ಅಧಿಕಾರ ಇದ್ದಾಗ ಅಭಿವೃದ್ಧಿ ಮಾಡಲಿಲ್ಲ, ಈಗ ಕಲ್ಯಾಣ ಕರ್ನಾಟಕಕ್ಕೆ ಅನುದಾನ ಬೇಡುವ ನಾಟಕ: ವಿಜಯೇಂದ್ರ
ಬೆಂಗಳೂರು: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಕೇಳಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ. ಐದಾರು ದಶಕಗಳಿಂದ ಅಧಿಕಾರ ಅನುಭವಿಸಿ, ಒಂಬತ್ತು ಬಾರಿ ಶಾಸಕ, ಸಂಸದ, ಕೇಂದ್ರ ಸಚಿವರು, ರಾಜ್ಯಸಭೆ ವಿಪಕ್ಷ ನಾಯಕರು, ಎಐಸಿಸಿ ಅಧ್ಯಕ್ಷರಾಗಿರುವ ನಂತರವೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಮಲ್ಲಿಕಾರ್ಜುನ್ ಖರ್ಗೆ ಅವರು ಈಗ ಅಸಹಾಯಕರಂತೆ ಬೇಡುತ್ತಿರುವ ನಾಟಕ, ನಿಮ್ಮ ವೈಫಲ್ಯಗಳ ಪ್ರದರ್ಶನವಷ್ಟೇ ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ವಿಜಯೇಂದ್ರ, ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವಿದ್ದದ್ದು, ಈಗ ರಾಜ್ಯದಲ್ಲೂ ಕಾಂಗ್ರೆಸ್ ಸರ್ಕಾರವೇ ಇರುವುದನ್ನು ವಿಜಯೇಂದ್ರ ಉಲ್ಲೇಖಿಸಿ, ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಮಾಡದೇ, ಈಗ ವೇದಿಕೆ ಮೇಲೆ ದಯನೀಯ ನಾಟಕವಾಡಿ ಜನರನ್ನು ಮರುಳು ಮಾಡುವುದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ವಿಶೇಷವಾಗಿ ಕಲ್ಯಾಣ ಕರ್ನಾಟಕದ ಜನರು ಕಾಂಗ್ರೆಸ್ ಮೇಲೆ ಇಟ್ಟ ಭರವಸೆಯನ್ನು ಸ್ವಾರ್ಥ ರಾಜಕೀಯಕ್ಕಾಗಿ ಬಳಸಿಕೊಂಡಿರುವುದು ಈಗ ಸ್ಪಷ್ಟವಾಗಿದೆ ಎಂದು ಆರೋಪಿಸಿದ್ದಾರೆ.

ಬೇಡುವ ನಾಟಕ ಆಡಬೇಡಿ
ಅಧಿಕಾರವಿದ್ದಾಗ ಅಭಿವೃದ್ಧಿ ಮಾಡದೆ, ಈಗ ವೇದಿಕೆ ಮೇಲೆ ದಯನೀಯವಾಗಿ ಬೇಡುವ ನಾಟಕವಾಡಿ ಜನರನ್ನು ಮರುಳು ಮಾಡುವುದು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಪ್ರಸಿದ್ಧ ಸೋಮನಾಥ ಕ್ಷೇತ್ರದಲ್ಲಿ ದೇವರ ದರ್ಶನ ಪಡೆದ ಪ್ರಧಾನಿಯವರನ್ನು ಟೀಕಿಸುವ ಮಾನ್ಯ ಖರ್ಗೆಯವರೇ, ಇನ್ನು ಎಷ್ಟು ದಿನ ನಿಮ್ಮೊಳಗಿರುವ ನಂಜನ್ನು ಬಯಲು ಮಾಡಿಕೊಳ್ಳುತ್ತೀರಿ? ನಾಡಿನ ಇತಿಹಾಸ ಮತ್ತು ಅಸ್ಮಿತೆಯ ಮೇಲೆ ನಿಮಗೇಕೆ ಇಷ್ಟು ಅಸಹನೆ? ಸೋಮನಾಥ ಭಾರತದ ಪುನರುತ್ಥಾನದ ಸಂಕೇತ. ಅದನ್ನು ಚುನಾವಣೆಗೆ ತಳುಕು ಹಾಕುವುದು ನಿಮ್ಮ ವೈಚಾರಿಕ ದಿವಾಳಿತನವನ್ನು ತೋರಿಸುತ್ತದೆ ಎಂದಿದ್ದಾರೆ.
