Encounter: ಪೊಲೀಸರು ಕಂಡ ತಕ್ಷಣ ನಕ್ಸಲರು ಗುಂಡಿನ ದಾಳಿ; ಎನ್‌ಕೌಂಟರ್ ಅನಿವಾರ್ಯವಾಗಿತ್ತು ಎಂದ ಪರಮೇಶ್ವರ್
ಬೆಂಗಳೂರು, ನವೆಂಬರ್ 19: ಕಳೆದೊಂದು ವಾರದಿಂದ ನಕ್ಸಲ್ ಚಟುವಟಿಕೆಗಳ ಮೇಲೆ ಪೊಲೀಸರು ಮೇಲೆ ನಿಗಾವಹಿಸಿದ್ದರು. ಕಳೆದ ವಾರ ರಾಜು ಮತ್ತು ಲತಾ ಎಂಬ ನಕ್ಸಲರು ಪತ್ತೆ ಆಗಿದ್ದ ಹಿನ್ನೆಲೆಯಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದರು. ನಿನ್ನೆ ಕೂಂಬಿಂಗ್ ವೇಳೆ ಮಾಹಿತಿ ಆಧರಿಸಿ ಕಾರ್ಯಾಚರಣೆ ಮುಂದುವರಿಸಿದ್ದರು. ಕಾರ್ಯಾಚರಣೆ ವೇಳೆ ಪೊಲೀಸರು ಕಂಡ ತಕ್ಷಣ ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಎನ್‌ಕೌಂಟರ್ ಮಾಡಬೇಕಾದ ಪರಿಸ್ಥಿತಿ ಬಂದಿತ್ತು ಎಂದು ಪರಮೇಶ್ವರ್ ಹೇಳಿದ್ದಾರೆ.
ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ಇಬ್ಬರು ಮೂವರು ತಪ್ಪಿಸಿಕೊಂಡಿದ್ದಾರೆ ಎಂಬುದು ಈವರೆಗಿನ ಮಾಹಿತಿ. ಹೆಚ್ಚಿನ ಮಾಹಿತಿ ಲಭ್ಯವಾದ ನಂತರ ಹಂಚಿಕೊಳ್ಳುತ್ತೇನೆ ಎಂದು ಗೃಹ ಸಚಿವರಾದ ಪರಮೇಶ್ವರ್ ಅವರು ತಿಳಿಸಿದ್ದಾರೆ.

ಅನುದಾನ ವಿಚಾರವಾಗಿ ಶಾಸಕ ಗವಿಯಪ್ಪ ಅಸಮಾದಾನದ ಕುರಿತು ಪ್ರತಿಕ್ರಿಯಿಸಿ, ಮುಖ್ಯಮಂತ್ರಿಯವರು ಕೆಕೆಆರ್‌ಡಿಬಿ ಹಣ ಬಿಡುಗಡೆ ಮಾಡಿದ್ದಾರೆ. ಅಜಯ್ ಸಿಂಗ್ ನೇತೃತ್ವದಲ್ಲಿ ಪ್ರತ್ಯೇಕವಾಗಿ ಸಭೆ ಸಭೆ ನಡೆಸಿದ್ದಾರೆ. ಪ್ರತ್ಯೇಕವಾಗಿ ಸಭೆ ಮಾಡಿ ಅಲೋಕೆಷನ್ ಬಗ್ಗೆ ಕ್ರಮ ತೆಗೆದುಕೊಂಡಿದ್ದಾರೆ. ಕೋವಿಡ್ ಅಕ್ರಮದ ಬಗ್ಗೆ ಜಸ್ಟೀಸ್ ಮೈಕಲ್ ಡಿ.ಕುನ್ಹಾ ಅವರು ಕೊಟ್ಟಿರುವ ವರದಿಯನ್ನು ಪರಿಶೀಲಿಸುತ್ತೇವೆ ಎಂದು ಹೇಳಿದರು.
