Gram Panchayat: ಗ್ರಾಮ ಆಡಳಿತ ಅಧಿಕಾರಿಗಳ ನಿಯೋಜನೆ ರದ್ದು, ಮಹತ್ವದ ಆದೇಶ

ಬೆಂಗಳೂರು, ಜನವರಿ 22: ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಿಯೋಜನೆ ರದ್ದುಗೊಳಿಸುವ ಕಾರ್ಯ ಆರಂಭವಾಗಿದೆ. ಕಂದಾಯ ಇಲಾಖೆ, ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ ಈ ಕುರಿತು ಆದೇಶದ ಮೂಲಕ ಮಾಹಿತಿ ನೀಡಿವೆ. ಸುತ್ತೋಲೆಯಲ್ಲಿ ನಿಯೋಜನೆ ಮೇಲೆ ನೇಮಕಗೊಂಡವರನ್ನು ಮೂಲ ಹುದ್ದೆಯಲ್ಲಿ ಮುಂದುವರೆಯಲು ಅವಕಾಶ ನೀಡಬೇಕು ಎಂದು ಸೂಚನೆ ನೀಡಲಾಗಿದೆ.

ಈ ಕುರಿತು ರಾಜೇಂದರ್ ಕುಮಾರ್ ಕಟಾರಿಯಾ, ಸರ್ಕಾರದ ಪ್ರಧಾನ ಕಾರ್ಯದರ್ಶಿ ಕಂದಾಯ ಇಲಾಖೆ ಸುತ್ತೋಲೆಯಲ್ಲಿ ಮಾಹಿತಿ ನೀಡಿದ್ದಾರೆ. ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳನ್ನು ಅವರು ನೇಮಕಗೊಂಡ ಮೂಲ ಹುದ್ದೆಯಲ್ಲಿಯೇ ಕರ್ತವ್ಯಕ್ಕೆ ನಿಯೋಜಿಸುವಂತೆ ಸರ್ಕಾರದಿಂದ ಈಗಾಗಲೇ ಹಲವಾರು ಬಾರಿ ನಿರ್ದೇಶನ/ ಸೂಚನೆಗಳನ್ನು ನೀಡಲಾಗಿದ್ದರೂ ಸಹ ಗ್ರಾಮ ಆಡಳಿತ ಅಧಿಕಾರಿಗಳು ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸದೇ ನಿಯೋಜನೆ/ ಅನ್ಯ ಕರ್ತವ್ಯದ ಆಧಾರದ ಮೇಲೆ ಪ್ರಾದೇಶಿಕ ಆಯುಕ್ತರ/ ಜಿಲ್ಲಾಧಿಕಾರಿಗಳ/ ಉಪವಿಭಾಗಾಧಿಕಾರಿ/ ತಹಶೀಲ್ದಾರ್ ಕಛೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ ಎಂದು ಹೇಳಿದ್ದಾರೆ.

Village Administrative Officers Transfer Order Details

ಸುತ್ತೋಲೆಯ ವಿವರಗಳು: ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಕಂದಾಯ ಇಲಾಖೆಯ ಕಾರ್ಯ ಸ್ವರೂಪವನ್ನು ಸರಳೀಕರಣಗೊಳಿಸಿ ಡಿಜಿಟಲೀಕರಣ ಮಾಡುವ ಸಂಬಂಧ ಹಲವು ಜನಪರ ಯೋಜನಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಬಗರ್ ಹುಕುಂ/ Land Beat App/ ದರಖಾಸ್ತು ಪೋಡಿಯ 1 to 5 ಪ್ರಕರಣಗಳು/ Adhar Seeding/ ಕಂದಾಯ ಇಲಾಖೆಯ ಕಡತಗಳ ಗಣಕೀಕರಣ ಹಾಗೂ ಇನ್ನಿತರ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದ್ದು, ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಕೊರತೆಯಿಂದಾಗಿ ಹಾಲಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಮೇಲೆ ಹಚ್ಚಿನ ಕಾರ್ಯದೊತ್ತಡ ಉಂಟಾಗುತ್ತಿರುತ್ತದೆ ಎಂದು ವಿವರಿಸಿದ್ದಾರೆ.

ಆದುದರಿಂದ ಪ್ರಾದೇಶಿಕ ಆಯುಕ್ತರ/ ಜಿಲ್ಲಾಧಿಕಾರಿಗಳ/ ಉಪ ವಿಭಾಗಾಧಿಕಾರಿ/ ತಹಶೀಲ್ದಾರ್ ಕಛೇರಿಗಳಲ್ಲಿ ನಿಯೋಜನೆ/ ಅನ್ಯ ಕರ್ತವ್ಯದ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳನ್ನು ಕೂಡಲೇ ಅವರ ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಸೂಚಿಸಿ ಬಿಡುಗಡೆ ಮಾಡುವಂತೆ ಸೂಚಿಸಿದೆ.

ಈ ಬಗ್ಗೆ ಕೈಗೊಂಡಿರುವ ಕ್ರಮದ ಕುರಿತು ದಿನಾಂಕ 27.01.2025ರಂದು ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ಎಲ್ಲಾ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಈ ಸೂಚನೆಯನ್ನು ಉಲ್ಲಂಘಿಸಿದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಅಖಿಲ ಭಾರತ ಸೇವಗಳು (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು, 1969 ಹಾಗೂ ಕರ್ನಾಟಕ ನಾಗರಿಕ ಸೇವೆ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957 ಮತ್ತು ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳು 1966 ಗಳಡಿಯಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಲಾಗಿದೆ.

ಈಗಾಗಲೇ ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳು ಈ ನಿಯೋಜನೆ ಸೇವೆಯನ್ನು ರದ್ದುಗೊಳಿಸುತ್ತಿವೆ. ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇವೆಗೆ ಸೇರಿದ 115 ವೈದ್ಯಾಧಿಕಾರಿಗಳು ಮತ್ತು ತಜ್ಞ ವೈದ್ಯರ ನಿಯೋಜನಾ ಅವಧಿ ಮುಕ್ತಾಯಗೊಂಡಿದ್ದು, ಅವರನ್ನು ಮಾತೃ ಇಲಾಖೆ ಸೇವೆಗೆ ವಾಪಸ್ ಕರೆಸಿಕೊಳ್ಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+