ನಿಮ್ಮ ಪಕ್ಷದ ನಾಯಕರು ದೇಗುಲದ ಪುನರುತ್ಥಾನಕ್ಕೂ ಅಡ್ಡಿ ಪಡಿಸಿದ್ದ ಮಹಾನುಭಾವರು. ದೇಶದ ಕೋಟ್ಯಂತರ ಹಿಂದೂಗಳ ಧಾರ್ಮಿಕ ಶ್ರದ್ಧೆಗಳ ಬಗ್ಗೆ ಮಾತನಾಡುವ ನೈತಿಕತೆ ನಿಮ್ಮ ಪಕ್ಷ ಎಂದೋ ಕಳೆದುಕೊಂಡಿದೆ. ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇತಿಹಾಸದ ಪುನರುತ್ಥಾನದ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟುತ್ತಿದ್ದಾರೆ. ಮೋದಿ ಅವರ ನೇತೃತ್ವದಲ್ಲಿ, ಈ 11 ವರ್ಷಗಳಲ್ಲಿ, 25 ಕೋಟಿ ಜನರನ್ನು ಬಡತನದಿಂದ ಮೇಲೆತ್ತಲಾಗಿದೆ ಎಂದು ವಿಜಯೇಂದ್ರ ಖರ್ಗೆ ಅವರಿಗೆ ತಿರುಗೇಟು ನೀಡಿದ್ದಾರೆ.

ಒಂದು ದಿನವೂ ವಿರಮಿಸದೆ, ದೇಶದ ಅಭಿವೃದ್ಧಿಗಾಗಿ ನಿರಂತರ ಕೆಲಸ ಮಾಡುತ್ತಿರುವ ಹೆಮ್ಮೆಯ ಪ್ರಧಾನಿಗಳ ಬಗ್ಗೆ, ಸತತವಾಗಿ ಅಧಿಕಾರದ ಸ್ಥಾನದಲ್ಲಿದ್ದೂ, ಅಭಿವೃದ್ಧಿ ಕೆಲಸ ಮಾಡದೆ, ನಿಮ್ಮ ಪಕ್ಷದ ವೇದಿಕೆಯಲ್ಲಿ, ನೀವು ಏನೇ ಮಾತನಾಡಿದರೂ, ಜನರು ಖಂಡಿತ ಮರುಳಾಗುವುದಿಲ್ಲ ಎಂದಿದ್ದಾರೆ. ಖರ್ಗೆ ಅವರ ಹೇಳಿಕೆಗಳು ಹಾಗೂ ಕಾಂಗ್ರೆಸ್‌ನ ನಡೆ ಜನರ ವಿಶ್ವಾಸ ಕಳೆದುಕೊಳ್ಳುವಂತೆ ಮಾಡಿದ್ದು, ಮುಂದಿನ ದಿನಗಳಲ್ಲಿ ಅದರ ಪರಿಣಾಮ ಸ್ಪಷ್ಟವಾಗಿ ಕಾಣಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಎಚ್ಚರಿಸಿದ್ದಾರೆ.
ಖರ್ಗೆ ಹೇಳಿದ್ದೇನು?
ಕಲಬುರಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವಂತೆ ವೇದಿಕೆಯಲ್ಲೇ ಡಿಕೆ ಶಿವಕುಮಾರ್ ಅವರಿಗೆ ಕೇಳಿದ್ದರು. ನೀವು ಇಲ್ಲಿ ಹುಟ್ಟುವುದೂ ಬೇಡ, ನಾವು ನಿಮ್ಮ ಭಾಗದಲ್ಲಿ ಹುಟ್ಟುವುದೂ ಬೇಡ, ಮೈಸೂರು ಹಾಗೂ ಕನಕಪುರ ಕ್ಷೇತ್ರಗಳಲ್ಲಿ ಆಗಿರುವ ಅಭಿವೃದ್ಧಿಯ ಶೇ 75ರಷ್ಟಾದರೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಕೊಡಿ ಎಂದು ಕೇಳಿದ್ದರು. ಈ ಬಗ್ಗೆ ವಿಜಯೇಂದ್ರ ಟೀಕಿಸಿದ್ದಾರೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications