ವಿಶ್ವಕರ್ಮ ಸಮುದಾಯದವರಿಗೆ ವಿವಿಧ ಯೋಜನೆ, ಅರ್ಜಿ ಆಹ್ವಾನ

Posted By:
Subscribe to Oneindia Kannada

ಬೆಂಗಳೂರು, ಜೂನ್ 10 : ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿಶ್ವಕರ್ಮ ಸಮುದಾಯದ ಜನರ ಆರ್ಥಿಕ ಅಭಿವೃದ್ಧಿಗಾಗಿ ರಾಷ್ಟ್ರೀಯ ಹಿಂದುಳಿದ ಹಣಕಾಸು ಮತ್ತು ಅಭಿವೃದ್ಧಿ ನಿಗಮದ ಯೋಜನೆಯಡಿ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಬ್ಯಾಂಕ್‍ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ, ಅರಿವು-ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಯೋಜನೆಗಳ ಸೌಲಭ್ಯ ಒದಗಿಸಲು ಅರ್ಜಿ ಕರೆಯಲಾಗಿದೆ. [ಪತ್ರಿಕೆ ಆರಂಭಿಸಿದ ಕೆಪಿ ನಂಜುಂಡಿ]

vishwakarma

ಅರ್ಜಿ ಸಲ್ಲಿಸುವವರು ವಿಶ್ವಕರ್ಮ ಹಾಗೂ ಅದರ ಉಪ ಜಾತಿಗಳಿಗೆ ಸೇರಿದವರಾಗಿರಬೇಕು. ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದವರಿಗೆ ರೂ.98,000 ಹಾಗೂ ಪಟ್ಟಣ ಪ್ರದೇಶದವರಿಗೆ ರೂ.1,20,000 ದೊಳಗಿರಬೇಕು. [101 ಅಡಿ ಎತ್ತರದ ವಿಶ್ವಕರ್ಮ ಮೂರ್ತಿ ಪ್ರತಿಷ್ಠಾಪನೆ]

ಗಂಗಾ ಕಲ್ಯಾಣ ಯೋಜನೆಯಲ್ಲಿ ನೀರಾವರಿ ಸೌಲಭ್ಯ ಪಡೆಯಲು ಅರ್ಜಿದಾರರು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ಒಂದೇ ಕಡೆ ಹೊಂದಿಕೊಂಡಿರುವಂತೆ 2 ಎಕರೆ ಜಮೀನು ಹೊಂದಿರಬೇಕು. ವಯೋಮಿತಿ 18 ರಿಂದ 55 ವರ್ಷದೊಳಗಿರಬೇಕು.

ನಿಗದಿತ ಅರ್ಜಿ ನಮೂನೆಯನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಅಥವಾ ಆಯಾ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತರಣಾಧಿಕಾರಿಗಳ ಕಛೇರಿಯಲ್ಲಿ ಜೂ.30 ರೊಳಗಾಗಿ ಪಡೆದು, ಭರ್ತಿ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ ಜುಲೈ 18 ರೊಳಗಾಗಿ ಸಲ್ಲಿಸಬಹುದಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Applications have been invited from Vishwakarma community people to provide financial help under various schemes. July 18, 2016 last date for submit application.
Please Wait while comments are loading...