ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೋಟರ್ ಐಡಿ ಕೇಸ್: ಡಿಸಿ ಶ್ರೀನಿವಾಸ್ ಅಮಾನತು ಆದೇಶಕ್ಕೆ ತಡೆ ಇಲ್ಲ

By ಎಸ್ಎಸ್ಎಸ್
|
Google Oneindia Kannada News

ಬೆಂಗಳೂರು, ಡಿಸೆಂಬರ್ 07; ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅಮಾನತು ಆದೇಶಕ್ಕೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.

ಅಷ್ಟೇ ಅಲ್ಲದೇ, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿಯನ್ನು ಗುರುವಾರವೇ ನ್ಯಾಯಾಲಯಕ್ಕೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಕೋರ್ಟ್ ನಿರ್ದೇಶಿಸಿದೆ.

ಮತದಾರರ ಮಾಹಿತಿ ದುರುಪಯೋಗ; ಡಿಸಿ ಅಮಾನತು ಪ್ರಶ್ನಿಸಿ ಹೈಕೋರ್ಟ್ ಮೊರೆ ಮತದಾರರ ಮಾಹಿತಿ ದುರುಪಯೋಗ; ಡಿಸಿ ಅಮಾನತು ಪ್ರಶ್ನಿಸಿ ಹೈಕೋರ್ಟ್ ಮೊರೆ

ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಕೇಂದ್ರ ಚುನಾವಣಾ ಆಯೋಗದ ನಿರ್ದೇಶದ ಮೇರೆಗೆ ತಮ್ಮನ್ನು ಸೇವೆಯಿಂದ ಅಮಾನತುಪಡಿಸಿ ರಾಜ್ಯ ಸರ್ಕಾರ ಹೊರಡಿಸಿದ ಆದೇಶ ರದ್ದು ಕೋರಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಜಿ. ನರೇಂದರ್ ಮತ್ತು ಪಿ. ಎನ್. ದೇಸಾಯಿ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.

ಮತದಾರರ ಪಟ್ಟಿ ಪರಿಷ್ಕರಣೆ: ನಿಗದಿತ ಅವಧಿಗೆ ಮನೆ ಮನೆ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಿಮತದಾರರ ಪಟ್ಟಿ ಪರಿಷ್ಕರಣೆ: ನಿಗದಿತ ಅವಧಿಗೆ ಮನೆ ಮನೆ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಿ

"ಹಗರಣ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಯು ಗುರುವಾರ ಕೋರ್ಟ್‌ಗೆ ವರದಿ ಸಲ್ಲಿಸಬೇಕು. ಶ್ರೀನಿವಾಸ್ ಅಮಾನತು ಆದೇಶಕ್ಕೆ ತಡೆ ನೀಡಲಾಗುವುದಿಲ್ಲ. ಅಲ್ಲದೇ, ಅವರ ಹುದ್ದೆಗೆ ಬೇರೊಬ್ಬರನ್ನು ನೇಮಿಸುವಂತಿಲ್ಲ ಎಂಬ ಆದೇಶವೂ ಮುಂದುವರಿಯಲಿದೆ. ಚುನಾವಣಾ ಪ್ರಕ್ರಿಯೆ ಮುಂದುವರಿಸಲು ಆಯೋಗವು ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಹುದ್ದೆಗೆ ಇಬ್ಬರು ವಿಶೇಷ ಅಧಿಕಾರಿಗಳನ್ನು ನೇಮಕ ಮಾಡಬಾರದು" ಎಂದು ಪೀಠವು ಮೌಖಿಕವಾಗಿ ಹೇಳಿತು.

Voters ID Case: HC refuse to stay DC Srinivas suspension order

ದಾಖಲೆ ಇಲ್ಲದಿದ್ದರೂ ಶಿಫಾರಸು: ಜಿಲ್ಲಾಧಿಕಾರಿ ಶ್ರೀನಿವಾಸ್ ಪರ ವಕೀಲರು, ಯಾವುದೇ ದಾಖಲೆ ಇಲ್ಲದಿದ್ದರೂ ಅರ್ಜಿದಾರರನ್ನು ಅಮಾನತು ಮಾಡಲಾಗಿದೆ. ಯಾವುದೇ ದಾಖಲೆ ಇಲ್ಲದಿದ್ದರೂ ಕೇಂದ್ರ ಚುನಾವಣಾ ಆಯೋಗವು ಅಮಾನತು ಶಿಫಾರಸ್ಸಿಗೆ ಮಾಡಿದೆ ಎಂದರು.

Voter Data Theft: 3 ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆಗಾಗಿ 3 ವಿಶೇಷ ಅಧಿಕಾರಿ ನಿಯೋಜನೆVoter Data Theft: 3 ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆಗಾಗಿ 3 ವಿಶೇಷ ಅಧಿಕಾರಿ ನಿಯೋಜನೆ

ಭಾರತೀಯ ಚುನಾವಣಾ ಆಯೋಗವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲರು "ಮೇಲ್ನೋಟಕ್ಕೆ ಸಾಕ್ಷ್ಯಗಳಿದ್ದ ಹಿನ್ನೆಲೆಯಲ್ಲಿ ಶ್ರೀನಿವಾಸ್ ಅವರನ್ನು ಅಮಾನತು ಮಾಡಲು ಆದೇಶಿಸಲಾಗಿದೆ. ತನಿಖೆ ಪ್ರಗತಿಯಲ್ಲಿದ್ದು, ಈ ಸಂದರ್ಭದಲ್ಲಿ ಶ್ರೀನಿವಾಸ್ ಅವರ ಅಮಾನತು ಆದೇಶಕ್ಕೆ ತಡೆ ನೀಡಬಾರದು" ಎಂದು ಕೋರಿದರು.

"ಬೆಂಗಳೂರು ನಗರ ಜಿಲ್ಲಾಧಿಕಾರಿಯೂ ಆದ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯ ಅಮಾನತಿನ ಹಿನ್ನೆಲೆಯಲ್ಲಿ ಆ ಸ್ಥಾನ ಖಾಲಿಯಿದ್ದು, ಅಲ್ಲಿಗೆ ಯಾರನ್ನು ನೇಮಿಸಬಾರದು ಎಂದು ನ್ಯಾಯಾಲಯ ಆದೇಶ ಮಾಡಿದೆ. ಆದರೆ, ಚುನಾವಣಾ ಪ್ರಕ್ರಿಯೆ ಮುಂದುವರಿಸಲು ಇಬ್ಬರು ಅಧಿಕಾರಿಯನ್ನು ನಾಮನಿರ್ದೇಶನ ಮಾಡಲು ಅನುಮತಿಸಬೇಕು" ಎಂದು ಕೋರಿದರು.

English summary
Voters ID Case: Karnataka High Court refused to stay Bengaluru Urban deputy commissioner K. Srinivas suspension order.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X