BJP President: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರಗೆ ಕೊಕ್? ಈ ನಾಯಕರ ಹೆಸರೇ ಫೈನಲ್?

ಬೆಂಗಳೂರು, ಜೂನ್‌ 27: ರಾಜ್ಯ ರಾಜಕಾರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಗುಸು ಗುಸು ಚರ್ಚೆ ನಡೆಯುತ್ತಿದೆ. ಬಿಜೆಪಿ ಹೈಕಮಾಂಡ್‌ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರನ್ನ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ದಿನದಿಂದಲೂ ಬಿಜೆಪಿ ಮನೆಯೊಂದು ಮೂರು ಬಾಗಿಲಾಗಿದ್ದು, ಯತ್ನಾಳ್‌ ಹಾಗೂ ವಿಜಯೇಂದ್ರ ಬಣದ ನಡುವೆ ಬಣ ಬಡಿದಾಟ ತಾರಕಕ್ಕೇರಿದೆ. ಬಹುದಿನಗಳಿಂದ ಕರ್ನಾಟಕ ಬಿಜೆಪಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಡುವಿನ ತಿಕ್ಕಾಟ ಜೋರಾಗಿದ್ದು, ಬಹಿರಂಗವಾಗಿ ಸ್ವಪಕ್ಷದವರ ವಿರುದ್ಧ ಕಿಡಿಕಾರುತ್ತಿದ್ದ ಯತ್ನಾಳ್‌ ಅವರನ್ನ ಉಚ್ಚಾಟಿಸಲಾಗಿತ್ತು. ಆದರೆ, ಇದೀಗ ಮತ್ತೆ ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿದೆ.

ಕಳೆದ ವಾರ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿ ಕೊಟ್ಟಿದ್ದರು. ಈ ವೇಳೆ ರಾಜ್ಯ ಬಿಜೆಪಿ ನಾಯಕರ ಜೊತೆಗೆ ಸುದೀರ್ಘ ಚರ್ಚೆ ನಡೆಸಿದ್ದರು ಎಂದು ಮೂಲಗಳು ತಿಳಿಸಿದ್ದವು. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಅಧಿಕೃತ ಘೋಷಣೆಗೆ ಈಗಾಗಲೇ ದಿನಗಣನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಾಕಷ್ಟು ಕಸರತ್ತುಗಳು ನಡೆದಿವೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿದ್ದು, ಸರ್ಕಾರದ ವಿರುದ್ದ ಹೋರಾಟ ನಡೆಸುವ ಬಿಜೆಪಿ ಪಾಳಯದಲ್ಲಿಯೇ ಸರಿಯಾದ ಹೊಂದಾಣಿಕೆ ಇಲ್ಲದಂತಾಗಿದೆ. ಹೀಗಾಗಿ ಬಿಜೆಪಿ ಹೈಕಮಾಂಡ್‌ ರಾಜ್ಯಾಧ್ಯಕ್ಷರ ಬದಲಾವಣೆಗೆ ಮುಂದಾಗಿದೆ.

Vijayendra Kok steps down from BJP state president post Opportunity for young leader

ನೂತನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡುವ ಪ್ರಯತ್ನದ ಜೊತೆಗೆ ರಾಜ್ಯ ನಾಯಕರಿಂದ ವರಿಷ್ಠರು ಮಾಹಿತಿ ಸಂಗ್ರಹದ ಕೆಲಸವನ್ನೂ ನಡೆಸಿದ್ದಾರೆ. ಈ ಮಧ್ಯೆ ಮೂರು ದಿನಗಳಿಂದ ದೆಹಲಿಯಲ್ಲೇ ವಿಪಕ್ಷ ನಾಯಕ ಅಶೋಕ್ ಇರುವುದು ತೀವ್ರ ಕುತೂಹಲವನ್ನು ಹೆಚ್ಚಿಸಿದೆ. ಇನ್ನೂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ‌ ಬದಲಾಗಿ ಬೇರೆಯವರನ್ನು ನೇಮಿಸಲು ಬಿಜೆಪಿ ಹೈಕಮಾಂಡ್ ಕಳೆದ ಆರು ತಿಂಗಳ ಹಿಂದೆ ಗಂಭೀರ ಚಿಂತನೆ ನಡೆಸಿತ್ತು ಎನ್ನಲಾಗಿದೆ.

