ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ ಹಿಂಸಾಚಾರ; ಅಮಿತ್ ಶಾ ವಿರುದ್ಧ ಸಿದ್ದರಾಮಯ್ಯ ಟ್ವೀಟ್

|
Google Oneindia Kannada News

ಬೆಂಗಳೂರು, ಫೆಬ್ರವರಿ 25 : "ಬಿಜೆಪಿಯ ಸಚಿವರು, ಶಾಸಕರು ಬಹಿರಂಗವಾಗಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿದ್ದಾಗಲೂ 'ಸರ್ವಶಕ್ತ' ಗೃಹಸಚಿವ ಅಮಿತ್ ಶಾ ಅವರು ಕಣ್ಣುಮುಚ್ಚಿ ಕೂತಿರುವುದೇ ಈ ಗಲಭೆಗೆ ಕಾರಣ" ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಈಶಾನ್ಯ ದೆಹಲಿಯಲ್ಲಿ ಭಾನುವಾರ ಸಂಜೆಯಿಂದ ಪೌರತ್ವ ತಿದ್ದುಪಡಿ ಕಾಯ್ದೆ ಪರ, ವಿರೋಧ ಹೋರಾಟಗಾರರ ನಡುವೆ ಘರ್ಷಣೆ ನಡೆಯುತ್ತಿದೆ. ಇದುವರೆಗೂ ಪೊಲೀಸರು ಸೇರಿ 7 ಜನರು ಘರ್ಷಣೆಯಲ್ಲಿ ಮೃತಪಟ್ಟಿದ್ದಾರೆ.

ಸಿಎಎ ಹೋರಾಟ; ದೆಹಲಿಯಲ್ಲಿ ಹಿಂಸಾಚಾರಸಿಎಎ ಹೋರಾಟ; ದೆಹಲಿಯಲ್ಲಿ ಹಿಂಸಾಚಾರ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ದೆಹಲಿಯಲ್ಲಿನ ಪರಿಸ್ಥಿತಿ ಬಗ್ಗೆ ಸಭೆಯನ್ನು ನಡೆಸಿದ್ದಾರೆ. ಈಶಾನ್ಯ ದೆಹಲಿಯ ಹಲವು ಪ್ರದೇಶಗಳಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ದೆಹಲಿ ಹಿಂಸಾಚಾರದ ಬಗ್ಗೆ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದೇನು?ದೆಹಲಿ ಹಿಂಸಾಚಾರದ ಬಗ್ಗೆ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದೇನು?

ಮಂಗಳವಾರ ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ದೆಹಲಿ ಹಿಂಸಾಚಾರದ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ಕೇಂದ್ರ ಸರ್ಕಾರ, ಬಿಜೆಪಿ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ.

ದೆಹಲಿ ಹಿಂಸಾಚಾರ: ಎದೆ ನಡುಗಿಸುವ ನಾಲ್ಕು ವಿಡಿಯೋಗಳುದೆಹಲಿ ಹಿಂಸಾಚಾರ: ಎದೆ ನಡುಗಿಸುವ ನಾಲ್ಕು ವಿಡಿಯೋಗಳು

ಸಿದ್ದರಾಮಯ್ಯ ಟ್ವೀಟ್

ಸಿದ್ದರಾಮಯ್ಯ ಟ್ವೀಟ್

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಂಗಳವಾರ #DelhiViolence ಹ್ಯಾಷ್ ಟ್ಯಾಗ್ ಬಳಸಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. "ಹಿಂಸಾಚಾರಕ್ಕೆ ಬಹಿರಂಗವಾಗಿ ಪ್ರಚೋದನೆ ನೀಡಿರುವ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರನ್ನು ತಕ್ಷಣ ಬಂಧಿಸಬೇಕು" ಎಂದು ಒತ್ತಾಯಿಸಿದ್ದಾರೆ.

ಕಣ್ಣು ಮುಚ್ಚಿ ಕೂತಿದ್ದಾರೆ

ಕಣ್ಣು ಮುಚ್ಚಿ ಕೂತಿದ್ದಾರೆ

"ಏಳು ಜೀವಗಳನ್ನು ಬಲಿತೆಗೆದುಕೊಂಡ ದೆಹಲಿ ಗಲಭೆ ಅತ್ಯಂತ ಖೇದಕರವಾದರೂ ಅನಿರೀಕ್ಷಿತವೇನಲ್ಲ. ಬಿಜೆಪಿಯ ಸಚಿವರು, ಶಾಸಕರು ಬಹಿರಂಗವಾಗಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿದ್ದಾಗಲೂ 'ಸರ್ವಶಕ್ತ' ಗೃಹಸಚಿವ ಅಮಿತ್ ಶಾ ಅವರು ಕಣ್ಣುಮುಚ್ಚಿ ಕೂತಿರುವುದೇ ಈ ಗಲಭೆಗೆ ಕಾರಣ" ಎಂದು ಆರೋಪಿಸಿದ್ದಾರೆ.

ಜನರಲ್ಲಿ ವಿಶ್ವಾಸ ತುಂಬಬೇಕು

ಜನರಲ್ಲಿ ವಿಶ್ವಾಸ ತುಂಬಬೇಕು

ಸಿದ್ದರಾಮಯ್ಯ ಅವರು, "ಗಲಭೆಗ್ರಸ್ತ ಪ್ರದೇಶಕ್ಕೆ ಅವಶ್ಯಕ ಪ್ರಮಾಣದಲ್ಲಿ ಪೊಲೀಸರನ್ನು ನೇಮಿಸಿ ಭೀತಿಗ್ರಸ್ತ ಜನರಲ್ಲಿ ವಿಶ್ವಾಸ ತುಂಬಬೇಕು" ಎಂದು ತಮ್ಮ ಟ್ವೀಟ್‌ನಲ್ಲಿ ಒತ್ತಾಯ ಮಾಡಿದ್ದಾರೆ.

ಎಲ್ಲೆಲ್ಲಿ ಹಿಂಸಾಚಾರ ನಡೆಯುತ್ತಿದೆ?

ಎಲ್ಲೆಲ್ಲಿ ಹಿಂಸಾಚಾರ ನಡೆಯುತ್ತಿದೆ?

ಜಾಫರಾಬಾದ್, ಭಜನ್‌ಪುರ್, ಮೌಜ್‌ಪುರ್ ಸೇರಿದಂತೆ ಈಶಾನ್ಯ ದೆಹಲಿಯ ವಿವಿಧ ಪ್ರದೇಶದಲ್ಲಿ ಹಿಂಸಾಚಾರ ನಡೆಯುತ್ತಿದೆ. ಇದುವರೆಗೂ 7 ಜನರು ಮೃತಪಟ್ಟಿದ್ದಾರೆ. ಇದರಲ್ಲಿ ಪೊಲೀಸರು ಸಹ ಸೇರಿದ್ದಾರೆ. ಪೊಲೀಸರು, ಮಾಧ್ಯಮದವರ ಮೇಲೆಯೂ ಕಲ್ಲು ತೂರಾಟ ನಡೆಯುತ್ತಿದೆ.

English summary
7 killed during the pro and anti CAA groups protest at east Delhi. Karnataka former chief minister Siddaramaiah tweet about Delhi clashes.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X