Vijayapura SIR: ಮತದಾರರ ಹೆಸರು ಅಳಿಸಲು Form-7 ಅರ್ಜಿ ಸಲ್ಲಿಕೆ ಆರೋಪ: ಸ್ಫೋಟಕ ಮಾಹಿತಿ ಹಂಚಿಕೊಂಡ ಸಚಿವ ಎಂ.ಬಿ. ಪಾಟೀಲ್

Vijayapura SIR: ಬಬಲೇಶ್ವರ ಸೇರಿದಂತೆ ವಿಜಯಪುರ ನಗರದಲ್ಲಿ ದೊಡ್ಡ ಸಂಖ್ಯೆಯ ಮತದಾರರ ಹೆಸರುಗಳನ್ನು ಅಳಿಸುವಂತೆ Form-7 ಅರ್ಜಿಗಳು ಸಲ್ಲಿಕೆಯಾಗಿದೆ. ಅಲ್ಲದೆ ಇದರಲ್ಲಿ ಮುಖ್ಯವಾಗಿ ಮುಸ್ಲಿಂ ಸಮುದಾಯದ ಮತಗಳನ್ನು ಅಳಿಸಬೇಕು ಎಂದು ಅರ್ಜಿ ಸಲ್ಲಿಸಲಾಗುತ್ತಿದೆ ಎನ್ನುವ ಗಂಭೀರವಾದ ಆರೋಪ ಕೇಳಿ ಬಂದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಂ.ಬಿ ಪಾಟೀಲ್ ಅವರು ಮಾತನಾಡಿದ್ದಾರೆ. ಅಲ್ಲದೆ ಯಾವೊಬ್ಬ ಅರ್ಹ ಮತದಾರನ ಮತದಾನದ ಹಕ್ಕನ್ನೂ ಕಸಿದುಕೊಳ್ಳಲು ಬಿಡುವುದಿಲ್ಲ ಎಂದಿದ್ದಾರೆ.

ವಿಜಯಪುರದಲ್ಲಿ ಈ ದಿನ ಸುದ್ದಿಗೋಷ್ಠಿ ನಡೆಸಿ, ಬಬಲೇಶ್ವರ ವಿಧಾನಸಭಾ ಕ್ಷೇತ್ರ ಸೇರಿದಂತೆ ವಿಜಯಪುರ ಜಿಲ್ಲೆಯಲ್ಲಿ SIR ಸಂದರ್ಭದಲ್ಲಿ ನಡೆದಿರುವ ಮತದಾರರ ಹೆಸರು ಅಳಿಸುವ ಪ್ರಯತ್ನಗಳ ಕುರಿತು ವಿವರವಾದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ಸೇರಿದಂತೆ ವಿಜಯಪುರ ನಗರದಲ್ಲಿ ದೊಡ್ಡ ಸಂಖ್ಯೆಯ ಮತದಾರರ ಹೆಸರುಗಳನ್ನು ಅಳಿಸುವಂತೆ Form-7 ಅರ್ಜಿಗಳು ಸಲ್ಲಿಕೆಯಾಗಿತ್ತು. ಸೆಪ್ಟೆಂಬರ್ 22 ಮತ್ತು 23ರಂದು ಕೆಲವೇ ವ್ಯಕ್ತಿಗಳಿಂದ ಸಾವಿರಾರು ಮತದಾರರ ಹೆಸರುಗಳನ್ನು ಅಳಿಸುವಂತೆ ಅರ್ಜಿಗಳು ಸಲ್ಲಿಕೆಯಾಗಿದ್ದವು. ಬಬಲೇಶ್ವರ ಮತ ಕ್ಷೇತ್ರದಲ್ಲಿ ಸುಮಾರು 1,500 ಮತದಾರರು ಹಾಗೂ ವಿಜಯಪುರ ನಗರದಲ್ಲಿ 13ಸಾವಿರ ಮತದಾರರ ಮತದಾರರ ಹೆಸರುಗಳ ವಿರುದ್ಧ ಆಕ್ಷೇಪಣೆ ಸಲ್ಲಿಸಿ ಅರ್ಜಿ ಹಾಕಿದ್ದರು.

Vijayapura SIR Allegations of Form-7 Applications to Delete Voter Names M B Patil Shares Key Details

ನಂತರ ಈ ಅರ್ಜಿ ನೀಡಿದವರು ಈಗ ಹಿಂದೆ ಸರಿದಿದ್ದರೂ, ಇದೊಂದು ಗಂಭೀರ ಕೃತ್ಯವಾಗಿದೆ. ಈ ಕುರಿತು ಕಾನೂನು ಸಲಹೆ ಪಡೆದು ಮುಂದಿನ ಕ್ರಮ ಜರುಗಿಸಲಾಗುವುದು. ದೇಶಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಡೆದಿರುವ ಲೋಪಗಳಾಗಿರುವ ಕುರಿತು ವರದಿಗಳು ಬರುತ್ತಲೇ ಇವೆ. ಈ ಹಿನ್ನಲೆಯಲ್ಲಿ ಕೇಂದ್ರ ಚುನಾವಣಾ ಆಯುಕ್ತರಾದ (CEC) ಜ್ಞಾನೇಶ್ ಕುಮಾರ್ ಅವರ ಪದಚ್ಯುತಿಗೆ ಒತ್ತಾಯಿಸಿದ್ದಾರೆ.

ಮುಂದುವರಿದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು 'ವೋಟ್ ಚೋರಿ' ಕುರಿತು ಹಲವು ಸಂದರ್ಭಗಳಲ್ಲಿ ಪ್ರಶ್ನೆಗಳನ್ನು ಎತ್ತಿ ಹೋರಾಟ ನಡೆಸಿದ್ದಾರೆ. ನಮ್ಮ ಕರ್ನಾಟಕದಲ್ಲೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಹೋರಾಟ ಮಾಡಲಾಗಿದೆ. ಇದು ಕೇವಲ ಕೆಲವು ಅರ್ಜಿಗಳ ವಿಚಾರವಲ್ಲ; ಪ್ರತಿಯೊಬ್ಬ ಅರ್ಹ ನಾಗರಿಕನ ಮತದಾನದ ಹಕ್ಕನ್ನು ರಕ್ಷಿಸುವ ಪ್ರಶ್ನೆ.
ಅನರ್ಹ ಹೆಸರುಗಳಿದ್ದರೆ ಕಾನೂನುಬದ್ಧ ಪರಿಶೀಲನೆ ನಡೆಯಲಿ. ಆದರೆ ಯಾವುದೇ ರಾಜಕೀಯ ಅಥವಾ ದುರುದ್ದೇಶದಿಂದ ಒಬ್ಬ ಅರ್ಹ ಮತದಾರನ ಹೆಸರನ್ನೂ ಮತದಾರರ ಪಟ್ಟಿಯಿಂದ ತೆಗೆದುಹಾಕಲು ಅವಕಾಶ ಇರಬಾರದು ಎಂದೂ ಸಚಿವ ಎಂ.ಬಿ ಪಾಟೀಲ್ ಅವರು ಹೇಳಿದ್ದಾರೆ.

Vijayapura SIR: ಚುನಾವಣಾ ಆಯೋಗ ಆಯುಕ್ತ ಜ್ಞಾನೇಶ್ ಕುಮಾರ್ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಇನ್ನು ಕೇಂದ್ರ ಚುನಾವಣಾ ಆಯೋಗವು ಮೋದಿ ಮತ್ತು ಅಮಿತ್ ಶಾ ಅವರ ಕೈಗೊಂಬೆಯಾಗಿದೆ. ಕೂಡಲೇ CEC ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಿ, ಬಂಧಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸಚಿವ ಎಂ.ಬಿ ಪಾಟೀಲ ಅವರು ಮನವಿ ಸಲ್ಲಿಸಿದ್ದಾರೆ. ಅಲ್ಲದೆ, ಈ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಸಹ ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ರಾಹುಲ್ ಗಾಂಧಿಯವರು 'ವೋಟ್ ಚೋರಿ' ಕುರಿತು ಹಲವು ಸಂದರ್ಭಗಳಲ್ಲಿ ಪ್ರಶ್ನೆಗಳನ್ನು ಎತ್ತಿ ಹೋರಾಟ ನಡೆಸಿದ್ದಾರೆ. ನಮ್ಮ ರಾಜ್ಯದಲ್ಲೂ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಹೋರಾಟ ಮಾಡಲಾಗಿದೆ. ದೇಶಾದ್ಯಂತ ಕಾಂಗ್ರೆಸ್ ಈ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿಭಟನೆಗಳನ್ನು ನಡೆಸುತ್ತಿದೆ.

ವಿಜಯಪುರ ಜಿಲ್ಲೆಯಲ್ಲೂ ಮತ ಕಳವಿಗೆ ನಡೆದ ಪ್ರಯತ್ನವನ್ನು ಇಲ್ಲಿನ ಆಡಳಿತವು ತಡೆದು ಉತ್ತಮ ಕೆಲಸ ಮಾಡಿದೆ. ಅರ್ಜಿ ನೀಡಿದವರು ಈಗ ಹಿಂದೆ ಸರಿದಿದ್ದರೂ, ಇದೊಂದು ಗಂಭೀರ ಕೃತ್ಯವಾಗಿದೆ. ಈ ಕುರಿತು ಕಾನೂನು ಸಲಹೆ ಪಡೆದು ಮುಂದಿನ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+