• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಆಕ್ರೋಶ ಬೇಡ: ಬೆಂಬಲಿಗರಿಗೆ ಬಿ.ವೈ. ವಿಜಯೇಂದ್ರ ಮನವಿ

|
Google Oneindia Kannada News

ಬೆಂಗಳೂರು, ಮೇ 24: ವಿಧಾನ್ ಪರಿಷತ್ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಪುತ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಟಿಕೆಟ್ ಕೈ ತಪ್ಪುತ್ತಿದ್ದಂತೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿ ಸ್ವಪಕ್ಷದ ವಿರುದ್ಧವೇ ತಿರುಗಿ ಬೀಳುತ್ತಿದ್ದಂತೆ ಸೌಜನ್ಯದಿಂದ ವರ್ತಿಸಿ ಎಂದು ಬಿ.ವೈ.ವಿಜಯೇಂದ್ರ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ಪತ್ರವೊಂದನ್ನು ಹಂಚಿಕೊಂಡಿರುವ ವಿಜಯೇಂದ್ರ, ಪಕ್ಷಕ್ಕಾಗಿ ದುಡಿಯೋಣ, ಬೆಂಬಲಿಗರು ಮತ್ತು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುವುದು ಸರಿಯಲ್ಲ ಎಂದಿದ್ದಾರೆ.

'ವಿಜಯಣ್ಣ'ನಿಗೆ ತಪ್ಪಿದ ಪರಿಷತ್ ಟಿಕೆಟ್: ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ'ವಿಜಯಣ್ಣ'ನಿಗೆ ತಪ್ಪಿದ ಪರಿಷತ್ ಟಿಕೆಟ್: ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ

"ಪಕ್ಷ ಗುರುತಿಸಿದವರಿಗೆ ಟಿಕೆಟ್ ನೀಡಿದೆ, ನಾವು ಪಕ್ಷದ ಸಿಪಾಯಿಗಳು, ಪಕ್ಷಕ್ಕಾಗಿ ದುಡಿಯೋಣ. ಯಾರೂ ಬೆಂಬಲಿಗರು ಮತ್ತು ಅಭಿಮಾನಿಗಳ ಆಕ್ರೋಶ ವ್ಯಕ್ತಪಡಿಸುವುದು ಟೀಕೆ ಮಾಡುವುದು ಸರಿಯಾದ ಕ್ರಮವಲ್ಲ. ಪಕ್ಷ ಮುಂದಿನ ದಿನಗಳಲ್ಲಿ ತಮ್ಮನ್ನು ಗುರುತಿಸಲಿದೆ" ಎಂದು ಬೆಂಬಲಿಗರಿಗೆ ವಿಜಯೇಂದ್ರ ಮನವಿ ಮಾಡಿದ್ದಾರೆ.

ಟಿಕೆಟ್ ಪಡೆದವರಿಗೆ ಅಭಿನಂದನೆ

ವಿಧಾನ ಪರಿಷತ್‌ಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್‌ ಘೋಷಿಸಿದ್ದು, ಘಟಾನುಘಟಿ ನಾಯಕರ ಮಧ್ಯೆ ಅಚ್ಚರಿ ಹೆಸರುಗಳನ್ನ ಹೈಕಮಾಂಡ್ ಅಂತಿಮಗೊಳಿಸಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಬಸವರಾಜ ಹೊರಟ್ಟಿಗೂ ವಿಜಯೇಂದ್ರ ಶುಭಕೋರಿದ್ದಾರೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಗಳಾಗಿರುವ ಚಲುವಾದಿ ನಾರಾಯಣಸ್ವಾಮಿ, ಹೇಮಲತಾ ನಾಯಕ್, ಕೇಶವ ಪ್ರಸಾದ್ ಮತ್ತು ಲಕ್ಷ್ಮಣ ಸವದಿಗೆ ಟಿಕೆಟ್ ವಂಚಿತ ಬಿ.ವೈ.ವಿಜಯೇಂದ್ರ ಅಭಿನಂದನೆ ಸಲ್ಲಿಸಿದ್ದಾರೆ.

 ಎಂಎಲ್‌ಸಿ ಚುನಾವಣೆ: ಹೈಕಮಾಂಡ್ ಶಾಕ್- ಹೇಮಲತಾ ನಾಯಕ್‌ಗೆ ಟಿಕೆಟ್ ಎಂಎಲ್‌ಸಿ ಚುನಾವಣೆ: ಹೈಕಮಾಂಡ್ ಶಾಕ್- ಹೇಮಲತಾ ನಾಯಕ್‌ಗೆ ಟಿಕೆಟ್

ರಾಜಕೀಯ ನಿಂತ ನೀರಲ್ಲ

ಸಂಘದ ಶಿಸ್ತು, ಪಕ್ಷದ ಸಂಘಟನೆ, ಜನಪರ ಹೋರಾಟ ಹಾಗೂ ಸೇವಯನ್ನು ನಿಜ ಕಾಯಕವೆಂದು ತಿಳಿದು ಬದುಕಿನ ಹೆಜ್ಜೆ ಇಟ್ಟವರು ತಂದೆ ಯಡಿಯೂರಪ್ಪ. ಈ ಕಾರಣಕ್ಕಾಗಿಯೇ ರಾಜ್ಯದ ಮುಖ್ಯಮಂತ್ರಿಯಾಗಿ ನಾಲ್ಕು ಬಾರಿ ಪ್ರಮಾಣ ವಚನ ಸ್ವೀಕರಿಸುವ ಅವಕಾಶ ಕಲ್ಪಿಸಿದ್ದು ಜನರ ಆಶೀರ್ವಾದ ಮತ್ತು ಭಾರತೀಯ ಜನತಾ ಪಕ್ಷ.

ಅಂತೆಯೇ ಅನಿರೀಕ್ಷಿತ ತಿರುವಿನಲ್ಲಿ ರಾಜಕೀಯ ಪ್ರವೇಶಿಸಿದ ನನಗೆ ರಾಜ್ಯ ಬಿಜೆಪಿಯ ಉಪಾಧ್ಯಕ್ಷನಾಗಿ ಮಹತ್ವದ ಜವಾಬ್ದಾರಿ ನೀಡಿ ನನ್ನ ಬೆನ್ನುತಟ್ಟಿ ಬೆಳೆಸುತ್ತಿರುವುದು ಪಕ್ಷ ಮತ್ತು ಪಕ್ಷದ ವರಿಷ್ಠರು. ರಾಜಕೀಯ ಅಧಿಕಾರಗಳು ನಿಂತ ನೀರಲ್ಲ ಅದು ಹರಿಯುವ ನದಿಯ ಹಾಗೆ. ಇದನ್ನು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅರ್ಥ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

 ನಿಮ್ಮ ಬೆಂಬಲ ಸದಾ ಇರಲಿ

ನಿಮ್ಮ ಬೆಂಬಲ ಸದಾ ಇರಲಿ

ಅನಗತ್ಯ ಟೀಕೆ, ಟಿಪ್ಪಣಿಗಳು, ಉದ್ಘೋಷಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದರೆ ಅದರಿಂದ ನನ್ನ ವ್ಯಕ್ತಿತ್ವಕ್ಕೆ ಹಾಗೂ ತಂದೆಯವರ ವ್ಯಕ್ತಿತ್ವಕ್ಕೆ ಮಸಿ ಬಳಿದಂತಾಗುವುದೇ ಹೊರತು ನಮ್ಮನ್ನು ಬೆಂಬಲಿಸಿದಂತೆ ಆಗುವುದಿಲ್ಲ ಎನ್ನುವುದನ್ನು ಹಿತೈಷಿಗಳು ಅರಿತುಕೊಳ್ಳಬೇಕು ಎಂದು ಪತ್ರದಲ್ಲಿ ಹೇಳಿದ್ದಾರೆ.

ಪಕ್ಷದ ಶಿಸ್ತಿನ ಚೌಕಟ್ಟಿನದಲ್ಲಿ ನಾವೆಲ್ಲರೂ ಸಾಮಾನ್ಯ ಕಾರ್ಯಕರ್ತರು. ಸಾಮರ್ಥ್ಯ ಇರುವವರನ್ನು ಪಕ್ಷ ಎಂದಿಗೂ ಕೈ ಬಿಟ್ಟಿಲ್ಲ, ಬಿಡುವುದೂ ಇಲ್ಲ. ಈ ನಿಟ್ಟಿನಲ್ಲಿ ಎಲ್ಲರೂ ಸಹನೆ, ಸೌಜನ್ಯದಿಂದ ವರ್ತಿಸಬೇಕು. ನಿಮ್ಮೆಲ್ಲರ ಬೆಂಬಲ, ಆಶೀರ್ವಾದ, ಮಾರ್ಗದರ್ಶನ, ಸಹಕಾರ ಸದಾ ಇರಲಿ ಎಂದು ಮನವಿ ಮಾಡಿದ್ದಾರೆ.

 ಕೊನೆ ಕ್ಷಣದಲ್ಲಿ ಅಚ್ಚರಿಯ ಆಯ್ಕೆ

ಕೊನೆ ಕ್ಷಣದಲ್ಲಿ ಅಚ್ಚರಿಯ ಆಯ್ಕೆ

ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಹೈಕಮಾಂಡ್‌ಗೆ ಕಳುಹಿಸಿತ್ತು. ಈ ಪಟ್ಟಿಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಹೆಸರನ್ನು ಶಿಫಾರಸ್ಸು ಮಾಡಲಾಗಿತ್ತು. ಇನ್ನೇನು ವಿಜಯೇಂದ್ರ ಅವರಿಕೆ ಟಿಕೆಟ್ ಸಿಗುವುದು ಪಕ್ಕಾ ಎನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬಂದಿದ್ದವು.

ಖುದ್ದು ದೆಹಲಿಗೆ ತೆರಳಿ ಕೇಂದ್ರ ನಾಯಕರನ್ನ ಭೇಟಿ ಮಾಡಿ ನಗು ಮುಖದಲ್ಲೇ ವಾಪಸ್ ಆಗಿದ್ದರು. ಅಲ್ಲದೇ ಪರಿಷತ್‌ಗೆ ಆಯ್ಕೆಯಾಗುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ಸೇರುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಎಲ್ಲವೂ ಬದಲಾಗಿದ್ದು ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಎಲ್ಲರಿಗೂ ಅಚ್ಚರಿ ಮೂಡಿಸಿದೆ. ವಿಜಯೇಂದ್ರ ಆಪ್ತ ವಲಯ ಮತ್ತು ಬೆಂಬಲಿಗರಿಗೆ ನಿರಾಸೆ ತರಿಸಿದೆ.

(ಒನ್ಇಂಡಿಯಾ ಸುದ್ದಿ)

   Virat ಮಾಡಿದ ತಪ್ಪನ್ನು ಡುಪ್ಲೆಸಿಸ್ ಮಾಡಬಾರದು ಎಂದ Virender Sehwag |Oneindia Kannada
   English summary
   Karnataka BJP vice president B Y Vijayendra on Tuesday urged his supporters not to go public with their disgruntlement over him not getting the Legislative Council election ticket.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X