ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮತದಾರರ ಪಟ್ಟಿ ಪರಿಷ್ಕರಣೆಗೆ ಅವಕಾಶ; ನ.29ಕ್ಕೆ ಅಭಿಯಾನ ಆರಂಭ

By Lekhaka
|
Google Oneindia Kannada News

ಬೆಂಗಳೂರು, ನವೆಂಬರ್ 28: ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ 2020-2021ನೇ ಸಾಲಿನ ಮತದಾರರ ಪಟ್ಟಿ ಪರಿಷ್ಕರಣೆಯ ಅಭಿಯಾನ ಆರಂಭಗೊಂಡಿದ್ದು, ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವ ಅವಕಾಶ ನೀಡಲಾಗಿದೆ.

ಮತದಾರರ ಪಟ್ಟಿಯಿಂದ ಕೈಬಿಟ್ಟು ಹೋಗಿರುವ ಹೆಸರನ್ನು ಮತ್ತೆ ಸೇರಿಸಲು ಅಥವಾ ಹೊಸದಾಗಿ ಹೆಸರು ನೋಂದಣಿ ಮಾಡಿಸಲು ಚುನಾವಣಾ ಆಯೋಗದಿಂದ ಅಭಿಯಾನ ನಡೆಯಲಿದೆ. ನವೆಂಬರ್ 29, ಡಿಸೆಂಬರ್ 6 ಹಾಗೂ 13ರಂದು ಮೂರು ದಿನ ಮತದಾರರ ಅಭಿಯಾನ ನಡೆಯಲಿದ್ದು, ಈ ಮೂರು ದಿನಗಳಲ್ಲಿ ಕರಡು ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರ್ಪಡೆಗೊಳಿಸುವ, ಪರಿಷ್ಕರಿಸುವ ಹಾಗೂ ತೆಗೆದು ಹಾಕುವ ಪ್ರಕ್ರಿಯೆಗೆ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ.

ಮತದಾರರ ಪಟ್ಟಿ ಪರಿಷ್ಕರಣೆ; ಹೆಸರು ಸೇರಿಸುವುದು ಹೇಗೆ?ಮತದಾರರ ಪಟ್ಟಿ ಪರಿಷ್ಕರಣೆ; ಹೆಸರು ಸೇರಿಸುವುದು ಹೇಗೆ?

ಈ ಮೂರು ದಿನಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಿಮ್ಮ ಹತ್ತಿರದ ಮತಗಟ್ಟೆಗೆ ಭೇಟಿ ನೀಡಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ನಿಮ್ಮ ಇತ್ತೀಚಿನ ಎರಡು ಭಾವಚಿತ್ರಗಳು ಹಾಗೂ ವಿಳಾಸ-ಪುರಾವೆಯ ಗುರುತಿನ ಚೀಟಿಯೊಂದಿಗೆ ಹತ್ತಿರದ ಮತಗಟ್ಟೆಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು. ಎಲ್ಲಾ ಮತಗಟ್ಟೆಗಳಲ್ಲಿ ಅಧಿಕಾರಿಗಳು ಅಗತ್ಯ ನೆರವು ನೀಡಲು ಹಾಜರಿರುತ್ತಾರೆ.

Voter List Special Revision Campaign Starts From Nov 19

2021ರ ಜನವರಿ 1ಕ್ಕೆ 18 ವರ್ಷ ಸಂಪೂರ್ಣವಾಗುವವರು ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಬೂತ್ ಮಟ್ಟದ ಅಧಿಕಾರಿಗಳಿಂದ ಅಥವಾ ಮತದಾರರ ಹೆಸರು ನೋಂದಣಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಪಡೆದು ಹೆಸರು ಸೇರ್ಪಡೆ ಮಾಡಿಕೊಳ್ಳಬಹುದು. ಜನವರಿ 18ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿದುಬಂದಿದೆ.

English summary
Election commission organized special voter registration drive in Karnataka for 2020-21. It will start from nov 29,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X