ಕರ್ನಾಟಕದ ಪ್ರಮುಖ ಜಿಲ್ಲೆಗೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟ ನಗರಾಭಿವೃದ್ಧಿ ಇಲಾಖೆ

ಕರ್ನಾಟಕದ ಪ್ರಮುಖ ಜಿಲ್ಲೆಗೆ ನಗರಾಭಿವೃದ್ಧಿ ಇಲಾಖೆಯು ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದೆ. ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರವಾಸ ಮಾಡುತ್ತಿರುವ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇದೀಗ ಕರ್ನಾಟಕದ ಪ್ರಮುಖ ಜಿಲ್ಲೆಗೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಅದರ ಸಂಪೂರ್ಣ ವಿವರ ಇಲ್ಲಿದೆ.

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಬಿಜ್ಜರಗಿ ಗ್ರಾಮದಲ್ಲಿ ಭಾನುವಾರ ನಡೆದ ಶ್ರೀ ಹಂಜಗಿ ಸಿದ್ದೇಶ್ವರ ಹಾಗೂ ಶ್ರೀ ಹಿರೋಡೇಶ್ವರ ಮೂರ್ತಿ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಸಮಾರಂಭದಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕನಕದಾಸ ಸರ್ಕಲ್ ಉದ್ಘಾಟಿಸಿ, ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.

Vijayapura

ಬಳಿಕ ಮಾತನಾಡಿದ ಸಚಿವರು, ಕಾಯಕ, ದಾಸೋಹ ಹಾಗೂ ಸಮಾನತೆಯ ಸಂದೇಶವನ್ನು ಸಾರಿದ ದಾಸ ಸಾಹಿತ್ಯವು ಸಮಾಜದ ಪರಿವರ್ತನೆಗೆ ಮಹತ್ವದ ಕೊಡುಗೆ ನೀಡಿದೆ. ಕನಕದಾಸರಂತಹ ಮಹನೀಯರ ಸಮಾಜಮುಖಿ ಚಿಂತನೆಗಳು ಇಂದಿಗೂ ಎಲ್ಲರಿಗೂ ಮಾರ್ಗದರ್ಶಕವಾಗಿವೆ ಎಂದು ಹೇಳಿದರು.

ಸಮಾಜದ ಎಲ್ಲ ವರ್ಗಗಳನ್ನು ಒಗ್ಗೂಡಿಸಿಕೊಂಡು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರದ ಪ್ರಯತ್ನಗಳ ಜೊತೆಗೆ ಜನರ ಸಹಕಾರವೂ ಅತ್ಯಂತ ಅಗತ್ಯವಾಗಿದೆ. ತಮ್ಮ ತಂದೆ ಸಿದ್ದರಾಮಯ್ಯ ಅವರಿಗೆ ವಿಜಯಪುರ ಜಿಲ್ಲೆಯ ಜನರು ನೀಡಿದ ಶಕ್ತಿ, ಪ್ರೀತಿ ಹಾಗೂ ಸಹಕಾರವನ್ನು ತಮ್ಮ ಮೇಲೂ ಇರಿಸಿ, ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.

ನಗರಾಭಿವೃದ್ಧಿ ಸಚಿವನಾಗಿ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಎಲ್ಲರ ಆಶೀರ್ವಾದ, ಮಾರ್ಗದರ್ಶನ ಹಾಗೂ ಸಹಕಾರದೊಂದಿಗೆ ಪ್ರಾಮಾಣಿಕವಾಗಿ ಶ್ರಮಿಸುವ ಸಂಕಲ್ಪ ನಮ್ಮದಾಗಿದೆ. ಜಿಲ್ಲೆಯ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರವನ್ನು ನೀಡಲು ಬದ್ಧರಾಗಿರುವುದಾಗಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಡಾ. ಎಂ.ಬಿ. ಪಾಟೀಲ್, ಹಾಲುಮತ ಸರೂರ ಮಠದ ಪರಮಪೂಜ್ಯ ರೇವಣ್ಣ ಸಿದ್ದೇಶ್ವರ ಶಾಂತಮಯ ಮಹಾಸ್ವಾಮೀಜಿ, ಮಾಳಿಂಗರಾಯ ಮಹಾರಾಜರು, ಮಾಯಣ್ಣ ಪೂಜಾರಿ ಹಾಗೂ ಹೊವಣ್ಣ ಪೂಜಾರಿ ಸೇರಿದಂತೆ ಹಲವರು ಇದ್ದರು.

ವಿಜಯಪುರ ಅಭಿವೃದ್ಧಿ ಕೆಲಸಗಳಿಗೆ ವೇಗ

ಇನ್ನು ವಿಜಯಪುರ ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳಿಗೆ ವೇಗ ನೀಡುವುದಾಗಿ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ವಿಜಯಪುರದಲ್ಲಿ ಬಾಕಿ ವಸೂಲಿ, ಇ-ಖಾತಾ, ತ್ಯಾಜ್ಯ ನಿರ್ವಹಣೆ ಹಾಗೂ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ನಗರದ ಕುಡಿಯುವ ನೀರು, ಸ್ವಚ್ಛತೆ, ತ್ಯಾಜ್ಯ ನಿರ್ವಹಣೆ, ಆಸ್ತಿ ತೆರಿಗೆ, ವಾಣಿಜ್ಯ ಮಳಿಗೆಗಳ ಬಾಡಿಗೆ ವಸೂಲಿ, ಇ-ಖಾತಾ, ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವುದಾಗಿಯೂ ಹೇಳಿದ್ದಾರೆ.

ಮಹಾನಗರ ಪಾಲಿಕೆಗೆ ಬರಬೇಕಿರುವ ಆಸ್ತಿ ತೆರಿಗೆ ಹಾಗೂ ವಾಣಿಜ್ಯ ಮಳಿಗೆಗಳ ಬಾಡಿಗೆಯನ್ನು ಯಾವುದೇ ಬಾಕಿ ಉಳಿಸದೆ ಪರಿಣಾಮಕಾರಿಯಾಗಿ ವಸೂಲಿ ಮಾಡಬೇಕು ತೆರಿಗೆ ಹಾಗೂ ಇತರೆ ಆದಾಯ ಮೂಲಗಳ ವಸೂಲಾತಿಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ನಗರದಲ್ಲಿ ಈಗಾಗಲೇ 2 ವಿಕೇಂದ್ರೀಕೃತ ತ್ಯಾಜ್ಯ ನಿರ್ವಹಣಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಇನ್ನೂ 2 ಘಟಕಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ ಈ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ, ನಗರದ ತ್ಯಾಜ್ಯ ನಿರ್ವಹಣೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+