ಮತದಾನದ ಬಗ್ಗೆ ಜಾಗೃತಿ; ಸರ್ಕಾರಿ ನೌಕರರ ಜಾಥಾ, ಬೈಕ್ ಓಡಿಸಿದ ಡಿಸಿ

ಕಲಬುರಗಿ, ಏಪ್ರಿಲ್ 04; ಕರ್ನಾಟಕದ ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಮೇ 10ರ ಬುಧವಾರ ಮತದಾನ ನಡೆಯಲಿದ್ದು, ಮೇ 13ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿಯ ಚುನಾವಣೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸಲು ಚುನಾವಣಾ ಆಯೋಗ ಅಭಿಯಾನವನ್ನು ಕೈಗೊಂಡಿದೆ. ಜಿಲ್ಲಾ ಹಂತದಲ್ಲಿ ವಿವಿಧ ಚಟುವಟಿಕೆಗಳ ಮೂಲಕ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ.

ಕಲಬುರಗಿಯಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಅಂಗವಾಗಿ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಿಂದ ಗಂಜ್ ಪ್ರದೇಶದ ನಗರೇಶ್ವರ ಶಾಲೆ ತನಕ ಬೈಕ್ rally ಆಯೋಜನೆ ಮಾಡಲಾಗಿತ್ತು. ಜಿಲ್ಲಾ ಚುನಾವಣಾಧಿಕಾರಿ ಮತ್ತು ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಬುಲೆಟ್ ಓಡಿಸುವ ಮೂಲಕ ಗಮನ ಸೆಳೆದರು.

Voter Awareness Campaign Bike Rally By Government Employees

ಸರ್ಕಾರಿ ನೌಕರರ ಬೈಕ್ ಜಾಥಾವನ್ನು ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸ್ವೀಪ್ ಸಮಿತಿ ಹಾಗೂ ರಾಜ್ಯ ಸರ್ಕಾರಿ ನೌಕರರ‌ ಸಂಘದ ಜಿಲ್ಲಾ ಘಟಕ ಜಂಟಿಯಾಗಿ ಆಯೋಜನೆ ಮಾಡಿದ್ದವು. ಜಾಥಾಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಯಶವಂತ‌ ವಿ. ಗುರುಕರ್ ಬುಲೆಟ್‌ನಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಡಾ. ಗಿರೀಶ್ ಡಿ. ಬದೋಲೆ ಅವರನ್ನು ಕೂರಿಸಿಕೊಂಡು ಸಂಚಾರ ನಡೆಸಿದರು.

ಜಾಥಾಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, "ಕಲಬುರಗಿ ನಗರದಲ್ಲಿ ಮತದಾನ ಪ್ರಮಾಣ ಶೇ 49ಇದ್ದು, ಇಬ್ಬರಲ್ಲಿ ಒಬ್ಬರು ಮಾತ್ರ ಮತದಾನ ಮಾಡುತ್ತಿದ್ದಾರೆ. ಸದೃಢ ಭಾರತಕ್ಕೆ ಸಂವಿಧಾನಬದ್ದ ಹಕ್ಕಾಗಿರುವ ಮತವನ್ನು ಕಡ್ಡಾಯವಾಗಿ ಎಲ್ಲರೂ ಚಲಾಯಿಸಬೇಕು" ಎಂದು ಮನವಿ ಮಾಡಿದರು.

Voter Awareness Campaign Bike Rally By Government Employees

ಡಾ. ಗಿರೀಶ್ ಡಿ. ಬದೋಲೆ‌ ಮಾತನಾಡಿ, "ಈ ಬಾರಿ ಜಿಲ್ಲೆಯಲ್ಲಿ ಮತದಾನ ಪ್ರಮಾಣವನ್ನು ಶೇ 75ಕ್ಕಿಂತ ಹೆಚ್ಚಿಸುವ ಗುರಿ ಹೊಂದಿ ಸ್ವೀಪ್ ಚಟುವಟಿಕೆಗಳನ್ನು ಕೈಗೊಂಡಿದೆ. ಮೇ 10 ರಂದು ನಡೆಯುವ ಮತದಾನ ದಿನದಂದು ನಗರ ವಾಸಿಗಳು ತಪ್ಪದೇ ಮತ ಚಲಾಯಿಸಬೇಕು. ಮುಂದೆ ತಾಲೂಕಾ ಹಂತದಲ್ಲಿ ಸ್ವೀಪ್ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುವುದು" ಎಂದು ಹೇಳಿದರು.

ಕ್ಯಾಂಡಲ್ ಲೈಟ್ ಮಾರ್ಚ್; ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸ್ವೀಪ್ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಶನಿವಾರ ಕಲಬುರಗಿ ನಗರದಲ್ಲಿ ಸಂಜೆ ಸರ್ದಾರ ವಲ್ಲಭಭಾಯ್ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿ ತನಕ ಕ್ಯಾಂಡಲ್ ಮಾರ್ಚ್‍ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಮತದಾದನ ಬಗ್ಗೆ ಜಾಗೃತಿ ಮೂಡಿಸಲು ವಿಕಲಚೇತನರು ಮತು ತೃತೀಯ ಲಿಂಗಿಗಳು ಸಕ್ರಿಯವಾಗಿ ಭಾಗವಹಿಸುವ ಮೂಲಕ ಜನರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಿದರು.

ಕಲಬುರಗಿ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳಿಗೆ 123 ಫ್ಲೈಯಿಂಗ್ ಸ್ಕ್ವಾಡ್ ತಂಡ ರಚಿಸಲಾಗಿದೆ. ಪ್ರತಿ ತಂಡದಲ್ಲಿ ಓರ್ವ ಅಧಿಕಾರಿಗಳ ಜೊತೆಗೆ ಸಹಾಯಕ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಗೂ ವಿಡಿಯೋಗ್ರಾಫರ್ ಇರಲಿದ್ದಾರೆ. ತಂಡಗಳು ದಿನದ 24 ಗಂಟೆಗಳ ಕಾಲ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಲಿವೆ.

ಜಿಲ್ಲೆಯಲ್ಲಿ ಅಫಜಲಪುರ, ಜೇವರ್ಗಿ, ಚಿತ್ತಾಪುರ, ಸೇಡಂ, ಚಿಂಚೋಳಿ, ಕಲಬುರಗಿ ಗ್ರಾಮೀಣ, ಕಲಬುರಗಿ ದಕ್ಷಿಣ, ಕಲಬುರಗಿ ಉತ್ತರ, ಆಳಂದ ವಿಧಾನಸಭಾ ಕ್ಷೇತ್ರಗಳಿವೆ. ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಉಲ್ಲಂಘನೆ, ಚುನಾವಣಾ ಅಕ್ರಮ‌ ಕಂಡುಬಂದಲ್ಲಿ 24*7 ಸಹಾಯವಾಣಿ ಸಂಖ್ಯೆ 1950, 08472-230141, eVigil ತಂತ್ರಾಂಶ & [email protected]ಗೆ ದೂರು ಸಲ್ಲಿಸುವಂತೆ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಜನರಲ್ಲಿ ಮನವಿ ಮಾಡಿದ್ದಾರೆ.

ಕಲಬುರಗಿ ಜಿಲ್ಲೆಯಾದ್ಯಂತ 2,380 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. 10,98,549 ಪುರುಷರು ಮತ್ತು 10,72,662 ಮಹಿಳೆಯರು ಸೇರಿ 21,71,211 ಮತದಾರರು ಮತ ಚಲಾಯಿಸಲು ಅರ್ಹರಿದ್ದಾರೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಏ.11ರ ತನಕ ಅವಕಾಶವನ್ನು ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+