ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಸಿಎಂಗೆ ಧಮ್​, ತಾಕತ್ ಇಲ್ಲವೇ?; ಕಾಂಗ್ರೆಸ್ ಟ್ವೀಟ್

|
Google Oneindia Kannada News

ಬೆಂಗಳೂರು, ನವೆಂಬರ್ 28; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕರ ಧಮ್, ತಾಕತ್ ಬಗ್ಗೆ ಆಗಾಗ ಮಾತನಾಡುತ್ತಾರೆ. ಈಗ ಮತದಾರರ ಮಾಹಿತಿ ಕಳವು ಪ್ರಕರಣ ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿಗಳನ್ನು ಪ್ರಶ್ನೆ ಮಾಡಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಸೋಮವಾರ ಸರಣಿ ಟ್ವೀಟ್ ಮಾಡಿದೆ. ಬೆಂಗಳೂರು ನಗರದ ಮೂರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನಡೆದ ಮತದಾರರ ಮಾಹಿತಿ ಕಳವು ಪ್ರಕರಣವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

Breaking; ಮತದಾರರ ಮಾಹಿತಿ ಕಳವು, 28 ಕ್ಷೇತ್ರಗಳ ತನಿಖೆಗೆ ಒತ್ತಾಯ Breaking; ಮತದಾರರ ಮಾಹಿತಿ ಕಳವು, 28 ಕ್ಷೇತ್ರಗಳ ತನಿಖೆಗೆ ಒತ್ತಾಯ

ಕಾಂಗ್ರೆಸ್‌ ತನ್ನ ಟ್ವೀಟ್‌ನಲ್ಲಿ, 'ಚಿಲುಮೆ ಸಂಸ್ಥೆಯಲ್ಲಿ ಲೆಟರ್ ಹೆಡ್, ಚೆಕ್ ದೊರಕಿದ ವಿಚಾರವಾಗಿ ಸಚಿವ ಡಾ. ಅಶ್ವಥ ನಾರಾಯಣ್ ಅವರ ವಿಚಾರಣೆ ಮಾಡುವ ದಮ್ಮು, ತಾಕತ್ತು ಇಲ್ಲವೇ ಬಸವರಾಜ ಬೊಮ್ಮಾಯಿ ಅವರೇ?. ಸಚಿವರಿಗೂ ಚಿಲುಮೆಗೂ ಏನು ಸಂಬಂಧ?' ಎಂದು ಹೇಳಿದೆ.

ಮತದಾರರ ಮಾಹಿತಿ ಕಳವು ಪ್ರಕರಣದ ಕಿಂಗ್‌ಪಿನ್‌ಗಳು ಸಚಿವರು, ಶಾಸಕರು ಎಂದ ಡಿ.ಕೆ.ಶಿವಕುಮಾರ್ ಮತದಾರರ ಮಾಹಿತಿ ಕಳವು ಪ್ರಕರಣದ ಕಿಂಗ್‌ಪಿನ್‌ಗಳು ಸಚಿವರು, ಶಾಸಕರು ಎಂದ ಡಿ.ಕೆ.ಶಿವಕುಮಾರ್

Voter Data Theft Why Is The Chief Minister Silent Asks Congress

'ಬೇರೆಲ್ಲವನ್ನೂ ಪುಂಖಾನುಪುಂಖವಾಗಿ ಮಾತಾಡುವ ಮುಖ್ಯಮಂತ್ರಿಗಳು ಈ ಬಗ್ಗೆ ಮೌನ ಮುರಿಯದಿರುವುದೇಕೆ?. ಸಿಎಂ ಕೂಡ ಈ ಅಕ್ರಮದಲ್ಲಿ ಪಾಲು ಹೊಂದಿರುವರೇ?' ಎಂದು ಟ್ವೀಟ್‌ನಲ್ಲಿ ಪ್ರಶ್ನಿಸಿದೆ.

ಮತದಾರರ ಮಾಹಿತಿ ಕಳವು: ಮುಕ್ತ ತನಿಖೆಗೆ ಆದೇಶ ಎಂದ ಸಿಎಂ ಬೊಮ್ಮಾಯಿ ಮತದಾರರ ಮಾಹಿತಿ ಕಳವು: ಮುಕ್ತ ತನಿಖೆಗೆ ಆದೇಶ ಎಂದ ಸಿಎಂ ಬೊಮ್ಮಾಯಿ

ಸಿಎಂ ಉತ್ತರಿಸಬೇಕು?; 'ರಾಜಕೀಯ ಒತ್ತಡದಿಂದ ಚಿಲುಮೆ ಸಂಸ್ಥೆಗೆ ಸಹಕರಿಸಿದ್ದೆವು ಎಂದು ಅಧಿಕಾರಿಗಳು ಹೇಳಿದ್ದಾರೆ. ಒತ್ತಡ ಹಾಕಿದ ರಾಜಕೀಯದವರು ಯಾರು?. ಅವರ ಹಿತಾಸಕ್ತಿ ಏನಿತ್ತು?. ಚಿಲುಮೆ ಸಂಸ್ಥೆಯ ಹಣದ ಮೂಲ ಯಾವುದು?. ಚೆಕ್, ಲೆಟರ್ ಹೆಡ್‌ ಸಿಕ್ಕಿರುವ ಸಂಗತಿಯನ್ನು ಬಚ್ಚಿಡುತ್ತಿರುವುದೇಕೆ?. ಅಕ್ರಮಗಳ ಮಹಾಪೋಷಕ ಬಸವರಾಜ ಬೊಮ್ಮಾಯಿ ಅವರು ಜನತೆಗೆ ಉತ್ತರಿಸಬೇಕು' ಎಂದು ಕಾಂಗ್ರೆಸ್‌ ಆಗ್ರಹಿಸಿದೆ.

ಬೆಂಗಳೂರು ನಗರದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪವಿದೆ. ಮತದಾರರ ಹೆಸರು ಡಿಲೀಟ್ ಮಾಡಲಾಗಿದೆ. ಮತದಾರರ ಮಾಹಿತಿಯನ್ನು ಅಕ್ರವಾಗಿ ಸಂಗ್ರಹ ಮಾಡಲಾಗಿದೆ ಎಂಬುದು ಆರೋಪ. ಈ ಕುರಿತು ಕರ್ನಾಟಕ ಕಾಂಗ್ರೆಸ್ ರಾಜ್ಯ, ಕೇಂದ್ರ ಚುನಾವಣಾ ಆಯೋಗಕ್ಕೆ ವರದಿ ನೀಡಿದೆ.

ಈ ಅಕ್ರಮದ ಕುರಿತು ಬಿಬಿಎಂಪಿ ಹಲಸೂರು ಗೇಟ್ ಠಾಣೆಗೆ ದೂರು ನೀಡಿದೆ. ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. ಮತ್ತೊಂದು ಕಡೆ ಚುನಾವಣಾ ಆಯೋಗ ಈ ಕುರಿತು ತನಿಖೆ ಆರಂಭಿಸಿದೆ. ಈ ಹಗರಣದ ವಿಚಾರ ರಾಜಕೀಯ ಜಟಾಪಟಿಗೆ ಸಹ ಕಾರಣವಾಗಿದೆ.

English summary
Voter data theft at Bengaluru; In a series of tweet Karnataka Congress asked that why is the chief minister Basavaraj Bommai silent on the issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X