ಬಿಜೆಪಿ ಸೇರ್ಪಡೆಗೆ ವಿಜಯೇಂದ್ರ ನನಗೆ ಹಣ ಕೊಡಲು ಬಂದಿದ್ದ: ಹೆಚ್. ವಿಶ್ವನಾಥ್
ಮೈಸೂರು, ಡಿಸೆಂಬರ್ 15: ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೆ ವಿಜಯೇಂದ್ರ, ಶ್ರೀನಿವಾಸ್ ಪ್ರಸಾದ್ ನನಗೆ ಹಣ ಕೊಡಲು ಬಂದಿದ್ರು ಎಂದು ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಬಾಂಬ್ ಹಾಕಿದ್ದಾರೆ.
ಮೈಸೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವ್ರು, ಎಲ್ಲರೂ ನನಗೆ ದುಡ್ಡು ಕೊಡೋಕೆ ಬಂದಿದ್ರು.ಈ ಬಗ್ಗೆ ಬಾಂಬೆ ಡೈರೀಸ್ ಪುಸ್ತಕದಲ್ಲಿ ವಿವರವಾಗಿ ಬರೆದಿದ್ದೇನೆ ಅಂತ ಹೇಳಿದ್ರು. ಪುಸ್ತಕದ ಮೊದಲ ಅಧ್ಯಾಯದಲ್ಲೇ ಇದೆ ಅಂತ ತಿಳಿಸಿದ್ದಾರೆ.
Recommended Video

ಇನ್ನೂ ಕಾಂಗ್ರೆಸ್ ನಾಯಕರ ಭೇಟಿ ವಿಚಾರವಾಗಿ ಮಾತನಾಡಿದ ಅವರು, ನಾನು ಕಾಂಗ್ರೆಸ್ ನ ಯಾವುದೇ ನಾಯಕರನ್ನು ಕದ್ದು ಮುಚ್ಚಿ ಭೇಟಿ ಮಾಡಿಲ್ಲ.ಎಲ್ಲಾ ಕಾಂಗ್ರೆಸ್ ನಾಯಕರನ್ನು ಬಹಿರಂಗವಾಗಿಯೇ ಭೇಟಿ ಮಾಡಿದ್ದೇನೆ. ನಾನು ಎಂದಾದ್ರು ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ತೇನೆ ಎಂದು ಹೇಳಿದ್ದೀನಾ..?ನಾನು ಬಿಜೆಪಿ ಸೇರಲು ಮಧ್ಯಸ್ಥಿಕೆ ವಹಿಸಿದವರು ಇದೇ ಶ್ರೀನಿವಾಸ್ ಪ್ರಸಾದ್ ಆದ್ರೆ, ನಾನು ಬಿಜೆಪಿ ಸೇರ್ಪಡೆಯಾದ ಬಳಿಕ ಯಡಿಯೂರಪ್ಪ ಆಗಲಿ, ಶ್ರೀನಿವಾಸ್ ಪ್ರಸಾದ್ ಸೇರಿ ಯಾವ ಬಿಜೆಪಿ ನಾಯಕರು ನನ್ನ ನೆರವಿಗೆ ಬರಲಿಲ್ಲ ಅಂತ ಕುಟುಕಿದ್ರು.

