಿಗಳಿಗೆ ಬಂಧಿಸಿ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಬಂದ್ ಗೆ ಮಿಶ್ರ ಪ್ರತಿಕ್ರಿಯೆ ಲಭ್ಯವಾಗಿದ್ದು, ಬಂದ್ ಶಾಂತಿಯುತವಾಗಿ ನಡೆಸಲು ಚಿಕ್ಕಮಗಳೂರು ಜಿಲ್ಲಾಧಿಕಾರಿ ಶ್ರೀರಂಗಯ್ಯ ಸೂಚನೆ ನೀಡಿದ್ದಾರೆ. ಜತೆಗೆ ಇಂದು ಯಾವುದೇ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ, ವಾಹನ ಸಂಚಾರಗಳು ಕೂಡ ಎಂದಿನಂತಿರುತ್ತದೆ ಎಂದು ತಿಳಿಸಿದ್ದಾರೆ.












Click it and Unblock the Notifications