Viral Video: ಬಸ್ ನಿಲ್ಲಿಸದ ಚಾಲಕನ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿನಿ, ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್!

Viral Video: ದೆಹಲಿಯಲ್ಲಿ ಈಚೆಗೆ ಕಾಕ್ರೋಚ್ ಜನತಾ ಪಾರ್ಟಿ / ಜೆನ್‌ಜೀ ಪ್ರತಿಭಟನೆಯ ನಂತರ ದೇಶದಾದ್ಯಂತ ವಿದ್ಯಾರ್ಥಿಗಳು ತಮ್ಮ ಹಕ್ಕು ಹಾಗೂ ಸೌಲಭ್ಯಕ್ಕಾಗಿ ಧ್ವನಿ ಎತ್ತಿದ್ದಾರೆ. ಇದೀಗ ಕೊಪ್ಪಳದ ವಿದ್ಯಾರ್ಥಿಗಳು ಸರ್ಕಾರಿ ಬಸ್ ತಡೆದು ಪ್ರತಿಭಟನೆ ಮಾಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಬಸ್‌ ನಿಲ್ಲಿಸದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) ವಿರುದ್ಧ ವಿದ್ಯಾರ್ಥಿನಿಯರು ಪ್ರತಿಭಟನೆ ಮಾಡಿದ್ದಾರೆ.

ಕೊಪ್ಪಳ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ, ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳದೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ ಮುಂದಕ್ಕೆ ಹೋದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಬಸ್ ನಿಲ್ಲಸದೆ ಇರುವುದರಿಂದ ವಿದ್ಯಾರ್ಥಿನಿಯೊಬ್ಬರು ಬಸ್‌ ತಡೆದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

Viral Video KKRTC Bus Fails to Stop for Students Angry Student Confronts Driver Video Goes Viral

ಹಟ್ಟಿ-ಮುಂಡರಗಿ ಕಡೆಯಿಂದ ಕೊಪ್ಪಳ ನಗರಕ್ಕೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್‌ಗಾಗಿ ಬಿ. ಹೊಸಹಳ್ಳಿ ಬಸ್‌ ನಿಲ್ದಾಣದಲ್ಲಿ ಹಲವು ವಿದ್ಯಾರ್ಥಿಗಳು ಕಾಯುತ್ತಿದ್ದರು. ಆದರೆ, ಬಸ್‌ ನಿಲ್ದಾಣದಲ್ಲಿ ಬಸ್‌ ನಿಲ್ಲಿಸದೆ ಮುಂದೆ ಸಾಗಿದ ಆರೋಪ ಕೇಳಿಬಂದಿದೆ. ಇದೀಗ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಶಾಲೆಯಲ್ಲಿ ಪರೀಕ್ಷೆ ಇದ್ದ ಕಾರಣ, ಸಮಯಕ್ಕೆ ಶಾಲೆ ತಲುಪುವ ಆತಂಕದಲ್ಲಿದ್ದ ವಿದ್ಯಾರ್ಥಿನಿ ಬಸ್‌ ಅನ್ನು ಹಿಂಬಾಲಿಸಿ ಮುಂದೆ ಹೋಗಿ ತಡೆದಿದ್ದಾರೆ ಬಸ್ ಚಾಲಕ ಮತ್ತು ನಿರ್ವಾಹಕರನ್ನು ಪ್ರಶ್ನಿಸಿದ್ದಾರೆ ಈ ರೀತಿ ಮಾಡಿದ ಬಸ್ ಸಿಬ್ಬಂದಿಯ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.

Viral Video: ಒಬ್ಬ ವಿದ್ಯಾರ್ಥಿನಿಯಿಂದ ಸಾಲು.. ಸಾಲು ವಿದ್ಯಾರ್ಥಿಗಳು

ಇನ್ನು ಕೊಪ್ಪಳದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ಲಿಸಲಿಲ್ಲ ಎಂದು ವಿದ್ಯಾರ್ಥಿನಿಯೊಬ್ಬರು ಪ್ರತಿಭಟನೆ ಮಾಡುತ್ತಿದ್ದಂತೆಯೇ ಹಲವು ವಿದ್ಯಾರ್ಥಿಗಳು ಈ ಪ್ರತಿಭಟನೆಗೆ ಜೊತೆಯಾಗಿದ್ದಾರೆ. ಸವಿತಾ ಎನ್ನುವ ವಿದ್ಯಾರ್ಥಿನಿ ಬಸ್ ನಿಲ್ಲಿಸದೆ ಇರುವುದನ್ನು ವಿರೋಧಿಸಿ ಪ್ರತಿಭಟನೆ ಮಾಡಿದ್ದಾರೆ.

ಇಂದು ಗಣಿತ ಪರೀಕ್ಷೆ ಇದೆ. ಆದರೆ, ಸಮಯಕ್ಕೆ ಸರಿಯಾಗಿ ಹೋಗುವುದಕ್ಕೆ ಸಾಧ್ಯವಾಗಿಲ್ಲ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಸ್ ನಿಲ್ಲಿಸದೆ ಇರುವುದರಿಂದ ಸಮಸ್ಯೆ ಆಗಿದೆ ಅಂತ ವಿದ್ಯಾರ್ಥಿಗಳು ಹೇಳಿದ್ದಾರೆ. ಇದೀಗ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+