Basavaraj Bommai: ವಿಜಯಪುರ-ಮಂಗಳೂರು ರೈಲು ಯಲಿವಿಗಿಯಲ್ಲಿ ನಿಲುಗಡೆಗೆ ಅವಕಾಶ: ಬಸವರಾಜ ಬೊಮ್ಮಾಯಿ

ಹಾವೇರಿ ಜನವರಿ 2: ವಿಜಯಪುರ - ಮಂಗಳೂರು ನಡುವೆ ಸಂಚರಿಸುವ ಮಂಗಳೂರು ಎಕ್ಸ್ ಪ್ರೆಸ್ ರೈಲನ್ನು ಯಲವಿಗಿ ರೈಲು ನಿಲ್ದಾಣದಲ್ಲಿ ನಿಲುಗಡೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇದರಿಂದಾಗಿ ಕೇಂದ್ರ ರೈಲ್ವೆ ಸಚಿವರು ಹಾಗೂ ಅಧಿಕಾರಿಗಳಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಧನ್ಯವಾದ ತಿಳಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬಸವರಾಜ ಬೊಮ್ಮಾಯಿ ರೈಲ್ವೆ ಇಲಾಖೆಗೆ ಧನ್ಯವಾದವನ್ನು ತಿಳಿಸಿದ್ದಾರೆ. ವಿಜಯಪುರ ಮಂಗಳೂರು ರೈಲಿನ ಮೂಲಕ ಸಂಚರಿಸುವ ಪ್ರಯಾಣಿಕರಿಗೆ ಯಲವಿಗಿ ರೈಲು ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ಕಲ್ಪಿಸಿರುವುದರಿಂದ ರಾಜ್ಯದ ಪ್ರಮುಖ ದೇವಸ್ಥಾನಗಳಾದ ಶ್ರೀ ಕುಕ್ಕೆ ಸುಬ್ರಮಣ್ಯ, ಧರ್ಮಸ್ಥಳ ಕ್ಷೇತ್ರಗಳಿಗೆ ಭೇಟಿ ನೀಡಲು ಅನುಕೂಲವಾಗಲಿದೆ ಹಾಗೂ ಬಂದರು ನಗರಿ ಮಂಗಳೂರು ನಗರಕ್ಕೆ ಈ ರೈಲು ನೇರ ಸಂಪರ್ಕವನ್ನು ಒದಗಿಸಲಿದ್ದು ಇದರ ಸದುಪಯೋಗವನ್ನು ಪಡೆಯಬೇಕೆಂದು ಜನತೆಗೆ ಮನವಿ ಮಾಡಿದ್ದಾರೆ‌.

vijayapura-mangaluru train allowed to stop at yalivigi mp basavaraj bommai thanks railway department

ನನ್ನ ಕೋರಿಕೆಗೆ ಸ್ಪಂದಿಸಿ ಯಲಿವಿಗಿ ರೈಲು ನಿಲ್ದಾಣದಲ್ಲಿ ನಿಲುಗಡೆ ಮಾಡಲು ಅವಕಾಶ ಕಲ್ಪಿಸಿದ ರೈಲ್ವೆ ಇಲಾಖೆಗೆ ಧನ್ಯವಾದಗಳು. ಯಲವಿಗಿ ರೈಲು ನಿಲ್ದಾಣದಲ್ಲಿ ವಿಜಯಪುರ - ಮಂಗಳೂರು ಎಕ್ಸ್ ಪ್ರೆಸ್ ರೈಲು ಪ್ರತಿದಿನ ರಾತ್ರಿ 9:49 ಗಂಟೆಗೆ ನಿಲುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+