ಮಹಾರಾಷ್ಟ್ರ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟವು ಗ್ಯಾರಂಟಿ ಕಾರ್ಡ್ ಬಿಡುಗಡೆ ಮಾಡಿದ ಬಳಿಕ ಬಿಜೆಪಿಯವರು, 'ಕರ್ನಾಟಕದಲ್ಲಿ ಐದು ಗ್ಯಾರಂಟಿ ಯೋಜನೆಗಳು ಅನುಷ್ಟಾನಗೊಂಡಿಲ್ಲ. ಮಹಾರಾಷ್ಟ್ರದಲ್ಲಿಯೂ ಅನುಷ್ಟಾನವಾಗುವುದಿಲ್ಲ' ಎಂದು ಸುಳ್ಳು ಜಾಹೀರಾತು ನೀಡಿದ್ದಾರೆ. ಇದಕ್ಕೆ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಕುರಿತು ಚಿಂತನೆ ನಡೆಸಲಾಗಿದೆ. ಮಹಾರಾಷ್ಟ್ರ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಕರ್ನಾಟಕದ ಬಗ್ಗೆ ಅವಮಾನ ಆಗುವ ರೀತಿಯಲ್ಲಿ ಜಾಹೀರಾತು ನೀಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ಗೃಹ ಡಾ. ಜಿ.ಪರಮೇಶ್ವರ ಅವರು ಹೇಳಿದರು.
ನಮ್ಮ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳಿಗೆ ಬಜೆಟ್‌ನಲ್ಲಿ 56 ಸಾವಿರ ಕೋಟಿ ರೂ. ಮೀಸಲಿಟ್ಟು, ಸಂಪೂರ್ಣವಾಗಿ ಅನುಷ್ಟಾನಗೊಳಿಸಿದೆ. ಇದಕ್ಕೆ ವಿರುದ್ಧವಾಗಿ ಇಡೀ ದೇಶದಲ್ಲಿ ಕರ್ನಾಟಕದ ಬಗ್ಗೆ ಅವಮಾನ ಆಗುವ ರೀತಿಯಲ್ಲಿ ಜಾಹೀರಾತು ಪ್ರಕಟಿಸಿದ್ದಾರೆ ಎಂದರೆ ನಾವು ಖಂಡಿತವಾಗಿ ಸಹಿಸುವುದಿಲ್ಲ. ಸಂಬಂಧಪಟ್ಟ ಐದು ಇಲಾಖೆಗಳು ಜಾಹೀರಾತು ನೀಡಿದವರ ಮೇಲೆ ಕ್ರಮ ತೆಗೆದುಕೊಳ್ಳಲು ದೂರು ನೀಡಬೇಕಾಗುತ್ತದೆ ಎಂದು ಹೇಳಿದರು.
ತುಮಕೂರಿನಲ್ಲಿ ಗ್ಯಾರಂಟಿ ಯೋಜನೆಗ ಸಮಾವೇಶ ಹಮ್ಮಿಕೊಂಡಿಲ್ಲ. ತುಮಕೂರು ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ಹಾಗೂ ಅನೇಕ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಗುತ್ತದೆ. ಇದೇ ರೀತಿ ಎಂಟು ತಿಂಗಳ ಹಿಂದೆಯೂ ಕಾರ್ಯಕ್ರಮ ಮಾಡಲಾಗಿತ್ತು ಎಂದು ತಿಳಿಸಿದರು.
ಬಿಜೆಪಿ ಮತ್ತು ಜೆಡಿಎಸ್‌ನವರು ಸರ್ಕಾರದಲ್ಲಿ ಅನುದಾನವಿಲ್ಲ, ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ ಎಂದು ಜನರಲ್ಲಿ ತಪ್ಪು ಮಾಹಿತಿಯನ್ನು ಹೇಳಿಕೊಂಡು ಬರುತ್ತಿದ್ದಾರೆ. ಎಲ್ಲ ಇಲಾಖೆಗಳಿಗೆ ಅನುದಾನ ಕೊಟ್ಟಿದ್ದೇವೆ. ಯೋಜನೆಗಳನ್ನು ಜನಸಮುದಾಯಕ್ಕೆ ತಲುಪಿಸುತ್ತಿದ್ದೇವೆ ಎಂಬ ಸಂದೇಶ ಈ ಕಾರ್ಯಕ್ರಮದಿಂದ ಹೋಗುತ್ತದೆ ಎಂದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications