ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಸೆಂಬರ್ ಒಳಗೆ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ: ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ನವೆಂಬರ್ 28: ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುವರ್ಧನ್ ಸ್ಮಾರಕವನ್ನು ಡಿಸೆಂಬರ್ ಒಳಗೆ ಉದ್ಘಾಟಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಭಾನುವಾರ ವಿಷ್ಣುವರ್ಧನ್ ಅವರಿದ್ದ ಜಯನಗರದ ಮನೆಯ ಸ್ಥಳದಲ್ಲಿಯೇ ನೂತನವಾಗಿ ನಿರ್ಮಾಣವಾಗಿರುವ ಮನೆಯ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತಿಯವರು ಖುದ್ದಾಗಿ ಬಂದು ಗೃಹಪ್ರವೇಶಕ್ಕೆ ಆಹ್ವಾನ ನೀಡಿದ್ದರು. ವಿಷ್ಣುವರ್ಧನ್ ಅವರಿದ್ದ ಮನೆಯನ್ನು ಇನ್ನಷ್ಟು ಚಂದ ಮಾಡಿದ್ದಾರೆ. ನವೀಕರಣಗೊಂಡಿರುವ ವಿಷ್ಣುವರ್ಧನ್ ಅವರ ಮನೆಯ ಹಿಂದೆ ಭಾರತಿ ವಿಷ್ಣುವರ್ಧನ್ ಅವರ ಪ್ರಯತ್ನ ಹಾಗೂ ಶ್ರಮ ಎದ್ದುಕಾಣುತ್ತಿದೆ. ವಿಷ್ಣು ವರ್ಧನ್ ಅವರ ತ್ಯಾಗವನ್ನು ಅಳವಡಿಸಿದ್ದಾರೆ ಎನ್ನುವುದು ನನ್ನ ಭಾವನೆ ಎಂದರು .

ಇನ್ನೂ ಮೈಸೂರಿನಲ್ಲಿ ನಿರ್ಮಾಣ ವಾಗುತ್ತಿರುವ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಪೂರ್ಣ ಗೊಳ್ಳುತ್ತಾ ಬಂದಿದೆ. ಡಿಸೆಂಬರ್ ಒಳಗೆ ಸ್ಮಾರಕದ ಉದ್ಘಾಟನೆಯನ್ನು ಅದ್ದೂರಿಯಾಗಿ ಮಾಡಲು ತೀರ್ಮಾನಿಸಲಾಗಿದೆ. ಹೆಚ್ಚಿನ ವಿವರಗಳನ್ನು ಅವರ ಕುಟುಂಬದವರೊಂದಿಗೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು. ವಿಷ್ಣುವರ್ಧನ್ ಅವರ ಮೇರು ವ್ಯಕ್ತಿತ್ವ ಹಾಗೂ ಘನತೆಗೆ ತಕ್ಕ ಹಾಗೆ ಕಾರ್ಯಕ್ರಮವನ್ನು ವೈಭವಾಯುತವಾಗಿ ಆಯೋಜಿಸಲಾಗುವುದು ಎಂದರು.

Vishnuvardhan memorial will be inaugurated before December

ಚಿಕ್ಕಮಗಳೂರಿನಲ್ಲಿ ಅಡಿಕೆಗೆ ಎಲೆ ಚುಕ್ಕಿ ರೋಗದ ವಿಚಾರವಾಗಿ ಮಾತನಾಡಿದ ಅವರ, ಅಡಿಕೆಗೆ ಎಲೆ ಚುಕ್ಕಿ ರೋಗಕ್ಕೆ ಸಂಬಂಧಿಸಿದಂತೆ ವಿಜ್ಞಾನಿಗಳ ಸಂಶೋಧನೆ ಒಂದು ಹಂತಕ್ಕೆ ಬಂದಿದೆ. ಅದಕ್ಕೆ ಪರಿಹಾರ ನೀಡುವ ಹಾಗೂ ರೋಗ ಹರಡದಂತೆ ಅನುದಾನ ಬಿಡುಗಡೆಯಾಗಿದೆ. ಮಲೆನಾಡ ಭಾಗದಲ್ಲಿ ಆನೆ ಹಾವಳಿ ಹೆಚ್ವಿದ್ದು, ನಾಲ್ಕು ಜಿಲ್ಲೆಗಳಲ್ಲಿ ಅರಣ್ಯ ಪಡೆಗಳನ್ನು ರಚಿಸಿ, ವಾಹನ ಸಲಕರಣೆಗೆ ಅನುದಾನ ಬಿಡುಗಡೆ ಯಾಗುತ್ತಿದೆ ಎಂದರು.

ಅಡಿಕೆ ಬೆಳೆಗೆ ತಗಲಿರುವ ಎಲೆ ಚುಕ್ಕಿ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು 10 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಮಲೆನಾಡು ಭಾಗದ ನಾಲ್ಕೂ ಜಿಲ್ಲೆಗಳಿಗೆ ಈ ಮೊತ್ತವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Vishnuvardhan memorial will be inaugurated before December

ಸರ್ಕಾರ ವಿಶ್ವವಿದ್ಯಾಲಯದ ತಂಡ ವನ್ನು ಕಳಿಸಿ ಅಧ್ಯಯನ ಕೈಗೊಂಡಿದೆ. ಕೇಂದ್ರ ಸರ್ಕಾರದ ತಜ್ಞರು ಕೂಡ ಚಿಕ್ಕಮಗಳೂರು ಬಂದು ಅಧ್ಯಯನ ಮಾಡಿದ್ದಾರೆ. ನಿರಂತರವಾಗಿ ಮಳೆ ಇರುವುದರಿಂದ ಹಾಗೂ ಗಾಳಿಯಿಂದ ಒಂದಕ್ಕೊಂದು ಹರಡುತ್ತಿದೆ. ಅದಕ್ಕಾಗಿ ಫಂಗಸ್ ನಿವಾರಣೆಗೆ ಔಷಧಿ ಸಿಂಪಡನೆ ಮಾಡಲಾಗುವುದು. ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ವಿಜ್ಞಾನಿಗಳು ಶಿಫಾರಸು ಮಾಡುವ ಕ್ರಮಗಳನ್ನು ಕೂಡಲೇ ಕೈಗೊಳ್ಳಲಾಗುವುದು ಎಂದರು.

ಶೃಂಗೇರಿಯಲ್ಲಿ ಆಸ್ಪತ್ರೆ ನಿರ್ಮಿಸುವ ವಿಚಾರವಾಗಿ ಮಾತನಾಡಿದ ಅವರು, ಶೃಂಗೇರಿಯಲ್ಲಿ ಆಸ್ಪತ್ರೆ ನಿರ್ಮಿಸಲು ತೀರ್ಮಾನಿಸಿದೆ. ಸ್ಥಳದ ಸಂಸ್ಯೆಯಿದ್ದು, ಅದನ್ನು ಬಗೆಹರಿಸಿ ಆಸ್ಪತ್ರೆ ನಿರ್ಮಿಸಲಾಗುವುದು ಎಂದರು.

English summary
memorial being built for popular Kannada movie star Vishnuvardhan in Mysuru would be inaugurated before December,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X