ಹುಣಸೂರು ಉಪ ಚುನಾವಣೆಯಲ್ಲಿ ಸೋತ ಬಳಿಕ ಯಾರೂ ಬರಲಿಲ್ಲ . ನಾನು ಎಂ ಎಲ್ ಸಿ ಮಾಡಲು ನೆರವಾಗಿದ್ದು RSS ಮುಖಂಡ ಮುಕುಂದ ಅವರು ಆರ್.ಎಸ್.ಎಸ್ ನಾಯಕ ಮುಕುಂದ ಅವರಿಂದ ನಾನು ವಿಧಾನ ಪರಿಷತ್ ಸದಸ್ಯನಾದೆ ಅಂತ ಹೇಳಿದ್ರು.
ಶ್ರೀನಿವಾಸ್ ಪ್ರಸಾದ್ ಅಲೆಮಾರಿಗಳ ರಾಜ ಎಂದು ಹೆಚ್ ವಿಶ್ವನಾಥ್ ಕಿಡಿ
ನನ್ನನ್ನು ಅಲೆಮಾರಿ ರಾಜಕಾರಣಿ ಎಂದು ಟೀಕಿಸಿರುವ ನೀವು ಎಷ್ಟು ಪಕ್ಷಗಳನ್ನು ಬದಲಾಯಿಸಿದ್ದೀರಿ. ನೀವು ಒಂದೇ ಪಕ್ಷವನ್ನು ಎರಡೆರಡು ಬಾರಿ ಸೇರ್ಪಡೆಯಾಗಿದ್ದೀರಿ.ನೀವು ಅಲೆಮಾರಿಗಳ ರಾಜ ಎಂದು ವಿ ಶ್ರೀನಿವಾಸ ಪ್ರಸಾದ್ ವಿರುದ್ದ ಟೀಕಾ ಪ್ರಹಾರ ನಡೆಸಿದ ಎಚ್ ವಿಶ್ವನಾಥ್ , ದಲಿತರ ಸಮಸ್ಯೆ ಬಗ್ಗೆ ಧ್ವನಿ ಎತ್ತಬೇಕಾದ ನೀವು ಯಾರನ್ನೋ ಓಲೈಸಲು ಮುಂದಾಗಿದ್ದೀರಿ ಅಂತ ಕಿಡಿಕಾರಿದ್ರು.
ನಾನು ಹಾಗು ಶ್ರೀನಿವಾಸಪ್ರಸಾದ್ ಹಳೆಯ ಸ್ನೇಹಿತರು, ಬಹು ಕಾಲದ ಒಡನಾಡಿಗಳು. ಅದೆಲ್ಲವನ್ನು ಮರೆತು ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ರನ್ನು ನಾನು ಭೇಟಿ ಮಾಡಿದ್ದನ್ನೇ ಘೋರ ಅಪರಾಧ ಎಂಬಂತೆ ಶ್ರೀನಿವಾಸಪ್ರಸಾದ್ ಬಿಂಬಿಸುತ್ತಿರುವುದು ಅವರ ವ್ಯಕ್ತಿತ್ವಕ್ಕೆ ಸರಿಯಲ್ಲ.ಯಾರನ್ನು ಮೆಚ್ಚಿಸಲು ನನ್ನ ವಿರುದ್ದ ಮುಗಿಬಿದ್ದಿದ್ದೀರಿ. ಸಂಸತ್ ಸದಸ್ಯರಾಗಿರುವ ನೀವು ನಿಮ್ಮ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಗಮನ ನೀಡುವ ಬದಲು ಏಕಾಏಕಿ ನನ್ನ ವಿರುದ್ಧ ಏಕೆ ತಿರುಗಿ ಬಿದ್ದಿದ್ದೀರಿ ಎಂದು ಪ್ರಶ್ನಿಸಿದರು.

ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗ್ತಿದೆ, ಆ ವೇಳೆ ನಂಜನಗೂಡು ಕ್ಷೇತ್ರದ ಶಾಸಕರಾಗಿರುವ ನಿಮ್ಮ ಅಳಿಯನಿಗೆ ಅವಕಾಶ ಸಿಗಲೆಂದು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಟಿ ನರಸೀಪುರ ಕ್ಷೇತ್ರದಲ್ಲಿ ನಿಮ್ಮ ಮಗಳಿಗೆ ಟಿಕೆಟ್ ಸಿಗಲೆಂದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಲ್ಲಿ ನಿಮ್ಮ ಮತ್ತೊಬ್ಬ ಅಳಿಯನಿಗೆ ಟಿಕೆಟ್ ಕೊಡಿಸುವ ಸಲುವಾಗಿ ನನ್ನನ್ನು ಈ ರೀತಿ ಟೀಕಿಸಿದ್ದೀರಾ ಶ್ರೀನಿವಾಸಪ್ರಸಾದ್ ಅವರೇ. ನೀವು ಹುಟ್ಟಿ ಬೆಳೆದ ಅಶೋಕಪುರಂಗೆ ನಿಮ್ಮ ಕೊಡುಗೆಯಾದರೂ ಏನು? ಯಾರಿಗೋ ಕಲ್ಲು ಹೊಡೆದರೇ ಅದು ಮತ್ತೆ ನಿಮಗೇ ಹೊಡೆಯತ್ತದೇ ಎಂಬುದನ್ನು ಮರೆಯಬೇಡಿ ಅಂತ ತಿರುಗೇಟು ನೀಡಿದರು.












Click it and Unblock the Notifications