ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮತದಾನ ಕಡ್ಡಾಯ

ಬೆಂಗಳೂರು, ಮಾ. 31: ಪಂಚಾಯಿತಿ ವ್ಯವಸ್ಥೆ ಭದ್ರಪಡಿಸಲು ರಾಜ್ಯ ಸರ್ಕಾರ ಮುಂದಾಗಿದ್ದು ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಮತದಾನ ಕಡ್ಡಾಯಗೊಳಿಸುವ ವಿಧೇಯಕವನ್ನು ಸೋಮವಾರ ಮಂಡಿಸಿದೆ.

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಅವಧಿಯನ್ನು ಐದು ವರ್ಷಗಳಿಗೆ ಹೆಚ್ಚಿಸುವ ಅವಕಾಶವನ್ನೂ ಈ ವಿಧೇಯಕದಲ್ಲಿ ಕಲ್ಪಿಸಲಾಗಿದೆ. 'ಕರ್ನಾಟಕ ಪಂಚಾಯತ್‌ರಾಜ್‌ (ತಿದ್ದುಪಡಿ) ವಿಧೇಯಕ, 2015' ಅನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಖಾತೆ ಸಚಿವ ಎಚ್‌.ಕೆ.ಪಾಟೀಲ್‌ ವಿಧಾನಸಭೆಯಲ್ಲಿ ಮಂಡಿಸಿದರು.[ಪಂಚಾಯತ್ ರಾಜ್ ಅಧಿಕಾರಿಗಳ ಅಮಾನತು]

hk patil

ಹಿರಿಯ ಶಾಸಕ ಕೆ.ಆರ್‌.ರಮೇಶ್‌ಕುಮಾರ್‌ ಅವರ ನೇತೃತ್ವದ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಶನಿವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿತ್ತು. ಅದರಂತೆ ಸೋಮವಾರ ವಿಧೇಯಕ ಮಂಡನೆ ಮಾಡಲಾಗಿದ್ದು ಮಾರ್ಚ್ 31 ರಂದು ಚರ್ಚೆ ನಡೆವ ಸಾಧ್ಯತೆಯಿದೆ.[ಕನ್ನಡ ಕಲಿಕೆ ಕೈ ಹಿಡಿದ ಸರ್ಕಾರ]

'ನೋಟಾ' ಅಳವಡಿಕೆ ಬಗ್ಗೆಯೂ ಚಿಂತನೆ ನಡೆಸಲಾಗಿದೆ. ಈಗಾಗುತ್ತಿರುವ ಗೊಂದಲ ನಿವಾರಿಸಲು ಅಧ್ಯಕ್ಷ-ಉಪಾಧ್ಯಕ್ಷ ಅವಧಿಯನ್ನು 5 ವರ್ಷಕ್ಕೆ ಏರಿಸಲಾಗುತ್ತದೆ. ಆಯ್ಕೆಯಾದ ಅಥವಾ ನೇಮಕವಾದ ನಂತರ ಅವಧಿ ಮುಗಿಯುವವರೆಗೂ ಅಧಿಕಾರ ಒಬ್ಬರ ಕೈ ನಲ್ಲೇ ಇರುತ್ತದೆ ಎಂದು ಪಾಟೀಲ್ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+