Viral Video: ಬ್ಯಾಂಕ್: ಕನ್ನಡದಲ್ಲಿ ಮಾತನಾಡಿ ಎಂದ ಗ್ರಾಹಕ: ಕಂಪನಿಗೆ ಕರೆ ಮಾಡಿ ದೂರು ನೀಡಿದ ಸಿಬ್ಬಂದಿ
ಬೆಳಗಾವಿ: ಕನ್ನಡದಲ್ಲಿ ವ್ಯವಹರಿಸಿ ಎಂದು ಬ್ಯಾಂಕ್ ಸಿಬ್ಬಂದಿಗೆ ಮನವಿ ಮಾಡಿದ ಗ್ರಾಹಕನ ಮೇಲೆಯೇ ಅವರು ಕೆಲಸ ಮಾಡುತ್ತಿದ್ದ ಕಂಪನಿಗೆ ದೂರು ನೀಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಬ್ಯಾಂಕ್ ಆಫ್ ಬರೋಡಾ ಸಿಬ್ಬಂದಿ ಕನ್ನಡದಲ್ಲಿ ವ್ಯವಹರಿಸಲು ಮನವಿ ಮಾಡಿದ ಗ್ರಾಹಕರಿಗೆ ತೊಂದರೆ ಕೊಟ್ಟಿದ್ದಾರೆ ಎನ್ನಲಾಗಿದೆ. Belagavi - ಬೆಳಗಾವಿ ಎನ್ನುವ ಖಾತೆಯಿಂದ ಈ ವಿಷಯಕ್ಕೆ ಸಂಬಂಧಿಸಿದ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದೆ.
ಕರ್ನಾಟಕದ ಬ್ಯಾಂಕ್ಗಳಲ್ಲಿ ಅಲ್ಲಿನ ಸಿಬ್ಬಂದಿ ಹಾಗೂ ಮ್ಯಾನೇಜರ್ಗಳು ಹಿಂದಿ ಸೇರಿದಂತೆ ಅನ್ಯಭಾಷೆಯಲ್ಲಿ ಮಾತನಾಡುತ್ತಿರುವ ವಿಡಿಯೋಗಳು ವೈರಲ್ ಆಗಿರುವುದು ಇದೆ. ಆದರೆ ಬ್ಯಾಂಕ್ನ ಸಿಬ್ಬಂದಿ ಗ್ರಾಹಕರ ಕಂಪನಿಗೆ ದೂರು ನೀಡುವುದು ಎಲ್ಲಿಯಾದರೂ ಕೇಳಿದ್ದಿರಾ ? ಅಂತಹ ಒಂದು ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇದಕ್ಕೆ ಕನ್ನಡಿಗರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಘಟನೆಯ ಹಿನ್ನೆಲೆ ಏನು
ಕನ್ನಡಿಗ ಅನಿಲ್ ದಡ್ಡಿಮನಿ ಅವರು ಬೆಳಗಾವಿಯ ಉದ್ಯಮಬಾಗಿನ ಬ್ಯಾಂಕ್ ಆಫ್ ಬರೋಡಾಗೆ ಭೇಟಿ ನೀಡಿದ್ದು, ಬ್ಯಾಂಕ್ನ ಸಿಬ್ಬಂದಿಗೆ ಕನ್ನಡದಲ್ಲಿ ವ್ಯವಹರಿಸುವಂತೆ ಮನವಿ ಮಾಡಿದ್ದಾರೆ. ಆದರೆ ಅಲ್ಲಿಯ ಸಿಬ್ಬಂದಿ ಕನ್ನಡದಲ್ಲಿ ಮಾತನಾಡಿಲ್ಲ. ಕನ್ನಡದಲ್ಲಿ ಸೇವೆ ಕೊಡುವಂತೆ ಅನಿಲ್ ದಡ್ಡಿಮನಿ ಅವರು ಕೇಳಿಕೊಂಡಿದ್ದಾರೆ. ಆದರೆ, ಈ ಬ್ಯಾಂಕಿನ ಸಿಬ್ಬಂದಿ ಅನಿಲ್ ದಡ್ಡಿಮನಿ ಅವರು ಕೆಲಸ ಮಾಡುವ ಕಂಪನಿಗೆ ಕರೆ ಮಾಡಿದ್ದ ಬ್ಯಾಂಕ್ ಸಿಬ್ಬಂದಿ ಅವರ ಬಗ್ಗೆ ಆರೋಪ ಮಾಡಿದ್ದಾರೆ ಎಂದು ಹೇಳಲಾಗಿದೆ.
ಇದರಿಂದ ಆ ಕಂಪನಿಯ ಎಚ್ಆರ್ ಅನಿಲ್ ದಡ್ಡಿಮನಿ ಅವರಿಗೆ ಕರೆ ಮಾಡಿ, ವಿಚಾರಿಸಿದ್ದಾರೆ. ಇದರಿಂದ ಅನಿಲ್ ದಡ್ಡಿಮನಿ ಅವರಿಗೆ ಉದ್ಯೋಗದಲ್ಲೂ ಸಂಕಷ್ಟ ಎದುರಾಗಿದೆ. ಈ ವಿಚಾರವಾಗಿ ಬ್ಯಾಂಕಿಗೆ ತೆರಳಿ ಅನಿಲ್ ದಡ್ಡಿಮನಿ ಅವರು ಪ್ರಶ್ನೆ ಮಾಡಿದ್ದಾರೆ. ಕನ್ನಡಪರ ಹೋರಾಟಗಾರರು ಬ್ಯಾಂಕಿಗೆ ಆಗಮಿಸುತ್ತಿದ್ದಂತೆ ಸ್ಥಳಕ್ಕೆ ಬಂದ ಪೋಲೀಸರು, ಪರಿಸ್ಥಿತಿಯನ್ನಾ ಶಾಂತಗೊಳಿಸಿದ್ದಾರೆ.
ಅಲ್ಲದೇ ಈ ಬ್ಯಾಂಕಿನ ಸಿಬ್ಬಂದಿ ಕನ್ನಡದಲ್ಲಿ ಗ್ರಾಹಕರಿಗೆ ಸೇವೆ ಕೊಡದೆ ಇರುವುದು ಮೊದಲನೇ ತಪ್ಪು, ಇದನ್ನಾ ಪ್ರಶ್ನೆ ಮಾಡಿದ ಅನಿಲ್ ದಡ್ಡಿಮನಿ ಅವರು ಕೆಲಸ ಮಾಡುವ ಕಂಪನಿಗೆ ಆರೋಪ ಮಾಡಿದ್ದು ಎರಡನೇ ತಪ್ಪು. ಗ್ರಾಹಕನ ಜೊತೆಗೆ ಅನುಚಿತವಾಗಿ ವರ್ತನೆ ಮಾಡಿದ ಈ ಬ್ಯಾಂಕ್ ಸಿಬ್ಬಂದಿಯನ್ನಾ ಕೂಡಲೇ ಅಮಾನತ್ತು ಮಾಡಬೇಕು ಎಂದು ಕನ್ನಡಪರ ಹೋರಾಟಗಾರರು ಆಗ್ರಹಿಸಿದ್ದಾರೆ.
ಕ್ಷಮೆಯಾಚಿಸಿದ ಬ್ಯಾಂಕ್ ಸಿಬ್ಬಂದಿ
ಇನ್ನು ಈ ಬ್ಯಾಂಕ್ನ ಸಿಬ್ಬಂದಿಯು ಕನ್ನಡದಲ್ಲಿ ವ್ಯವಹರಿಸುವಂತೆ ಕೇಳಿದ ಗ್ರಾಹಕನ ಮೇಲೆಯೇ ಅವರು ಕೆಲಸ ಮಾಡುತ್ತಿದ್ದ ಕಂಪನಿಗೆ ದೂರು ನೀಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಬ್ಯಾಂಕ್ನ ಸಿಬ್ಬಂದಿಯ ನಡೆಯನ್ನು ಕನ್ನಡಪರ ಹೋರಾಟಗಾರರು ವಿರೋಧಿಸಿದ್ದು, ಬೆಳಗಾವಿಯ ಉದ್ಯಮಬಾಗಿನ ಬ್ಯಾಂಕ್ ಆಫ್ ಬರೋಡಾದ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಇದಾದ ಬೆನ್ನಲ್ಲೇ ಬ್ಯಾಂಕ್ನ ಸಿಬ್ಬಂದಿ ಕನ್ನಡಿಗರ ಕ್ಷಮೆಯಾಚನೆ ಮಾಡಿದ್ದಾರೆ.
-
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ












Click it and Unblock the Notifications