ರೆಡಾರ್‌ನಲ್ಲಿ ಮಠಾಧೀಶರು; ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಹೊಸ ತಿರುವು!
ಬೆಂಗಳೂರು, ಸೆಪ್ಟೆಂಬರ್ 12 : ಕರ್ನಾಟಕದಲ್ಲಿ ಫೋನ್ ಟ್ಯಾಪಿಂಗ್ ಬಗ್ಗೆ ಭಾರಿ ಚರ್ಚೆ ನಡೆದಿತ್ತು. ವಿವಿಧ ರಾಜಕೀಯ ನಾಯಕರು, ಪೊಲೀಸ್ ಇಲಾಖೆಯಲ್ಲಿ ಫೋನ್ ಕದ್ದಾಲಿಕೆ ನಡೆದಿದೆ ಎಂಬುದು ಆರೋಪ. ಈಗ ಇದಕ್ಕೆ ಹೊಸ ಸೇರ್ಪಡೆಗೊಂಡಿದೆ.
ಒಕ್ಕಲಿಗ ಮತ್ತು ಲಿಂಗಾಯತ ಮಠಗಳೂ ಸೇರಿದಂತೆ ಕೆಲವು ಪ್ರಮುಖ ಮಠಾಧೀಶರ ದೂರವಾಣಿ ಕರೆಗಳನ್ನು ಕದ್ದಾಲಿಸಲಾಗಿತ್ತು ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ರಾಜಕಾರಣಿಗಳ ಸಂಪರ್ಕದಲ್ಲಿರುವ ಪ್ರಮುಖ ಮಠಾಧೀಶರ ಫೋನ್ ಕದ್ದಾಲಿಕೆ ಮಾಡಲಾಗಿದೆ ಎಂಬುದು ಆರೋಪ.

ಕರ್ನಾಟಕದಲ್ಲಿ ನಡೆದ ಫೋನ್ ಕದ್ದಾಲಿಕೆ ಪ್ರಕರಣದ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸಲಾಗಿದೆ. ಯಾವ-ಯಾವ ಮಠಾಧೀಶರ ಫೋನ್ ಕದ್ದಾಲಿಕೆ ಆಗಿದೆ ಎಂಬ ವರದಿಯನ್ನು ಪೊಲೀಸರು ಸಿಬಿಐಗೆ ಸಲ್ಲಿಸಿದ್ದಾರೆ. ಈ ಕುರಿತು ತನಿಖೆ ನಡೆಯಲಿದೆ.
ನೇರವಾಗಿ ಕದ್ದಾಲಿಸಿಲ್ಲ : ಪ್ರಭಾವಿ ಮಠಾಧೀಶರ ದೂರವಾಣಿ ಕರೆಗಳನ್ನು ನೇರವಾಗಿ ಕದ್ದಾಲಿಕೆ ಮಾಡಿಲ್ಲ. ಯಾವಾಗಲೂ ಸ್ವಾಮೀಜಿಗಳ ಜೊತೆ ಇರುವ ಕಿರಿಯ ಸ್ವಾಮೀಜಿಗಳು, ಸ್ವಾಮೀಜಿಗಳ ಆಪ್ತರ ದೂರವಾಣಿ ಸಂಖ್ಯೆಗಳ ಮೇಲೆ ನಿಗಾ ಇಡಲಾಗಿತ್ತು ಎಂಬುದು ಮಾಹಿತಿ.
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ ವಿರೋಧ ಪಕ್ಷದ ನಾಯಕರಾಗಿದ್ದ ಯಡಿಯೂರಪ್ಪಗೆ ನಿಕಟವಾಗಿದ್ದ ಲಿಂಗಾಯತ ಮಠಾಧೀಶರ ಆಪ್ತರ ಫೋನ್ ಕದ್ದಾಲಿಕೆ ಮಾಡಲಾಗಿತ್ತು. ವಿಧಾನಸೌಧದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಡಿಸಿಪಿ ದರ್ಜೆಯ ಅಧಿಕಾರಿಯೊಬ್ಬರು ನೀಡಿದ ಸಂಖ್ಯೆಗಳ ಕರೆ ಕದ್ದಾಲಿಕೆಯಾಗುತ್ತಿತ್ತು.
ಫೋನ್ ಕದ್ದಾಲಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಸೈಬರ್ ಮಾಸ್ಟರ್ ವಿಭಾಗದ ಮಾಸ್ಟರ್ ಸರ್ವರ್ ವಶಕ್ಕೆ ಪಡದುಕೊಂಡಿದ್ದಾರೆ. ಕೆಲವು ಮೊಬೈಲ್ ಸೆಟ್‌ಗಳನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಆಪ್ತರು, ಆಡಳಿತ ಪಕ್ಷದ ಶಾಸಕರೂ ಸೇರಿದಂತೆ ಹಲವರ ಫೋನ್ ಕದ್ದಾಳಿಕೆ ಮಾಡಲು ನಂಬರ್‌ಗಳನ್ನು ಸಂಗ್ರಹ ಮಾಡಲಾಗಿತ್ತು. ಸಿಸಿಬಿ ಎಸಿಪಿಯೊಬ್ಬರು 40 ದೂರವಾಣಿ ಸಂಖ್ಯೆಗಳಿಗೆ ಬರುವ ಕರೆ ಕದ್ದಾಲಿಕೆಗೆ ಶಿಫಾರಸು ಮಾಡಿದ್ದರು ಎಂಬ ವರದಿ ಸಿಬಿಐ ಕೈ ಸೇರಿದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications