ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ಪರ ಪ್ರಚಾರ: ಅರವಿಂದ ಮಾಲಗತ್ತಿ, ಮಹೇಶಚಂದ್ರ ಗುರು ಅಮಾನತು

By Sachhidananda Acharya
|
Google Oneindia Kannada News

ಮೈಸೂರು, ಏಪ್ರಿಲ್ 25: ಸರಕಾರಿ ಹುದ್ದೆಯಲ್ಲಿದ್ದಾಗಲೇ ಕಾಂಗ್ರೆಸ್ ಪರ ಪ್ರಚಾರ ನಡೆಸಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ಆರೋಪದ ಮೇಲೆ ಮೈಸೂರು ವಿಶ್ವವಿದ್ಯಾಲಯದ ಇಬ್ಬರು ಪ್ರಾಧ್ಯಾಪಕರು ಇದೀಗ ಅಮಾನತುಗೊಂಡಿದ್ದಾರೆ.

ಮೈಸೂರು ವಿವಿಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ ಪ್ರಾಧ್ಯಾಪಕ ಮಹೇಶಚಂದ್ರ ಗುರು ಮತ್ತು ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿದ್ದು, ಪ್ರಸ್ತುತ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿರುವ ಅರವಿಂದ ಮಾಲಗತ್ತಿ ಅಮಾನತಾದ ಪ್ರಧ್ಯಾಪಕರಾಗಿದ್ದಾರೆ.

ಚುನಾವಣೆ ನೀತಿ ಸಂಹಿತೆ ಅಂದರೇನು? ಏನು ಮಾಡಬಹುದು, ಏನು ಮಾಡಬಾರದು?ಚುನಾವಣೆ ನೀತಿ ಸಂಹಿತೆ ಅಂದರೇನು? ಏನು ಮಾಡಬಹುದು, ಏನು ಮಾಡಬಾರದು?

ಇತ್ತೀಚೆಗೆ ಇವರಿಬ್ಬರು ಮೈಸೂರು ನಗರದಲ್ಲಿ ಆಯೋಜಿಸಿದ್ದ 'ಜನರಾಜಕಾರಣ' ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದರಲ್ಲಿ ಕಾಂಗ್ರೆಸ್‌ ಪಕ್ಷ ಮತ್ತು ಮತ್ತು ಸಿದ್ದರಾಮಯ್ಯ ಪರ ಪ್ರಚಾರ ನಡೆಸಿದ್ದರು ಎಂಬ ಆರೋಪ ಕೇಳಿಬಂದಿತ್ತು.

Violation of Code of Conduct: Aravind Malagatti, Mahesh Chandra Guru suspended

ಈ ಸಂಬಂಧ ಕ್ರಮ ತೆಗೆದುಕೊಳ್ಳುವಂತೆ ಚುನಾವಣಾ ಅಧಿಕಾರಿಗಳು ವಿ.ವಿ.ಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ವಿಶ್ವವಿದ್ಯಾನಿಲಯವು ಪ್ರಾಧ್ಯಾಪಕರನ್ನು ಅಮಾನುಗೊಳಿಸಿ ಮಂಗಳವಾರ ಆದೇಶ ಹೊರಡಿಸಿದೆ.

English summary
Two professors of Mysuru University have now been suspended for allegedly violating a Code of Conduct by promoting Congress while in government posts. Aravind Malagatti and Dr. BP Mahesh Chandra Guru are the suspended professors.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X