Vinay Kulkarni: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್, ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕಾಂಗ್ರೆಸ್ ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಪ್ ಸಿಕ್ಕಿದೆ. ಜನಪ್ರತಿನಿಧಿಗಳ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷೆಗೆ ತಡೆ ನೀಡುವಂತೆ ಕೋರಿದ್ದ ಕುಲಕರ್ಣಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಇಂದು ಶುಕ್ರವಾರ ಮಹತ್ವದ ಆದೇಶ ಹೊರಡಿಸಿದೆ.
ವಿನಯ್ ಕುಲಕರ್ಣಿ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಜನಪ್ರತಿನಿಧಿಗಳ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷೆಗೆ ಮಧ್ಯಂತರ ತಡೆ ನೀಡಿದೆ. ಆ ಆದೇಶವನ್ನು ಅಮಾನತಿನಲ್ಲಿಟ್ಟಿದೆ. ಜೊತೆಗೆ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಆದೇಶ ಪ್ರಕಟಿಸಿದೆ.

ಬಾಂಡ್, ಷರತ್ತು ಸಹಿತ ಜಾಮೀನು ನೀಡಿದ ಕೋರ್ಟ್
ವಿನಯ್ ಕುಲಕರ್ಣಿ ಸೇರಿದಂಥೆ ಒಟ್ಟು ಹತ್ತು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. 5,00,000 ರೂಪಾಯಿ ಬಾಂಡ್ ಮತ್ತು ಇಬ್ಬರು ಶೂರಿಟಿ ಪಡೆದು ಷರತ್ತು ಸಹಿತ ಸಹಿತ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶಿಸಿದೆ. ಜೈಲಿನಿಂದ ವಿನಯ್ ಕುಲಕರ್ಣಿ ಇಂದೇ ಬಿಡುಗಡೆ ಆಗಲಿದ್ದಾರೆ ಎಂದು ತಿಳಿದು ಬಂದಿದೆ.
ಧಾರವಾಡ ಜಿಲ್ಲೆ ಪಂಚಾಯಿತಿ ಸದಸ್ಯ, ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಎರಡು ತಿಂಗಳ ಹಿಂದೆ ಜನಪ್ರತಿನಿಧಿಗಳ ಕೋರ್ಟ್ ವಿನಯ್ ಸೇರಿದಂತೆ ಒಟ್ಟು 17 ಆರೋಪಿಗಳನ್ನು ಅಪರಾಧಿಗಳನ್ನಾಗಿ ಮಾಡಿ ದೋಷಿ ಎಂದು ಕರೆದಿತ್ತು. ವರ್ಷಗಳ ವಿಚಾರಣೆ ಬಳಿಕ ಪ್ರಕರಣ ಪ್ರಮುಖ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು. ಬಳಿಕ ವಿನಯ್ ಶಿಕ್ಷೆ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
ಧಾರವಾಡ ಪ್ರವೇಶಿಸಲಿರುವ ವಿನಯ್ ಕುಲಕರ್ಣಿ
ಜಾಮೀನಿಗೆ 5 ಲಕ್ಷ ವೈಯಕ್ತಿಕ ಬಾಂಡ್, ಅ ಷ್ಟೇ ಮೊತ್ತದ ಇಬ್ಬರು ಶ್ಯೂರಿಟಿ ಸಲ್ಲಿಸುವಂತೆ ತಿಳಿಸಿದೆ. ಹೈಕೋರ್ಟ್ ವಿಭಾಗೀಯ ಪೀಠವು ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆ ಹಾಗೂ ದೋಷಾರೋಪಣೆಯ ಆದೇಶದ ಜಾರಿಗೆ ತಾತ್ಕಾಲಿಕ ತಡೆ ಕೊಟ್ಟಿದೆ. ಇದರೊಂದಿಗೆ ವಿನಯ್ ಅವರಿಗೆ ಧಾರವಾಡ ಪ್ರವೇಶಿಸುವ ಹಕ್ಕು ಸಿಕ್ಕಂತಾಗಿದೆ. ಧಾರವಾಡ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಧಿಸುವ ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿಲ್ಲ.
ಹೊರಗಿದ್ದುಕೊಂಡೇ ರಾಜ್ಯ ವಿಧಾನಸಭಾ ಚುನಾವಣೆ ಪ್ರಚಾರ ನಡೆಸಿ ಗೆದ್ದು ಬಂದಿದ್ದ ವಿನಯ್ ಕುಲಕರ್ಣಿ ಇದೀಗ ವರ್ಷಗಳ ಬಳಿಕ ಧಾರವಾಡಕ್ಕೆ ಪ್ರವೇಶ ಸಿಗಲಿದೆ. ಸ್ವಕ್ಷೇತ್ರ ಜನರು, ಕುಟುಂಬವನ್ನು ಧಾರವಾಡದಲ್ಲೇ ಕಣ್ತುಂಬಿಕೊಳ್ಳಲಿದ್ದಾರೆ.


Click it and Unblock the Notifications
