Get Updates
Get notified of breaking news, exclusive insights, and must-see stories!

Karnataka Election: ರಾಜ್ಯದಲ್ಲಿಂದು ಬಿಜೆಪಿ ಪ್ರಭಾವಿ ನಾಯಕರ ಮತ ಸಂಚಾರ: ಎಲ್ಲಿ? ಯಾರು?

ಬೆಂಗಳೂರು ಏಪ್ರಿಲ್ 26: ಆಪರೇಷನ್ ಮೂಲಕ ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದೆ ಎಂಬ ಹಣೆಪಟ್ಟಿಯನ್ನು ಹೊಂದಿದ ಬಿಜೆಪಿ ಈ ಬಾರಿ ಶತಾಯಗತಾಯ ಬಹುಮತದೊಂದಿಗೆ ಗೆಲುವು ಸಾಧಿಸುವ ಮೂಲಕ ವಿಪಕ್ಷಗಳಿಗೆ ಠಕ್ಕರ್ ಕೊಡಲು ಪ್ರಯತ್ನಿಸುತ್ತಿದೆ. ಇದಕ್ಕಾಗಿ ಕೇಂದ್ರ ನಾಯಕರು, ಸಂಸದರು ಹಾಗೂ ಇತರ ರಾಜ್ಯಗಳ ಜನನಾಯಕರನ್ನು ರಾಜ್ಯಕ್ಕೆ ಕರೆಸುವ ಮೂಲಕ ಮತಭೇಟೆ ಶುರು ಮಾಡಿದೆ.

ಹೀಗಾಗಿ ಕಳೆದ ಕೆಲ ದಿನಗಳಿಂದ ಒಬ್ಬರಾದಂತೆ ಒಬ್ಬರು ಕಮಲ ನಾಯಕರು ನಿರಂತರವಾಗಿ ರಾಜ್ಯಕ್ಕೆ ಎಂಟ್ರಿ ಕೊಡುತ್ತಲೇ ಇದ್ದಾರೆ. 150 ಸ್ಟಾರ್ ಪ್ರಚಾರಕರ ಮೂಲಕ ಏಕಕಾಲಕ್ಕೆ ಮತಯಾಚನೆಗೆ ಮುಂದಾದ ಬಿಜೆಪಿ ಮಹಾಸಂಪರ್ಕ ಅಭಿಯಾನವನ್ನು ಶುರು ಮಾಡಿದೆ. ಇಂದು ಕೂಡ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಹಲವು ನಾಯಕರು ರಾಜ್ಯದ ವಿವಿದೆಡೆ ಚುನಾವಣಾ ರಣಕಣಕ್ಕೆ ಇಳಿಯಲಿದ್ದಾರೆ.

Vote movement of influential BJP leaders in karnatka: Where? who?

ರಕ್ಷಣಾ ಸಚಿವ ರಾಜನಾಥ್​ ಸಿಂಗ್, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಇತರರು ಇಂದು (ಏ.25) ರಾಜ್ಯದೆಲ್ಲೆಡೆ ಸಂಚಾರ ಮಾಡಲಿದ್ದಾರೆ.

ಕುಂದಾನಗರಿ ಬೆಳಗಾವಿ ಇಂದು ಕೇಸರಿ ಮಯವಾಗಲಿದೆ. ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಇಂದು ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಬೆಳಗ್ಗೆ 11ಕ್ಕೆ ಬೆಳಗಾವಿ ಜಿಲ್ಲೆಯ ಕಾಗವಾಡದ ಸಮಾವೇಶದಲ್ಲಿ ಭಾಗಿಯಾಗಿ ನಂತರ ಮಧ್ಯಾಹ್ನ 1.15ಕ್ಕೆ ಬೈಲಹೊಂಗಲದಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಾರೆ. ಬಳಿಕ ಸಂಜೆ 4 ಗಂಟೆಗೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆಯುವ ಸಮಾವೇಶದಲ್ಲಿ ಮತಬೇಟೆ ಮಾಡಲಿದ್ದಾರೆ.

Vote movement of influential BJP leaders in karnatka: Where? who?

ಮಹಾಸಂಪರ್ಕ ಅಭಿಯಾನ ಆರಂಭವಾಗಿದ್ದು, ಇಂದು ರಾಜ್ಯಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೂಡ ಚುನಾವಣಾ ಪ್ರಚಾರದ ಕಣಕ್ಕೆ ಇಳಿಯಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಕಲಬುರಗಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ನಂತರ 11 ಗಂಟೆಗೆ ಕಲಬುರಗಿಯಲ್ಲಿ ಪ್ರಬುದ್ಧರ ಜೊತೆ ಸಂವಾದ ನಡೆಸಲಿದ್ದಾರೆ. ಬಳಿಕ 3 ಗಂಟೆಗೆ ಅಳಂದದಲ್ಲಿ ನಡೆಯುವ ಮಹಿಳಾ ಸಮಾವೇಶದಲ್ಲಿ ಪಾಲ್ಗೊಂಡು ಸಂಜೆ 4 ಗಂಟೆಗೆ ಕಲಬುರಗಿ ನಗರದಲ್ಲಿ ಮನೆ ಮನೆ ಸಂಪರ್ಕ ಮಾಡಲಿದ್ದಾರೆ ಎಂದು ಬಿಜೆಪಿ ಬಲ್ಲ ಮೂಲಗಳು ತಿಳಿಸಿವೆ.

