ಮತದಾರರ ಮಾಹಿತಿ ದುರುಪಯೋಗ; ಡಿಸಿ ಅಮಾನತು ಪ್ರಶ್ನಿಸಿ ಹೈಕೋರ್ಟ್ ಮೊರೆ

ಬೆಂಗಳೂರು, ಡಿಸೆಂಬರ್ 06; ಬೆಂಗಳೂರು ನಗರದಲ್ಲಿ ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಅಮಾನತು ಪ್ರಶ್ನಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಕೇಂದ್ರ ಚುನಾವಣಾ ಆಯೋಗದ ನಿರ್ದೇಶದ ಮೇರೆಗೆ ತಮ್ಮನ್ನು ಸೇವೆಯಿಂದ ಅಮಾನತುಪಡಿಸಿ ರಾಜ್ಯ ಸರ್ಕಾರ ಹೊರಡಿಸಿದ ಆದೇಶ ರದ್ದು ಕೋರಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಜಿ. ನರೇಂದರ್ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಮಂಗಳವಾರ ವಿಚಾರಣೆ ನಡೆಸಿತು.

ನ್ಯಾಯಪೀಠ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿದೆ. ಅಲ್ಲದೇ, ಸದ್ಯ ಪ್ರಕರಣ ಸಂಬಂಧ ಮುಂದುವರಿಯದಂತೆ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

Voters ID issue: Bengaluru Urban DC Challanged Suspenion notice Ordered To State

ಅರ್ಜಿದಾರರ ಪರ ವಕೀಲರು, ಪ್ರಕರಣಕ್ಕೂ ಅರ್ಜಿದಾರರಿಗೂ ಯಾವುದೇ ಸಂಬಂಧವಿಲ್ಲ. ನಗರದ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಆಧಾರ್ ಕಾರ್ಡ್ ಜೋಡಣೆ ಕುರಿತು ಅರಿವು ಮೂಡಿಸುವುದು, ಮತದಾರರ ದತ್ತಾಂಶ ಪರಿಶೀಲಿಸುವುದು ಸೇರಿದಂತೆ ವಿವಿಧ ಚಟುವಟಿಕೆ ನಡೆಸಲು ಚಿಲುಮೆ ಶೈಕ್ಷಣಿಕ ಮತ್ತು ಸಾಂಸ್ಕೃತಿ ಮತ್ತು ಗ್ರಾಮೀಣಾಭಿವೃದ್ಧಿ ಟ್ರಸ್ಟ್‌ಗೆ ಅನುಮತಿ ನೀಡಿ ಬಿಬಿಎಂಪಿ ಮುಖ್ಯ ಆಯುಕ್ತರು 2022ರ ಆ.20ರಂದು ಆದೇಶಿಸಿದ್ದರು.

ಆದರೆ, ಅರಿವು ಮೂಡಿಸುವ ಮತದಾರರ ದತ್ತಾಂಶ ಸಂಗ್ರಹಿಸವ ಮೂಲಕ ಅಕ್ರಮ ಎಸಗಿದ ಆರೋಪದ ಮೇಲೆ ಚಿಲುಮೆಗೆ ನೀಡಿದ ಅನುಮತಿಯನ್ನು 2022ರ ನ.2ರಂದು ರದ್ದುಪಡಿಸಲಾಗಿದೆ ಎಂದು ಹೇಳಿದ್ದಾರೆ.

ಆದರೆ, ಕೇಂದ್ರ ಚುನಾವಣಾ ಆಯೋಗವು 2022ರ ನ.25ರಂದು ಬೆಂಗಳೂರು ಪತ್ರ ಆಧರಿಸಿ ತಮ್ಮನ್ನು ಸೇವೆಯಿಂದ ಅಮಾನತುಪಡಿಸಿ 2022ರ ನ.26ರಂದು ರಾಜ್ಯ ಸರ್ಕಾರ ಆದೇಶಿಸಿದೆ. ಆದೇಶ ಹೊರಡಿಸುವ ಮುನ್ನ ಸರ್ಕಾರ ಸರಿಯಾಗಿ ವಿವೇಚನ ಬಳಸಿಲ್ಲ. ಲಭ್ಯವಿರುವ ದಾಖಲೆ ಪರಿಶೀಲಿಸಿಲ್ಲ. ತಮಗೆ ಅವಕಾಶ ನೀಡಿ ಯಾವುದೇ ವಿವರಣೆ ಪಡೆದಿಲ್ಲ. ತಮ್ಮ ವಿರುದ್ಧದ ಆರೋಪಗಳು ದುರ್ನಡತೆಗೆ ಸಂಬಂಧಿಸಿದ ಆರೋಪವಲ್ಲ ಎಂಬುದನ್ನು ಪರಿಗಣಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಅಮಾನತು ಆದೇಶಕ್ಕೆ ತಡೆ ನೀಡಲು ಡಿ.1ರಂದು ನ್ಯಾಯಾಧೀಕರಣ ನಿರಾಕರಿಸಿದೆ. ಆದ್ದರಿಂದ ಸರ್ಕಾರದ ಆದೇಶದ ಅನ್ವಯ ಮುಂದಿನ ಯಾವುದೇ ಪ್ರಕ್ರಿಯೆ ಕೈಗೊಳ್ಳದಂತೆ ಮಧ್ಯಂತ ತಡೆಯಾಜ್ಞೆ ನೀಡಬೇಕು ಎಂದು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+