ಮತದಾರರ ದತ್ತಾಂಶ ಕಳ್ಳತನ ಪ್ರಕರಣ: ಸರ್ಕಾರಕ್ಕೆ ಡೆಡ್ ಲೈನ್ ನೀಡಿದ ಡಿ.ಕೆ.ಶಿವಕುಮಾರ್

ಬೆಂಗಳೂರು, ನವೆಂಬರ್ 18: ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆಸಿದ ಅಧಿಕಾರಿಗಳನ್ನ ನಾಳೆ ಮಧ್ಯಾಹ್ನದ ಒಳಗೆ ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸರ್ಕಾರಕ್ಕೆ ಗಡುವು ನೀಡಿದ್ದಾರೆ.

ಈ ಕುರಿತು ಶುಕ್ರವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕೇಂದ್ರ ಚುನಾವಣಾ ಆಯೋಗಕ್ಕೂ ತೆಗೆದುಕೊಂಡು ಹೋಗುತ್ತೇವೆ. ಸ್ವಯಂ ಪ್ರೇರಿತವಾಗಿ ಕೇಸ್ ದಾಖಲಿಸಿಕೊಳ್ಳುವಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಮನವಿ ಮಾಡುತ್ತೇವೆ ಎಂದರು.

ನಮ್ಮ ಅವಧಿಯಲ್ಲಿ ಚಿಲುಮೆ ಸಂಸ್ಥೆ ಮೂಲಕ ಮತದಾರರ ಮಾಹಿತಿ ದುರ್ಬಳಕೆ ಮಾಡಿದ್ದರೆ ನಮ್ಮನ್ನು ಬಂಧಿಸಲಿ. ನಮ್ಮ ಅವಧಿಯಲ್ಲಿ ಯಾವ ಅಧಿಕಾರಿ, ಮಂತ್ರಿಗಳು ಅದಕ್ಕೆ ಅವಕಾಶ ನೀಡಿದ್ದರೋ ನನಗೆ ಗೊತ್ತಿಲ್ಲ. ಇದು ಗಂಭೀರ ಅಪರಾಧವಾಗಿದೆ. ಚುನಾವಣಾ ಆಯೋಗವು ಈ ವಿಚಾರವನ್ನು ಡಿವಿಸಿಗೆ (ವಿಭಾಗೀಯ ಅಧಿಕಾರಿ) ನೀಡಿದ್ದು, ಇದು ಡಿವಿಸಿಯಿಂದ ತನಿಖೆಯಾಗುವ ವಿಚಾರವಲ್ಲ. ನಾಳೆ ನಾವು ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಲು ಸಮಯ ಕೇಳಿದ್ದೇವೆ.

Voters Data theft case : DK Shivakumar gives 1 day deadline for Govt to arrest the accused

ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿ ಆದೇಶವನ್ನು ಗೌರವ್ ಗುಪ್ತಾ ಅವರು ಏಕಾಏಕಿ ಹಿಂಪಡೆದಿದ್ದಾರೆ. ಆದರೆ ಈಗಾಗಲೇ ಈ ಸಂಸ್ಥೆಯ ಸುಮಾರು 7-8 ಸಾವಿರ ಸಿಬ್ಬಂದಿ ಮನೆ, ಮನೆಗೆ ಹೋಗಿ ಮತದಾರರ ಮಾಹಿತಿ ಕಲೆ ಹಾಕಿದ್ದಾರೆ. ಮತ್ತೊಂದೆಡೆ ಕೆಲವರು ತಮ್ಮ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಹೇಳುತ್ತಿರುವ ವರದಿಗಳನ್ನು ಮಾಧ್ಯಮಗಳಲ್ಲಿ ನೋಡಿದೆ. ಈ ಸಂಸ್ಥೆಯ ಕಾರ್ಯವ್ಯಾಪ್ತಿ ಏನಿದೆ ಎಂದು ನಮ್ಮ ಬಳಿ ಮಾಹಿತಿ ಇದೆ. ಈ ಬಗ್ಗೆ ಅಲ್ಲಿ ಕೆಲಸ ಮಾಡುತ್ತಿದ್ದವರಿಂದಲೇ ಮಾಹಿತಿ ಕಲೆ ಹಾಕಿದ್ದೇನೆ. ಅವರು ಜನ ಪ್ರತಿನಿಧಿಗಳ ಬಳಿ ಹೋಗಿ ನಾವು ನಿಮ್ಮನ್ನು ಗೆಲ್ಲಿಸುತ್ತೇವೆ ಎಂದು ಪ್ರತಿ ವಾರ್ಡ್ ನಲ್ಲಿ ಕಾರ್ಪೊರೇಟರ್ ಬಳಿ 1 ಕೋಟಿ ಹಣ ಕೇಳಿದ ಬಗ್ಗೆ ಹಲವರು ಮಾಹಿತಿ ನೀಡಿದ್ದಾರೆ. ಈ ವಿಚಾರದಲ್ಲಿ ನಾವು ಕೂಡ ನಮ್ಮದೇ ಆದ ತನಿಖೆ ಮಾಡಿದ್ದೇವೆ.