ಇನ್ನೂ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಕೂಡ ಇಂದು ರಾಜ್ಯಕ್ಕೆ ಎಂಟ್ರಿ ಕೊಡಲಿದ್ದಾರೆ. ರಾಜ್ಯದಲ್ಲಿ ಕಮಲವನ್ನು ಬಹುಮತದೊಂದಿಗೆ ಅರಳಿಸಲು ಪಣತೊಟ್ಟಿರುವ ಕೈಗಳಿಗೆ ಶಿವರಾಜ್ ಸಿಂಗ್ ಚೌಹಾಣ್ ಸಾಥ್ ನೀಡಲಿದ್ದಾರೆ. ಬೆಳಗ್ಗೆ 11.30ಕ್ಕೆ ಹುಕ್ಕೇರಿಯಲ್ಲಿನ ಸಾರ್ವಜನಿಕ ಪ್ರಚಾರ ಸಭೆ ಬಳಿಕ ಮಧ್ಯಾಹ್ನ 2.30ಕ್ಕೆ ಗೋಕಾಕ್​ನಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಸಿ, ಸಂಜೆ 4 ಗಂಟೆಗೆ ರಾಮದುರ್ಗದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಹಲವಾರು ಕಮಲ ನಾಯಕರು ಶಿವರಾಜ್ ಸಿಂಗ್ ಅವರೊಂದಿಗೆ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.

Vote movement of influential BJP leaders in karnatka: Where? who?

ವಿಜಯಪುರದಲ್ಲಿ ಜಯ ಸಾಧಿಸಲು ಬಿಜೆಪಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್​ ಅವರೊಂದಿಗೆ ಪ್ರಚಾರಕ್ಕೆ ಮುಂದಾಗಿದೆ. ಪ್ರಚಾರಕ್ಕೂ ಮುನ್ನ ಸಿದ್ದೇಶ್ವರ ಆಶ್ರಮಕ್ಕೆ ಭೇಟಿ ನೀಡಲಿರುವ ದೇವೇಂದ್ರ ಫಡ್ನವಿಸ್ ಬೆಳಗ್ಗೆ 11 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಕನಮಡಿ ಧರಿದೇವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 12.30ಕ್ಕೆ ಬಬಲೇಶ್ವರದಲ್ಲಿ ದೇವೇಂದ್ರ ಫಡ್ನವಿಸ್ ಪ್ರಚಾರ ಸಭೆ ನಡೆಸಲಿದ್ದಾರೆ.

ಇನ್ನೂ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಬೆಳಗಾವಿಯ ಅಥಣಿಯಲ್ಲಿ ರೋಡ್ ಶೋ, ಸಾರ್ವಜನಿಕ ಸಭೆಗಳನ್ನು ನಡೆಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆಗೆ ರೋಡ್ ಶೋ ಮತ್ತು ಸಾರ್ವಜನಿಕ ಸಭೆಯನ್ನು ಬೆಳಗಾವಿಯ ಕುಡಚಿಯಲ್ಲಿ ನಡೆಸಲಿದ್ದಾರೆ. ಇನ್ನೂ ಸಂಜೆ 4.15ಕ್ಕೆ ಸೌದತ್ತಿಯಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದು, ಸಂಜೆ 6.30ಕ್ಕೆ ಹುಬ್ಬಳ್ಳಿ ಧಾರವಾಡ ಜಿಲ್ಲೆಯಲ್ಲಿ ರೋಡ್ ಶೋ ನಡೆಸಲಿದ್ದಾರೆ.

ಇನ್ನೂ ಆನೇಕಲ್ ವಿಧಾನಸಭಾ ಕ್ಷೇತ್ರಕ್ಕೆ ದೊಮ್ಮಸಂದ್ರದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿ ಗಳಾದ ಅರುಣ್ ಸಿಂಗ್ ರೋಡ್ ಶೋ ಹಾಗೂ ಸಾರ್ವಜನಿಕ ಸಭೆ ನಡೆಸಲಿದ್ದಾರೆ.

ಜೊತೆಗೆ ಬೆಳಗಾವಿಯಲ್ಲಿಂದು ಸಿಎಂ ಬಸವರಾಜ್ ಬೊಮ್ಮಾಯಿ ಪ್ರಚಾರ ಮಾಡಲಿದ್ದಾರೆ. ಹುಕ್ಕೇರಿಯಲ್ಲಿ ಸಾರ್ವಜನಿಕ ಸಭೆ ನಡೆಸಲಿರುವ ಬೊಮ್ಮಾಯಿ, ಚಿಕ್ಕೋಡಿಯಲ್ಲಿ ರೋಡ್ ಶೋ ಮಾಡಲಿದ್ದಾರೆ. ಜೊತೆಗೆ ರಾಯಬಾಗ್ ಹಾಗೂ ಸವದತ್ತಿಯಲ್ಲೂ ರೋಡ್ ಶೋನಲ್ಲಿ ಮಾಡಲಿದ್ದಾರೆ.

ಇಲ್ಲಿಯವರೆಗೆ ಬಿಜೆಪಿಯ ಕೇಂದ್ರ ನಾಯಕರಾದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್​ ಶಾ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಆಗಮಿಸುತ್ತಿದ್ದರು. ಆದರೆ ಇಂದು ರಾಜ್ಯದ ಸಿಎಂ, ಡಿಸಿಎಂ ಮತ್ತು ಕೇಂದ್ರ ಸಚಿವರು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದು ಮತದಾರರನ್ನು ಸೆಳೆಯಲಿದ್ದಾರೆ. ಇದು ಬಿಜೆಪಿಗೆ ಅದೆಷ್ಟು ಲಾಭ ತಂದು ಕೊಡುತ್ತದೆ ಎಂದು ಕಾದು ನೋಡಬೇಕಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+