Breaking; ಗ್ರಾಮ ಲೆಕ್ಕಿಗರ ಹುದ್ದೆ ಪದನಾಮ ಬದಲಿಸಿ ಸರ್ಕಾರದ ಆದೇಶ

ಬೆಳಗಾವಿ, ಡಿಸೆಂಬರ್ 06; ಕರ್ನಾಟಕ ಸರ್ಕಾರ ಕಂದಾಯ ಇಲಾಖೆಯಲ್ಲಿನ ಗ್ರಾಮ ಲೆಕ್ಕಿಗರ ಪದನಾಮವನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಮಾನ್ಯ ಕಂದಾಯ ಸಚಿವರ ಟಿಪ್ಪಣಿಯನ್ನು ಆಧರಿಸಿ ಈ ಕುರಿತು ಆದೇಶ ಹೊರಡಿಸಲಾಗಿದೆ.

ಬುಧವಾರ ಈ ಕುರಿತು ಕಂದಾಯ ಇಲಾಖೆ (ಸೇವೆಗಳು-2) ಸರ್ಕಾರದ ಅಧೀನ ಕಾರ್ಯದರ್ಶಿ ಹರೀಶ್ ಆದೇಶ ಹೊರಡಿಸಿದ್ದಾರೆ. ಕಂದಾಯ ಸಚಿವರು ಟಿಪ್ಪಣಿಯಲ್ಲಿ ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗ ಪದನಾಮವನ್ನು 'ಗ್ರಾಮ ಆಡಳಿತ ಅಧಿಕಾರಿ' ಎಂದು ಬದಲಾಯಿಸುವ ಬಗ್ಗೆ ಪರಿಶೀಲಿಸುವಂತೆ ಸೂಚಿಸಿದ್ದರು.

ಆದೇಶದ ಪ್ರಕಾರ ಗ್ರಾಮ ಲೆಕ್ಕಿಗ ಹುದ್ದೆಯ ಪದನಾಮವನ್ನು 'ಗ್ರಾಮ ಆಡಳಿತ ಅಧಿಕಾರಿ' (Village Administrative Officer) ಎಂದು ಬದಲಾವಣೆ ಮಾಡಲಾಗಿದೆ. ಎಲ್ಲಾ ಪ್ರಾದೇಶಿಕ ಆಯುಕ್ತರು ಪದನಾಮವನ್ನು ಬದಲಾವಣೆ ಮಾಡುವ ಸಂಬಂಧ ವರದಿ ಸಲ್ಲಿಕೆ ಮಾಡಿದ್ದರು.

Village Accountant Post Name Change As Village Administrative Officer

ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಈ ಆದೇಶ ಹೊರಡಿಸಲಾಗಿದೆ. ಕಂದಾಯ ಇಲಾಖೆಯಲ್ಲಿನ ಗ್ರಾಮಲೆಕ್ಕಿಗರ (Village Accountant) ಹುದ್ದೆಯ ವೇತನ ಶ್ರೇಣಿ, ನೇಮಕಾತಿ ವಿಧಾನ ಅಥವಾ ಕರ್ತವ್ಯ ಮತ್ತು ಜವಾಬ್ದಾರಿಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಗ್ರಾಮ ಲೆಕ್ಕಿಗರು (Village Accountant) ಎಂಬ ಪದನಾಮವನ್ನು 'ಗ್ರಾಮ ಆಡಳಿತ ಅಧಿಕಾರಿ' (Village Administrative Officer) ಎಂದು ಮರು ಪದನಾಮಿಕರಿಸಿ ಆದೇಶಿಸಲಾಗಿದೆ.

ಸದರಿ ಪದನಾಮ ಬದಲಾವಣೆಯ ಪ್ರಸ್ತಾವನೆಯನ್ನು ಕಂದಾಯ ನಿಯಮಗಳಲ್ಲಿ ಗ್ರಾಮ ಲೆಕ್ಕಿಗರ ಹುದ್ದೆಗ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಗ್ರಾಮ ಲೆಕ್ಕಿಗರ ಹುದ್ದೆಗೆ ಅನ್ವಯಿಸುವಂತೆ ಸೂಕ್ತ ತಿದ್ದುಪಡಿ ತರಲು ಪ್ರತ್ಯೇಕವಾಗಿ ಕ್ರಮ ವಹಿಸಲಾಗುತ್ತದೆ.

ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ?; ಗ್ರಾಮ ಲೆಕ್ಕಿಗರ ಹುದ್ದೆಯನ್ನು ದ್ವೀತಿಯ ಪಿಯುಸಿ ಪರೀಕ್ಷೆ ಅಥವಾ CBSE ಅಥವಾ ICSE ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ, ಆಯಾಯ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುತ್ತಿದೆ. ಆದರೆ ಸರ್ಕಾರ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಾಕಾತಿ ಮಾಡಲು ಬಯಸಿದೆ. ಈ ಕುರಿತು ವರದಿ ನೀಡಲು ಸಮಿತಿಯನ್ನು ಸಹ ರಚನೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+