ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚುನಾವಣೆ: ಮತಗಟ್ಟೆ ಮಾಹಿತಿಗೆ ಈ ವೆಬ್‌ಸೈಟ್ ಬಳಸಿ

|
Google Oneindia Kannada News

ಬೆಂಗಳೂರು, ಅ. 23: ವಿಧಾನ ಪರಿಷತ್‌ನ ಎರಡು ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಮತದಾರರು ತಮ್ಮ ಮತಗಟ್ಟೆ ಕುರಿತು ವೆಬ್‌ಸೈಟ್ ಮೂಲಕ ಮಾಹಿತಿ ಪಡೆದುಕೊಳ್ಳಬಹುದು ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರಗಳಿಗೆ ಇದೇ ಅಕ್ಟೋಬರ್ 28ರಂದು ಮತದಾನ ನಡೆಯಲಿದೆ. ಈ ಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ನೋಂದಾಯಿತ ಮತದಾರರು ಯಾವ ಮತಗಟ್ಟೆಯಲ್ಲಿ ಮತ ಚಲಾಯಿಸಬೇಕೆಂಬ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಈ ಅವಕಾಶ ಕಲ್ಪಿಸಲಾಗಿದೆ.

ಕೇಂದ್ರ ಚುನಾವಣಾ ಆಯೋಗದ ಬೆಂಗಳೂರಿನ ಮುಖ್ಯ ಚುನಾವಣಾಧಿಕಾರಿ ಅವರ ಕಚೇರಿಯ ವೆಬ್‌ಸೈಟ್‌ನಲ್ಲಿ search your Name in Teacher's and Graduate's Electoral Roll ಶೀರ್ಷಿಕೆಯಲ್ಲಿ ಅಥವಾ ನೇರವಾಗಿ http://ceokarnataka.kar.nic.in/SearchHome_TG.aspx ಈ ಲಿಂಕ್‌ನಲ್ಲಿ ಮತದಾರರು ಮಾಹಿತಿ ಪಡೆದುಕೊಳ್ಳಬಹುದಾಗಿದೆ.

Voters Can Get Information About Their Booth Through The Website For Council Election

Recommended Video

ಚುನಾವಣಾ ಪ್ರಚಾರ ಸಂದರ್ಭದಲ್ಲಿ Muniratna ಡಿಕೆಶಿ ಬಗ್ಗೆ ಹೇಳಿದ್ದೇನು | Oneindia Kannada

ಮತದಾರರು ಈ ಅವಕಾಶವನ್ನು ಉಪಯೋಗಿಸಿಕೊಂಡು ತಮ್ಮ ಮತವನ್ನು ಚಲಾಯಿಸುವಂತೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು, ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣಾಧಿಕಾರಿ ನವೀನ್ ರಾಜ್ ಸಿಂಗ್ ಅವರು ತಿಳಿಸಿದ್ದಾರೆ.

English summary
In the ongoing elections to the two constituencies of the Legislative council, voters can get information about their booth through the website, the Election Commission said in press release, Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X