ಮುಖ್ಯಮಂತ್ರಿಗಳು ಈ ವಿಚಾರದಲ್ಲಿ ಉಡಾಫೆಯಾಗಿ ಮಾತನಾಡಬಾರದು. ಮುಖ್ಯಮಂತ್ರಿಗಳು ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದು, ಅವರು ಈ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿ ಹೊಂದಿರಬೇಕು. ಯಾವ ಕ್ಷೇತ್ರಗಳಲ್ಲಿ ಎಷ್ಟು ವಾರ್ಡ್ ಗಳಲ್ಲಿ ಮಾಹಿತಿ ಕಲೆ ಹಾಕಿದ್ದಾರೆ, ಖಾಲಿ ಮನೆ, ನಿವೇಶನಗಳನ್ನು ಗುರುತಿಸಿ ಅವುಗಳ ದುರ್ಬಳಕೆಗೆ ಹೇಗೆ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಗೊತ್ತಿದೆ. ರಾಜ್ಯ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿ, ಈ ಸಂಸ್ಥೆಗೆ ಅನುಮತಿ ಆದೇಶ ನೀಡಿದ್ದಾರೆ. ಆದರೂ ಆಯೋಗದವರು ಯಾಕೆ ಕ್ರಮ ಕೈಗೊಂಡಿಲ್ಲ? ಎಂದು ಪ್ರಶ್ನಿಸಿದರು.

ನಾವು ಪೊಲೀಸ್ ಕಮಿಷನರ್ ಅವರಿಗೆ ಕೊಟ್ಟಿರುವ ದೂರಿನ ಮಾಹಿತಿಯನ್ನು ಇ ಮೇಲ್ ಮೂಲಕ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದೇವೆ. ನಾಳೆ ಮಧ್ಯಾಹ್ನ ಚುನಾವಣಾ ಆಯೋಗದ ಅಧಿಕಾರಿಗಳನ್ನು ನಾನು, ಸಿದ್ದರಾಮಯ್ಯ ಹಾಗೂ ಇತರ ನಾಯಕರು ಭೇಟಿ ಮಾಡಲಿದ್ದೇವೆ.

Voters Data theft case : DK Shivakumar gives 1 day deadline for Govt to arrest the accused

ಈ ಸಂಸ್ಥೆಗಳ ನಿರ್ದೇಶಕ ರವಿಕುಮಾರ್ ಬಿಟ್ಟು ಬಿಎಲ್ಒ ಆಗಿ ಸಮೀಕ್ಷೆ ಮಾಡಿದ ಸಿಬ್ಬಂದಿ ಮೇಲೆ ಎಫ್ಐಆರ್ ದಾಖಲಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ಮುಖ್ಯಮಂತ್ರಿಗಳು ಹಾಗೂ ಮಂತ್ರಿಗಳು ಅವರಿಗೆ ರಕ್ಷಣೆ ನೀಡುತ್ತಿದ್ದಾರೆ. ಇದನ್ನೇ ನಾವು ಹೇಳುತ್ತಿರುವುದು. ಆ ಗುರುತಿನ ಚೀಟಿ ಮಾಡಿದವರು ಯಾರು? ಈ ಗುರುತಿನ ಚೀಟಿ ವಿತರಣೆ ಮಾಡಿರುವ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಅಧಿಕಾರಗಳ ವಿರುದ್ಧವೂ ಎಫ್ಐಆರ್ ಆಗಬೇಕು. ಸರ್ಕಾರಿ ಹುದ್ದೆಯನ್ನು ಬೇರೆಯವರಿಗೆ ನೀಡಲು ಸಾಧ್ಯವಿಲ್ಲ. ನಾನು ಮುಖ್ಯಮಂತ್ರಿ ಹಾಗೂ ಸರ್ಕಾರಿ ಅಧಿಕಾರಿ ಎಂದು ಹೇಳಿಕೊಳ್ಳಲು ಸಾಧ್ಯವಿಲ್ಲ. ನಮ್ಮ ಸರ್ಕಾರವದ ಅವಧಿಯಲ್ಲಿ ನಾನು, ಅಥವಾ ಕುಮಾರಸ್ವಾಮಿ ಅಥವಾ ಬೆಂಗಳೂರಿನ ಯಾವುದೇ ಸಚಿವರು, ಶಾಸಕರು ಈ ಕೆಲಸ ಮಾಡಿದ್ದರೆ ನಮ್ಮ ವಿರುದ್ಧವೂ ಕ್ರಮ ಕೈಗೊಳ್ಳಲಿ. ಈ ವಿಚಾರದಿಂದಲೂ ದೇಶದ ಮುಂದೆ ರಾಜ್ಯದ ಮಾನ ಹರಾಜಾಗುತ್ತಿದೆ. ಮುಖ್ಯಮಂತ್ರಿಗಳು ಇದರ ಗಂಭೀರತೆ ಅರಿಯಬೇಕು. ಮತದಾನದ ಹಕ್ಕು ಮೂಲಭೂತ ಹಕ್ಕಾಗಿದ್ದು, ಅದನ್ನು ಕಸಿಯುವ ಅಕ್ರಮ ಮಾಡಲಾಗಿದೆ.

ಚುನಾವಣೆಯಲ್ಲಿ ಸೋಲುತ್ತೇವೆ ಎಂಬ ಭಯದಿಂದ ಇಂತಹ ಅಕ್ರಮಕ್ಕೆ ಮುಂದಾಗಿರುವುದು ಪ್ರಜಾಪ್ರಭುತ್ವ ವ್ಯವಸ್ಥೆ, ಮತದಾರರಿಗೆ ಮಾಡಿರುವ ಅಪಮಾನ. ಈ ಸಮಯದಲ್ಲಿ ನಾನು ಜೆಡಿಎಸ್, ಕಮ್ಯುನಿಸ್ಟ್, ರೈತ ಸಂಘ ಹಾಗೂ ನಮ್ಮ ಪಕ್ಷದವರಿಗೆ ನಿಮ್ಮ ಮೂಲಕ, ನೀವೆಲ್ಲರೂ ನಿಮ್ಮ ಬೂತ್ ಗಳಿಗೆ ಹೋಗಿ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಳ್ಳಿ. ಅನೇಕರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಅಧಿಕಾರಿಗಳು, ಬಿಎಲ್ ಒಗಳ ಮೂಲಕ ಈ ರೀತಿ ಅಕ್ರಮ ಮಾಡಲಾಗುತ್ತಿದೆ. ನಮ್ಮ ಪಕ್ಷದವರಿಗೆ ಪ್ರತಿ ಬೂತ್ ನಲ್ಲಿ ಏಜೆಂಟರನ್ನು ನೇಮಿಸಲು ಹಕ್ಕು ನೀಡಲಾಗಿದೆ. ನೀವು ಬಿಎಲ್ಎಗಳ ಮೂಲಕ ಮಾಹಿತಿ ನೀಡಿ ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ ಎಂದು ಹೇಳಬಯಸುತ್ತೇನೆ.

26 ಲಕ್ಷ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದ್ದು, 14 ಲಕ್ಷ ಹೆಸರನ್ನು ಹೊಸದಾಗಿ ಸೇರಿಸಲಾಗಿದೆ ಎಂದು ಅವರೇ ಹೇಳಿದ್ದಾರೆ. ಯಾರ ಹೆಸರು ಕೈ ಬಿಟ್ಟು, ಯಾರ ಹೆಸರು ಸೇರಿಸಿದ್ದಾರೆ? ಪ್ರತಿ ಕ್ಷೇತ್ರದಲ್ಲೂ ಹೀಗೆ ಮಾಡಲಾಗಿದೆ. ಹೀಗಾಗಿ ಕಾರ್ಯಕರ್ತರು ಬಹಳ ಜಾಗರೂಕರಾಗಿ ಈ ಬಗ್ಗೆ ಗಮನ ಹರಿಸಬೇಕು. ಪ್ರತಿ ಕ್ಷೇತ್ರದಲ್ಲಿ ತಮ್ಮ ವಿರುದ್ಧ ಇರುವ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಟ್ಟು, ಅಕ್ರಮವಾಗಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ' ಎಂದು ತಿಳಿಸಿದರು.

ನಿಮ್ಮ ಸರ್ಕಾರದ ಅವಧಿಯಲ್ಲಿ ಅನುಮತಿ ನೀಡುವಾಗ ಈ ಸಂಸ್ಥೆಗಳ ಹಿನ್ನಲೆ ಪರಿಶೀಲನೆ ಮಾಡಲಿಲ್ಲವೇ ಎಂಬ ವಿಚಾರವಾಗಿ ಮಾತನಾಡಿ, ಇಂತಹ ತಪ್ಪನ್ನು ಯಾರೇ ಮಾಡಿದರೂ ತಪ್ಪೇ. ಅದು ಶಿವಕುಮಾರ್ ಆಗಲಿ, ಬೇರೆಯವರೇ ಆಗಲಿ. ಈ ವಿಚಾರವಾಗಿ ತನಿಖೆ ಮಾಡಿ. ಒಬ್ಬರು ತಪ್ಪು ಮಾಡಿದರು ಎಂದು ನೀನು ಅದೇ ತಪ್ಪು ಮಾಡುತ್ತೇನೆ ಎಂದು ಹೇಳುವುದು ಎಷ್ಟು ಸರಿ? ಮತದಾನದ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. ನಿಮಗೆ ಅಧಿಕಾರ ಇದೆ ಎಂದು ಆ ಹಕ್ಕು ಕಸಿಯುವುದು ಎಷ್ಟು ಸರಿ? ಎಂದು ಕೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+