ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

14 ನಗರ ಸ್ಥಳೀಯ ಸಂಸ್ಥೆಗಳಿಗೆ ಇಂದು ಚುನಾವಣೆ

|
Google Oneindia Kannada News

ಬೆಂಗಳೂರು, ನವೆಂಬರ್ 12 : ಕರ್ನಾಟಕದ 14 ನಗರ ಸ್ಥಳೀಯ ಸಂಸ್ಥೆಗಳಿಗೆ ಇಂದು ಮತದಾನ ನಡೆಯಲಿದೆ. ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮಂಗಳವಾರ ಬೆಳಗ್ಗೆ 7ಗಂಟೆಯಿಂದ ರಾಜ್ಯದ ಒಟ್ಟು 418 ವಾರ್ಡ್‌ಗಳಿಗೆ ಮತದಾನ ನಡೆಯುತ್ತಿದೆ. ಎರಡು ಮಹಾನಗರ ಪಾಲಿಕೆ, 6 ನಗರ ಸಭೆ, 3 ಪಟ್ಟಣ ಪಂಚಾಯಿತಿ, 3 ಪುರಸಭೆಗಳಿಗೆ ಚುನಾವಣೆ ನಡೆಯುತ್ತಿದ್ದು, ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ.

ಡಿ. ಕೆ. ಶಿವಕುಮಾರ್ ಪ್ರಭಾವ; 7 ಅಭ್ಯರ್ಥಿಗಳು ಅವಿರೋಧ ಆಯ್ಕೆ ಡಿ. ಕೆ. ಶಿವಕುಮಾರ್ ಪ್ರಭಾವ; 7 ಅಭ್ಯರ್ಥಿಗಳು ಅವಿರೋಧ ಆಯ್ಕೆ

ದಾವಣಗೆರೆ ಮತ್ತು ಮಂಗಳೂರು ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಯುತ್ತಿದೆ. ಬೆಳಗ್ಗೆ 7 ರಿಂದ ಸಂಜೆ 5 ಗಂಟೆ ತನಕ ಮತದಾನ ನಡೆಯಲಿದ್ದು, ನವೆಂಬರ್ 14ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

 ಕನಕಪುರ, ಮಾಗಡಿ ಸ್ಥಳೀಯ ಸಂಸ್ಥೆ ಚುನಾವಣೆ; ಅಂತಿಮವಾಗಿ 117 ಮಂದಿ ಕಣದಲ್ಲಿ ಕನಕಪುರ, ಮಾಗಡಿ ಸ್ಥಳೀಯ ಸಂಸ್ಥೆ ಚುನಾವಣೆ; ಅಂತಿಮವಾಗಿ 117 ಮಂದಿ ಕಣದಲ್ಲಿ

Civic polls

ಮತದಾನದ ವಿವರಗಳು

* ನಗರಸಭೆ : ಕನಕಪುರ, ಕೋಲಾರ, ಮುಳಬಾಗಿಲು, ಕೆ. ಜಿ. ಎಫ್., ಗೌರಿ ಬಿದನೂರು, ಚಿಂತಾಮಣಿ
* ಪುರಸಭೆ : ಬೀರೂರು, ಮಾಗಡಿ, ಕಂಪ್ಲಿ
* ಪಟ್ಟಣ ಪಂಚಾಯಿತಿ : ಕೂಡ್ಲಗಿ, ಕುಂದಗೋಳ, ಜೋಗ್-ಕಾರ್ಗಲ್
* ಮಹಾನಗರ ಪಾಲಿಕೆ : ದಾವಣಗೆರೆ, ಮಂಗಳೂರು

ಉಪ ಚುನಾವಣೆ; ಬೆಂಗಳೂರಿನ 4 ಕ್ಷೇತ್ರಗಳಲ್ಲಿ ನೀತಿ ಸಂಹಿತೆ ಜಾರಿಉಪ ಚುನಾವಣೆ; ಬೆಂಗಳೂರಿನ 4 ಕ್ಷೇತ್ರಗಳಲ್ಲಿ ನೀತಿ ಸಂಹಿತೆ ಜಾರಿ

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿಯೂ ನೋಟಾ ಬಳಕೆಗೆ ಅವಕಾಶವನ್ನು ನೀಡಲಾಗಿದೆ. ಕನಕಪುರದ ನಗರಸಭೆಯ 31 ವಾರ್ಡ್‌ಗಳ ಪೈಕಿ 7 ವಾರ್ಡ್‌ಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್‌ನ 368, ಬಿಜೆಪಿಯ 363, ಜೆಡಿಎಸ್‌ನ 233, ಸಿಪಿಐ 7, ಸಿಪಿಎಂ 12, ಬಿಎಸ್‌ಪಿ 24, ಎನ್‌ಸಿಸಿ 9, ಜೆಡಿಯು 5, ಎಸ್‌ಡಿಪಿಐ 16, ಕೆಪಿಜೆಪಿ 2, 475 ಪಕ್ಷೇತರರು ಸೇರಿ 1587 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

English summary
Voting will be held today for the 14 urban local bodies of Karnataka. Election counting on November 14, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X