Get Updates
Get notified of breaking news, exclusive insights, and must-see stories!

Siddaramaiah: ವಿಕ್ರಂ ಗೌಡ ಎನ್ಕೌಂಟರ್ ಮಾಡಿದ್ಯಾಕೆ? : ಸತ್ಯ ಬಿಚ್ಚಿಟ್ಟ ಸಿದ್ದರಾಮಯ್ಯ

ಬೆಂಗಳೂರು, ನವೆಂಬರ್ 20: ವಿಕ್ರಂಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದು, ನಕ್ಸಲ್ ಚಟುವಟಿಕೆಯನ್ನು ನಿಗ್ರಹಿಸಲು ಆತನನ್ನು ಎನ್ ಕೌಂಟರ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಈ ಕುರಿತು ಬುಧವಾರ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಕ್ಸಲ್ ಚಟುವಟಿಕೆಯಲ್ಲಿ ಪ್ರಮುಖವಾಗಿ ಭಾಗಿಯಾಗಿದ್ದ ವಿಕ್ರಂಗೌಡ ಅವರು ಎನ್ ಕೌಂಟರ್ ನಲ್ಲಿ ಹತನಾಗಿರುವ ಬಗ್ಗೆ ಪ್ರಗತಿಪರ ಚಿಂತಕರು ಅನುಮಾನಗಳನ್ನು ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿಕ್ರಂಗೌಡ ಅವರಿಗೆ ಶರಣಾಗುವಂತೆ ಆದೇಶ ನೀಡಲಾಗಿತ್ತು. ಆದರೆ ಅವರು ಶರಣಾಗಿರಲಿಲ್ಲ. ವಿಕ್ರಂಗೌಡ ಅವರನ್ನು ಹಿಡಿದವರಿಗೆ ಕೇರಳಸರ್ಕಾರ 25 ಲಕ್ಷ ಹಾಗೂ ಕರ್ನಾಟಕ ಸರ್ಕಾರ 5 ಲಕ್ಷ ಬಹುಮಾನವನ್ನು ಘೋಷಿಸಿತ್ತು ಎಂದು ವಿವರಿಸಿದರು.

Vikram Gowda Encounter Was Carried Out To Curb Naxal Activity Said Siddaramaiah

ನವದೆಹಲಿ ಪ್ರವಾಸದ ವಿವರ ನೀಡಿದ ಮುಖ್ಯಮಂತ್ರಿಗಳು, ನಾಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಲು ಸಮಯ ಕೋರಲಾಗಿದೆ. ರಾಜ್ಯಕ್ಕೆ ನಬಾರ್ಡ್ ನಿಂದ ರಾಜ್ಯಕ್ಕೆ ನೀಡಲಾಗುವ ಸಾಲದ ಮೊತ್ತವನ್ನು ಕಳೆದ ವರ್ಷದ 5600 ಕೋಟಿ ರೂ.ಗಳಿಂದ , ಈ ವರ್ಷ 2340 ಕೋಟಿ ರೂ. ಗಳಿಗೆ ಇಳಿಸಲಾಗಿದೆ. ಆದ್ದರಿಂದ ಕೇಂದ್ರ ವಿತ್ತ ಸಚಿವರನ್ನು ಭೇಟಿಯಾಗಿ ಈ ಬಗ್ಗೆ ಮನವಿ ಮಾಡಿಕೊಳ್ಳಲಾಗುವುದು. ಈ ಮಧ್ಯೆ ಸಮಯಾವಕಾಶವಿದ್ದಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಲಾಗುವುದು ಎಂದರು.

ವಿಕ್ರಂಗೌಡ ಹತ್ಯೆ ವಿಚಾರವಾಗಿ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್‌ ಅವರು ಮಾತನಾಡಿ, ನಕ್ಸಲ್ ವಿಕ್ರಂಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಇಟ್ಟುಕೊಂಡಿದ್ದ. ಪೊಲೀಸರು ಶೂಟ್ ಮಾಡದೇ ಇದ್ದರೆ, ಅವನೇ ದಾಳಿ ನಡೆಸುತ್ತಿದ್ದ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ವಿಕ್ರಂಗೌಡ ಮೇಲೆ ಕೊಲೆ ಸೇರಿದಂತೆ 60ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಿವೆ. ಆಟೋಮ್ಯಾಟಿಕ್ ಮಷಿನ್ ಗನ್ ಇಟ್ಟುಕೊಂಡಿದ್ದ. ಈ ಹಿಂದೆ ಶರಣಾಗಾತಿಗಾಗಿ ಪ್ರಯತ್ನಗಳು ನಡೆದಿದ್ದವು. ಅವರ ಸಂಬಂಧಿಕರು ಸಹ ಶರಣಾಗುವಂತೆ ಹೇಳಿದ್ದರು, ವಿಕ್ರಂಗೌಡ ಒಪ್ಪಿರಲಿಲ್ಲ ಎಂದರು.

ಕಾರ್ಕಳದಲ್ಲಿ ಎಎನ್‌ಎಫ್ ಹೆಡ್‌ಕ್ವಾಟರ್ಸ್ ಇದೆ. ನಕ್ಸಲ್ ಚಟುವಟಿಕೆಗಳ ಮೇಲೆ ನಿರಂತರವಾಗಿ ನಿಗಾ ಇಟ್ಟುಕೊಂಡು ಬರಲಾಗಿದೆ. ಕಳೆದ ವಾರ ನಕ್ಸಲ್ ಲತಾ ಎಂಬುವರು ಗುರುತಿಸಲಾಗಿತ್ತು. ಕೂಬಿಂಗ್ ನಡೆಸಲಾಗಿತ್ತು. ಅವರನ್ನ ಹಾಗೇ ಬಿಟ್ಟುಕೊಂಡು, ಏನು ಮಾಡಿದರು ನಡೆಯುತ್ತದೆ ಎಂದು ಸಮ್ಮನಿರಲು ಸಾಧ್ಯವಿಲ್ಲ ಎಂದು ಹೇಳಿದರು.

ಎನ್‌ಕೌಂಟರ್ ಬಗ್ಗೆ ಬಿಜೆಪಿ ಮತ್ತು ಕಾಂಗ್ರೆಸ್ ವ್ಯತ್ಯಾಸವಿಲ್ಲ ಎಂಬ ಕೆಲವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, ನಕ್ಸಲ್ ವಿಚಾರದಲ್ಲಿ ಪಕ್ಷದ ಪ್ರಶ್ನೆ ಬರುವುದಿಲ್ಲ. ಜನರ ಸುರಕ್ಷತೆ ಮುಖ್ಯವಾಗುತ್ತದೆ ಎಂದು ಗೃಹ ಸಚಿವರಾದ ಡಾ. ಜಿ ಪರಮೇಶ್ವರ್‌ ಅವರು ಹೇಳಿದರು‌.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+