Viral video: ಮಣಿಪಾಲ್‌ನಲ್ಲಿ ಮೈಮರೆತ ಜೋಡಿ: ಅಸಭ್ಯ ವರ್ತನೆ ಪ್ರಶ್ನಿಸಿದ ಸ್ಥಳೀಯರೊಂದಿಗೆ ವಾಗ್ವಾದ, ವಿಡಿಯೋ ವೈರಲ್

ಉಡುಪಿ: ಶೈಕ್ಷಣಿಕ ನಗರಿ ಎಂದೇ ಖ್ಯಾತಿಯಾಗಿರುವ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಯುವಜೋಡಿಯೊಂದು ಸಾರ್ವಜನಿಕ ರಸ್ತೆಯಲ್ಲಿ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಬರುವ ಮಣಿಪಾಲ್‌ನಲ್ಲಿ ಈ ರೀತಿ ಮಿತಿ ಮೀರುತ್ತಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಈ ಘಟನೆಯನ್ನು ನೋಡುವುದಾದರೆ, ವೈರಲ್‌ ವಿಡಿಯೋದಲ್ಲಿ ಕಂಡುಬರುವಂತೆ ಸಾರ್ವಜನಿಕ ರಸ್ತೆಯಲ್ಲಿ ಜೋಡಿಯೊಂದು ಅತಿರೇಕದ ವರ್ತನೆಯಲ್ಲಿ ತೊಡಗಿದ್ದನ್ನು ಗಮನಿಸಿದ ಸ್ಥಳೀಯರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ತಪ್ಪು ಒಪ್ಪಿಕೊಳ್ಳುವ ಬದಲು ಆ ಜೋಡಿಯು ಸ್ಥಳೀಯರ ವಿರುದ್ಧವೇ ಜೋರು ಮಾಡಿದ್ದಾರೆ ಎನ್ನಲಾಗಿದೆ.

Viral Video

ಹಿಂದಿಯಲ್ಲಿ ಮಾತನಾಡಿ ಎಂದ ಯುವಕ

ರಸ್ತೆಯಲ್ಲೇ ಅಸಭ್ಯವಾಗಿ ವರ್ತಿಸುತ್ತಿದ್ದ ಜೋಡಿಯನ್ನು ಕಂಡು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸ್ಥಳೀಯ ನಿವಾಸಿಯೊಬ್ಬರು ಕನ್ನಡದಲ್ಲಿಯೇ ಆ ಜೋಡಿಯನ್ನು ತರಾಟೆಗೆ ತೆಗೆದುಕೊಂಡು, "ಇದು ಸಾರ್ವಜನಿಕ ಸ್ಥಳ, ಇಲ್ಲಿ ಇಂತಹ ವರ್ತನೆಗಳು ನಡೆಯುವುದಿಲ್ಲ, ಇದು ಸಂಸ್ಕೃತಿಯಲ್ಲ" ಎಂದು ಬುದ್ಧಿವಾದ ಹೇಳಿದ್ದಾರೆ.

ಸ್ಥಳೀಯರು ಕನ್ನಡದಲ್ಲಿ ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ, ಆ ಜೋಡಿಯಲ್ಲಿದ್ದ ಯುವಕ "ನನಗೆ ಕನ್ನಡ ತಿಳಿಯುವುದಿಲ್ಲ, ಹಿಂದಿಯಲ್ಲಿ ಮಾತನಾಡು" ಎಂದಿದ್ದಾನೆ. ಇದರಿಂದ ಮತ್ತಷ್ಟು ಕೆರಳಿದ ಸ್ಥಳೀಯರು, ಇದು ಕರ್ನಾಟಕ, ಸಾರ್ವಜನಿಕವಾಗಿ ತಪ್ಪು ಮಾಡಿ ನಮ್ಮ ಭಾಷೆಯ ಬಗ್ಗೆ ಮಾತನಾಡಬೇಡಿ ಎಂದು ತಿರುಗೇಟು ನೀಡಿದ್ದಾರೆ. ವಿದ್ಯಾರ್ಥಿಗಳಿಂದ ತುಂಬಿರುವ ಮಣಿಪಾಲದಲ್ಲಿ ಇತ್ತೀಚೆಗೆ ಇಂತಹ ಘಟನೆಗಳು ಮರುಕಳಿಸುತ್ತಿರುವುದು ಸ್ಥಳೀಯರ ನೆಮ್ಮದಿ ಕೆಡಿಸಿದೆ. ಪೊಲೀಸರು ಇಂತಹ ವಿಚಾರಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಿ, ಸಾರ್ವಜನಿಕ ಸಂಯಮವನ್ನು ಕಾಪಾಡಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಸುತ್ತಮುತ್ತಲಿದ್ದ ಜನರು ಈ ದೃಶ್ಯಗಳನ್ನು ಮೊಬೈಲ್‌ನಲ್ಲಿ ಸೆರೆಹಿಡಿದು ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ, ಉಡುಪಿಯ ನಿವಾಸಿಗಳು ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಹೊಸ ವರ್ಷ ಅಥವಾ ಪ್ರೇಮಿಗಳ ದಿನಾಚರಣೆಯಂತಹ ಸಂದರ್ಭಗಳಲ್ಲಿ ಇಂತಹ ಅಹಿತಕರ ಘಟನೆಗಳು ಹೆಚ್ಚಾಗುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ.

ಪೊಲೀಸ್ ಕ್ರಮಕ್ಕೆ ಒತ್ತಾಯ

ಮಣಿಪಾಲ್‌ ಗೌರವ ಮತ್ತು ಶೈಕ್ಷಣಿಕ ವಾತಾವರಣವನ್ನು ಕಾಪಾಡಲು ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ವೈಯಕ್ತಿಕ ಸ್ವಾತಂತ್ರ್ಯದ ಹೆಸರಿನಲ್ಲಿ ಇತರರಿಗೆ ಮುಜುಗರ ಉಂಟುಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ಈ ಘಟನೆಯು ವೈಯಕ್ತಿಕ ಸ್ವಾತಂತ್ರ್ಯ ಮತ್ತು ಸಾರ್ವಜನಿಕ ಜವಾಬ್ದಾರಿಯ ನಡುವಿನ ಮಿತಿಗಳ ಬಗ್ಗೆ ಮತ್ತೊಮ್ಮೆ ಚರ್ಚೆಯನ್ನು ಮುನ್ನೆಲೆಗೆ ತಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+