Vinay Kulkarni: ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದುಗೊಳಿಸಿ ಆದೇಶ

Vinay Kulkarni: ಧಾರವಾಡದ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು ರದ್ದುಪಡಿಸಲಾಗಿದೆ. ವಿಧಾನಸಭೆ ಕಾರ್ಯದರ್ಶಿ ಶನಿವಾರ (ಮೇ 2) ಈ ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ.

ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಗಳು ಅಧಿಕೃತ ಆದೇಶ ಹೊರಡಿಸಿದ್ದಾರೆ. ಧಾರವಾಡ ಜಿ.ಪಂ. ಸದಸ್ಯರಾಗಿದ್ದ ಯೋಗೀಶ್ ಗೌಡ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತೀರ್ಪು ಪ್ರಕಟಿಸಿತ್ತು. ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

Vinay Kulkarni Disqualified as MLA After Life Sentence in Yogish Gowda Murder Case Know detail

ಆದ್ದರಿಂದ ವಿನಯ್ ಕುಲಕರ್ಣಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ವಿಶೇಷ ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದ ದಿನವಾದ ಏಪ್ರಿಲ್ 15, 2026ರಿಂದಲೇ ಜಾರಿಗೆ ಬರುವಂತೆ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಲಾಗಿದೆ.

ಭಾರತೀಯ ಸಂವಿಧಾನದ ವಿಧಿ 191(1)(e) ಮತ್ತು ಜನಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 8ರ ಅಡಿಯಲ್ಲಿ ಈ ಅನರ್ಹತೆ ಆದೇಶವನ್ನು ಹೊರಡಿಸಲಾಗಿದೆ. ನಿಯಮಗಳ ಪ್ರಕಾರ ಯಾವುದೇ ಜನಪ್ರತಿನಿಧಿಗೆ ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ಜೈಲು ಶಿಕ್ಷೆಯಾದಲ್ಲಿ ಅವರು ತಕ್ಷಣವೇ ಶಾಸಕ ಸ್ಥಾನಕ್ಕೆ ಅನರ್ಹರಾಗುತ್ತಾರೆ.

ಕೋರ್ಟ್‌ ಶಿಕ್ಷೆ ಪ್ರಕಟಿಸಿದ ನಂತರವೂ ವಿಧಾನಸಭೆ ಸಚಿವಾಲಯ ಅನರ್ಹತೆ ಆದೇಶ ಹೊರಡಿಸಲು ವಿಳಂಬ ಮಾಡುತ್ತಿದೆ ಎಂದು ವಿಪಕ್ಷ ಬಿಜೆಪಿ ಗಂಭೀರವಾಗಿ ಆರೋಪ ಮಾಡಿತ್ತು. ವಿನಯ್ ಕುಲಕರ್ಣಿ ಅವರು ಮೇಲ್ಮನವಿ ಸಲ್ಲಿಸಿ ತಡೆಯಾಜ್ಞೆ ತರಲು ಸರ್ಕಾರ ಸಮಯಾವಕಾಶ ಮಾಡಿಕೊಡುತ್ತಿದೆ ಎಂದು ಬಿಜೆಪಿ ನಾಯಕರು ಆರೋಪ ಮಾಡಿದ್ದರು. ಆದರೆ ಇದೀಗ ವಿನಯ್ ಕುಲಕರ್ಣಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದ್ದು, ಇದೀಗ ಅವರು ಮಾಜಿ ಶಾಸಕರಾಗಿದ್ದಾರೆ.

2016ರಲ್ಲಿ ನಡೆದ ಧಾರವಾಡದ ಬಿಜೆಪಿ ಜಿ.ಪಂ ಸದಸ್ಯ ಯೋಗೀಶ್ ಗೌಡ ಅವರ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಮತ್ತು ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಏಪ್ರಿಲ್ 2026ರ ತೀರ್ಪಿನ ಅನ್ವಯ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ರದ್ದಾಗಿದ್ದು, ಇದು ಸುದೀರ್ಘ ಕಾನೂನು ಹೋರಾಟದ ತಾರ್ಕಿಕ ಅಂತ್ಯವಾದಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+