ಇನ್ನೂ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರವಾಗಿ ಬಿಜೆಪಿ ಹೈಕಮಾಂಡ್‌ ಚಿಂತನೆ ನಡೆಸಿದ್ದು, ಕಳೆದ ಆರು ತಿಂಗಳಿನಿಂದ ಹಲವು ಮಾತುಕತೆಗಳನ್ನ ಬಿಜೆಪಿ ಹೈಕಮಾಂಡ್‌ ನಡೆಸುತ್ತಿದ್ದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ ಮಾಡಿದ್ದ ಮಾಜಿ ಮುಖ್ಯಮಂತ್ರಿಯೊಬ್ಬರು ಈ ಬಗ್ಗೆ ಮಾಹಿತಿ ಬಹಿರಂಗಪಡಿಸಿದ್ದಾರೆ. ಇನ್ನೂ ಕರ್ನಾಟಕ ಮಾತ್ರವಲ್ಲದೇ ಬಾಕಿ ಇರುವ ಆರೇಳು ರಾಜ್ಯ ಘಟಕಗಳ ಅಧ್ಯಕ್ಷರ ಘೋಷಣೆ ಮಾಡಲಾಗುವುದು ಎಂದು ತಿಳಿದು ಬಂದಿದೆ.

ಮೊದಲಿನಿಂದಲೂ ಹಿರಿಯ ಲಿಂಗಾಯತ ನಾಯಕನಾದ ವಿ ಸೋಮಣ್ಣ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣೀತ್ತು. ಆದರೆ, ಬಿಜೆಪಿ ಹೈಕಮಾಂಡ್‌ ವಿ ಸೋಮಣ್ಣ ಅವರಿಗೆ ಕೇಂದ್ರ ಸಚಿವ ಸ್ಥಾನವನ್ನ ನೀಡಿದೆ. ಇದೀಗ ಕೇಂದ್ರ ಸಚಿವ ಸ್ಥಾ‌ನದ ಜೊತೆಗೆ ರಾಜ್ಯಾಧ್ಯಕ್ಷ ಸ್ಥಾ‌ನ ಎಂದಾದರೆ ಒಪ್ಪಿಕೊಳ್ಳಬಹುದು ಎಂಬ ಮನಸ್ಥಿತಿಗೂ ಸೋಮಣ್ಣ ತಲುಪಿದ್ದರು. ಆದರೆ, ವಿ ಸೋಮಣ್ಣ ಅವರಿಗೆ ಕೇಂದ್ರ ಸಚಿವರಾಗಿಯೇ ಒಳ್ಳೆಯ ಕೆಲಸ ಮಾಡುವಂತೆ ಹೈಕಮಾಂಡ್ ಸೂಚಿಸಿದೆ ಎನ್ನಲಾಗಿದೆ.

ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ‌ ಹೆಸರಿಗೆ ಪರ್ಯಾಯವಾಗಿ ಹಿಂದುಳಿದ ವರ್ಗಗಳ ಕೋಟಾದಲ್ಲಿ ವಿ. ಸುನೀಲ್ ಕುಮಾರ್, ಲಿಂಗಾಯತ ಮತ್ತು ಪಂಚಮಸಾಲಿ ಕೋಟಾದಲ್ಲಿ ಅರವಿಂದ ಬೆಲ್ಲದ್ ಮತ್ತು ದಲಿತ ಕೋಟಾದಲ್ಲಿ ಅರವಿಂದ ಲಿಂಬಾವಳಿ ಅವನ್ನು ಪರಿಗಣಿಸಬಹುದು ಎಂಬ ಅಭಿಪ್ರಾಯವನ್ನೂ ಬಿಜೆಪಿ ಹೈಕಮಾಂಡ್ ಹೊಂದಿದೆ ಎಂಬುದನ್ನು ಮಾಜಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಇತ್ತ ಯುವ ನಾಯಕರನ್ನ ಹಾಗೂ ಪಕ್ಷದಲ್ಲಿನ ಹಿರಿಯರನ್ನ ಒಗ್ಗೂಡಿಸಿಕೊಂಡು ಹೋಗುವ ಚಾಣಾಕ್ಷತನ ಇರುವುದು ವಿ ಸುನೀಲ್ ಕುಮಾರ್ ಅವರಿಗೆ ಎಂಬ ಮಾತುಗಳು ಕೇಳಿ ಬಂದಿದ್ದು, ಈಗಾಗಲೇ ಬಿಜೆಪಿ ವರಿಷ್ಠರು ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ವಿ ಸುನೀಲ್‌ ಕುಮಾರ್‌ ಅವರ ಜೊತೆಗೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+