ಉರ್ದು ಭಾಷೆ ಬಳಕೆ: ಸಿದ್ದರಾಮಯ್ಯ ನಡೆಗೆ ಕನ್ನಡಿಗರ ಆಕ್ರೋಶ!
ಕನ್ನಡ ಭಾಷೆ ಹಾಗೂ ಕನ್ನಡದ ವಿಚಾರದಲ್ಲಿ ಸದಾ ಮುಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಇದೀಗ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕನ್ನಡ ಭಾಷೆಯ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆ ಹಲವು ಕಾರಣಕ್ಕೆ ಮೆಚ್ಚುಗೆಗೆ ಪಾತ್ರವಾಗಿದ್ದು ಇದೆ. ಸದನದಲ್ಲಿ ಕನ್ನಡದ ವ್ಯಾಕರಣ ಹಾಗೂ ಹಿಂದಿ ಮತ್ತು ಇಂಗ್ಲಿಷ್ ಮಾಧ್ಯಮದವರಿಗೆ ನಾನು ಕನ್ನಡದಲ್ಲಿ ಮಾತ್ರ ಬೈಟ್ ಕೊಡುತ್ತೇನೆ ಎನ್ನುವ ವಿಡಿಯೋಗಳು ವೈರಲ್ ಆಗಿರುವುದು ಇದೆ. ಆದರೆ, ಇದೀಗ ಸಿದ್ದರಾಮಯ್ಯ ಅವರು ಬೇರೆ ಭಾಷೆಯೊಂದನ್ನು ಬಳಸದೆ ಇದ್ದರೂ, ಮೌನವಾಗಿದ್ದರೂ ಚರ್ಚೆಗೆ ಗ್ರಾಸವಾಗಿದ್ದಾರೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸಿದ್ದರಾಮಯ್ಯ ಅವರ ಬಗ್ಗೆ ಕನ್ನಡಿಗರು ಅಸಮಾಧಾನಿತರಾಗಿರುವುದೇಕೆ ಎನ್ನುವ ವಿವರ ಇಲ್ಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ಸಾಮಾನ್ಯವಾಗಿ ಈ ಹಿಂದೆ ಸಿದ್ದರಾಮಯ್ಯ ಅವರು ಕನ್ನಡ ಪರವಾಗಿ ಮಾತನಾಡಿದ್ದ ವಿಡಿಯೋಗಳು ಹಾಗೂ ಕನ್ನಡಕ್ಕೆ ಆದ್ಯತೆ ಕೊಡುವ ವಿಚಾರಗಳು ವೈರಲ್ ಆಗುತ್ತಿದ್ದವು. ಆದರೆ, ಇದೀಗ ಅವರು ಕನ್ನಡಿಗರ ಕೋಪಕ್ಕೆ ಕಾರಣರಾಗಿದ್ದಾರೆ.

ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರದ ಹಾಗೂ ಕಾಂಗ್ರೆಸ್‌ನ ಶಾಸಕರು, ಸಂಸದರು ಹಾಗೂ ಸಚಿವರು ಒಂದಿಲ್ಲೊಂದು ಕಾರಣಕ್ಕೆ ಕನ್ನಡದ ವಿಷಯದಲ್ಲಿ ಚರ್ಚೆಗೆ ಗ್ರಾಸರಾಗುತ್ತಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಶುಭವಾಗಲಿ ಎಂದು ಬರೆಯಲು ಪರದಾಡಿದರು ಎನ್ನುವ ವಿಚಾರ ವೈರಲ್ ಆಗಿತ್ತು. ಅಲ್ಲದೆ ಕಾಂಗ್ರೆಸ್ ಸಂಸದ ಸಾಗರ್ ಖಂಡ್ರೆ ಅವರು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಸಭೆ ನಡೆಸಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಟೀಕೆಗೆ ಗುರಿಯಾಗಿದ್ದಾರೆ.
ವೈರಲ್ ವಿಡಿಯೋದಲ್ಲಿ ಏನಿದೆ ?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜನಸಾಮಾನ್ಯರು ಅರ್ಜಿ ಅಥವಾ ಮನವಿಗಳನ್ನು ಸಲ್ಲಿಸುವುದು ಸಾಮಾನ್ಯ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಲವರು ಮನವಿ ಸಲ್ಲಿಸುವಾಗ ಬಳಸಿರುವ ಭಾಷೆ ಇದೀಗ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಕೆಲವರು ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸುವಾಗ ಉರ್ದು ಹಾಗೂ ಹಿಂದಿಯಲ್ಲಿ ಮಾತನಾಡಿರುವುದು ಚರ್ಚೆಗೆ ಕಾರಣವಾಗಿದೆ. ಅಲ್ಲದೆ ಉರ್ದು ಭಾಷೆಯಲ್ಲಿ ಅವರು ಮಾತನಾಡುತ್ತಿದ್ದರೂ ಸಿದ್ದರಾಮಯ್ಯ ಅವರು ನಗುತ್ತಿರುವುದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಮಾಧ್ಯಮದವರಿಗೆ ಹಾಗೂ ಕೆಲವರಿಗೆ ಕನ್ನಡದಲ್ಲಿ ಮಾತನಾಡಿ ಎಂದು ಹೇಳುವ ಸಿದ್ದರಾಮಯ್ಯ ಅವರು ಈಗ ಮಾತ್ರ ಯಾಕೆ ಏನು ಹೇಳುತ್ತಿಲ್ಲ ಎಂದು ಕೆಲವರು ಸಿದ್ದರಾಮಯ್ಯ ಅವರನ್ನು ಪ್ರಶ್ನೆ ಮಾಡಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದಕ್ಕೆ ಮುಸ್ಲಿಂ ಸಮುದಾಯದ ಕೊಡುಗೆ ಅಪಾರ ಪ್ರಮಾಣದಲ್ಲಿ ಇದೆ. ಆದರೆ ನಮ್ಮ ಬೇಡಿಕೆಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಈಡೇರಿಸಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರವು ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ವ್ಯಕ್ತಿಯೊಬ್ಬರು ಉರ್ದು ಭಾಷೆಯಲ್ಲಿ ಹೇಳಿದ್ದಾರೆ ಎನ್ನುವ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
-
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Free Biryani: ಒಂದು ಸಿಲಿಂಡರ್ ಕೊಡಿ, ತಿಂಗಳು ಪೂರ್ತಿ ಉಚಿತ ಬಿರಿಯಾನಿ ತಿನ್ನಿ: ಹೊಸೂರು ಹೋಟೆಲ್ನಿಂದ ಭರ್ಜರಿ ಆಫರ್ -
Viral Video: ತೆಂಗಿನ ಚಿಪ್ಪನ್ನು ಮಗುವಿನ ಶೌಚಾಲಯ ಮಾಡಿಕೊಂಡ ದಂಪತಿ, ವಿಡಿಯೋ ವೈರಲ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ










Click it and Unblock the Notifications