Lok Sabha Elections 2024: ಲೋಕಸಮರಕ್ಕೆ ಕೈ ಸಜ್ಜು ; ಪ್ರಲ್ಹಾದ್ ಜೋಶಿಗೆ ಟಕ್ಕರ್ ಕೊಡಲು ವಿನಯ ಕುಲಕರ್ಣಿ ಪತ್ನಿ ಕಣಕ್ಕೆ!?
ಧಾರವಾಡ, ಆಗಸ್ಟ್ 26: ವಿಧಾನಸಭಾ ಚುನಾವಣೆಯ ಬಳಿಕ ಲೋಕಸಭಾ ಚುನಾವಣೆಯನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ರಾಜ್ಯ ಕಾಂಗ್ರೆಸ್ ಪಡೆ ಭರ್ಜರಿ ತಯಾರಿ ನಡೆಸಿದ್ದು, ಸೂಕ್ತ ಅಭ್ಯರ್ಥಿಗಳ ಹುಡುಕಾಟದಲ್ಲಿದೆ.
ಅಲ್ಲದೇ ವಿಧಾನಸಭಾ ಚುನಾವಣೆಯಲ್ಲಿ ಕೆಲ ಬಿಜೆಪಿ ನಾಯಕರನ್ನ ಸೋಲಿಸಿರುವ ಕಾಂಗ್ರೆಸ್, ಲೋಕಸಭಾ ಚುನಾವಣೆಯಲ್ಲಿ ಕೆಲ ಬಿಜೆಪಿ ನಾಯಕರನ್ನ ಸೋಲಿಸಲು ಮಾಸ್ಟರ್ ಪ್ಲಾನ್ ನಡೆಸಿದೆ. ಅದರಂತೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಲ್ಹಾದ್ ಜೋಶಿಯನ್ನ ಸೋಲಿಸಲು ಪ್ಲಾನ್ ಹಾಕಿಕೊಂಡಿದ್ದು, ಸದ್ಯ 8 ವಿಧಾನಸಭಾ ಕ್ಷೆತ್ರಗಳನ್ನ ಹೊಂದಿರುವ ಧಾರವಾಡ ಲೋಕಸಭಾ ಕ್ಷೇತ್ರ ಸದ್ಯ ಉತ್ತರ ಕರ್ನಾಟಕದಲ್ಲಿ ಜಿದ್ದಾಜಿದ್ದಿನ ಕಣವಾಗಿದೆ.

ಈ ಬಾರಿಯ ಚುನಾವಣೆಯಲ್ಲಿ ಪ್ರಹ್ಲಾದ್ ಜೋಶಿ ವಿರುದ್ದ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ ಅವರನ್ನ ಕಣಕ್ಕೆ ಇಳಿಸಲು ಕಾಂಗ್ರೆಸ್ ತೆರೆಮೆರೆ ಹಿಂದೆ ಕಸರತ್ತು ನಡೆಸಿದೆ. ಶಿವಲೀಲಾ ಅವರು ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದು, ಇದರನ್ನ ಜೋಶಿ ವಿರುದ್ದ ಕಣಕ್ಕಿಸುವ ಮೂಲಕ ಸಮುದಾಯದವರನ್ನು ಸೆಳೆಯಬಹುದು ಎಂಬ ಲೆಕ್ಕಾಚಾರ ಕಾಂಗ್ರೆಸ್ ನಾಯಕರಲಿದೆ. ಅಲ್ಲದೇ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಪಂಚಮಸಾಲಿ ಲಿಂಗಾಯತ ಸಮುದಾಯದ ಮುಖಂಡರನ್ನು ಕಡೆಗಣಿಸಿರುವುದನ್ನ ಕಾಂಗ್ರೆಸ್ ಬಳಸಿಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದೆ.

ವಿನಯ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಅವರು ತಮ್ಮದೇ ಆದ ವರ್ಚಸ್ಸನ್ನ ಹೊಂದಿದ್ದಾರೆ. ಯೋಗೀಶ್ ಗೌಡ ಕೊಲೆ ಕೇಸನಲ್ಲಿ ಧಾರವಾಡಕ್ಕೆ ಎಂಟ್ರಿ ಇಲ್ಲದ ಕಾರಣ ಸದ್ಯ ಕ್ಷೆತ್ರದಲ್ಲಿ ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ ಅವರು ಕ್ಷೇತ್ರದಲ್ಲಿ ಹಿಡಿತವನ್ನ ಸಾಧಿಸಿ ಸುಮಾರು 18,000 ಸಾವಿರ ಮತಗಳ ಅಂತರದಿಂದ ಪತಿಯ ಗೆಲುವಿಗಾಗಿ ಶ್ರಮ ವಹಿಸಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಪ್ರತಿ ಗ್ರಾಮಕ್ಕೂ ಹೋಗಿ ಪತಿ ಪರವಾಗಿ ಪ್ರಚಾರ ಮಾಡಿ ಶಿವಲೀಲಾ ಕುಲಕರ್ಣಿ ಅವರು ಕ್ಷೇತ್ರದಾದ್ಯಂತ ಮಾತ್ರವಲ್ಲದೇ ಇಡೀ ಜಿಲ್ಲೆಯಲ್ಲಿ ತಮ್ಮದೆ ಚಾಪು ಮೂಡಿಸಿದ್ದಾರೆ. 8 ವಿಧಾನಸಭಾ ವಿಧಾನಸಭಾ ಕ್ಷೇತ್ರದಲ್ಲಿ ಶಿವಲೀಲಾ ಕುಲಕರ್ಣಿ ಅವರು ಎಲ್ಲ ಕ್ಷೇತ್ರದ ಪ್ರಮುಖ ಮುಖಂಡರ ಜೊತೆ ಒಳ್ಳೆಯ ಭಾಂದವ್ಯವನ್ನ ಹೊಂದಿದ್ದು ಸದ್ಯ ಪ್ರಚಾರವನ್ನ ಮಾಡುತ್ತಿದ್ದಾರೆ. ಹುಬ್ಬಳ್ಳಿ ಧಾರವಾಡ ಪೂರ್ವ, ಹುಬ್ಬಳ್ಳಿ ಧಾರವಾಡ ಪಶ್ಚಿಮ, ಹುಬ್ಬಳ್ಳಿ ಧಾರವಾಡ ಕೇಂದ್ರ, ಕಲಘಟಗಿ,ನವಲಗುಂದ ,ಕುಂದಗೋಳ, ಹಾವೇರಿ ಜಿಲ್ಲೆಯ ಸಿಗ್ಗಾಂವಿ, ಜೊತೆಗೆ ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಸದ್ಯ ವಿನಯ ಕುಲಕರ್ಣಿ ವರ್ಚಸ್ಸಿದೆ. ಈ ಬಗ್ಗೆ ಹೈಕಂಮಾಡ್ ನಾಯಕರು ಸದ್ಯದಲ್ಲೇ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.












Click it and Unblock the Notifications