ನೆಲಮಂಗಲ ಟೋಲ್ ಬಳಿ ಭಾರೀ ಟ್ರಾಫಿಕ್ ಜಾಮ್
ಬೆಂಗಳೂರು, ಏಪ್ರಿಲ್ 26: ಲೋಕಸಭೆ ಚುನಾವಣೆಗೆ ದೇಶದ 2ನೇ ಹಂತ ಮತ್ತು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಶುಕ್ರವಾರ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಕರ್ನಾಟಕದ 28 ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಲ್ಲಿ ಮತದಾನ ಇಂದು ಬಿರುಸಿನಿಂದ ಸಾಗಿದೆ.
ಮತದಾನ ಮಾಡಲು ಬೆಂಗಳೂರು ನಗರದಿಂದ ಸಾವಿರಾರು ಜನರು ಪ್ರಯಾಣಿಸುತ್ತಿದ್ದು, ಶುಕ್ರವಾರ ನೆಲಮಂಗಲ ಟೋಲ್‌ಗೇಟ್ ಬಳಿ ಭಾರೀ ವಾಹನ ಸಂಚಾರ ದಟ್ಟಣೆ ಕಂಡುಬಂದಿದೆ. ಸರ್ಕಾರಿ ಬಸ್, ಖಾಸಗಿ ವಾಹನಗಳ ಮೂಲಕ ಜನರು ಮತದಾನ ಮಾಡಲು ತೆರಳುತ್ತಿದ್ದಾರೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ಮತದಾನ ಮಾಡಲು ಅನುಕೂಲವಾಗುವಂತೆ ರಜೆಯನ್ನು ನೀಡಲಾಗಿದ್ದು, ಜನರು ಬೆಳಗ್ಗೆ ಪ್ರಯಾಣ ಆರಂಭಿಸಿದ್ದಾರೆ. ಆದ್ದರಿಂದ ಟೋಲ್‌ಗೇಟ್ ಬಳಿಕ ವಾಹನ ಹೆಚ್ಚಿದೆ.
ಚುನಾವಣಾ ಕರ್ತವ್ಯಕ್ಕಾಗಿ ಸರ್ಕಾರಿ ಬಸ್, ಖಾಸಗಿ ವಾಹನಗಳನ್ನು ಬಳಕೆ ಮಾಡಿಕೊಳ್ಳಲಾಗಿದೆ. ಆದ್ದರಿಂದ ಗುರುವಾರ ಊರಿಗೆ ತೆರಳಲು ಬಸ್ ಕೊರತೆ ಕಾರಣ ಹಲವರಿಗೆ ಸಾಧ್ಯವಾಗಿಲ್ಲ. ಇಂದು ಬೆಳಗ್ಗೆ ಜನರು ಸಂಚಾರ ಆರಂಭಿಸಿದ್ದು, ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ.
ಸಂಜೆಯ ತನಕ ಮತದಾನ ಮಾಡಲು ಅವಕಾಶ: ಶುಕ್ರವಾರ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ. ನೆಲಮಂಗಲದ ಮೂಲಕ ಬೆಂಗಳೂರು ನಗರವನ್ನು ತುಮಕೂರು, ಉತ್ತರ ಕರ್ನಾಟಕ ಭಾಗವನ್ನು ಸಂಪರ್ಕಿಸುವ ಪ್ರಮುಖ ಹೆದ್ದಾರಿ ಹಾದು ಹೋಗುತ್ತದೆ.
ಇಂದು ತುಮಕೂರು, ಚಿತ್ರದುರ್ಗ ಲೋಕಸಭಾ ಕ್ಷೇತ್ರಗಳ ಮತದಾನ ನಡೆಯುತ್ತಿದೆ. ಆದ್ದರಿಂದ ಜನರು ಮತದಾನ ಮಾಡಲು ಬೆಂಗಳೂರು ನಗರದಿಂದ ಸಂಜೆ ಹೊರಟಿದ್ದು, ನೆಲಮಂಗಲದಲ್ಲಿ ಸಂಚಾರ ದಟ್ಟಣೆ ಕಂಡು ಬಂದಿದೆ.
ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಮಂಡ್ಯ, ಕೊಡಗು-ಮೈಸೂರು, ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿಯೂ ಇಂದು ಮತದಾನ ನಡೆಯುತ್ತಿದೆ. ನೆಲಮಂಗಲದ ಮೂಲಕ ಈ ಜಿಲ್ಲೆಗಳ ವ್ಯಾಪ್ತಿಗೆ ಸಂಪರ್ಕಿಸುವ ಹೆದ್ದಾರಿ ಸಹ ಹಾದು ಹೋಗುತ್ತದೆ. ಆದ್ದರಿಂದ ವಾಹನ ದಟ್ಟಣೆ ಇದೆ.
ಶುಕ್ರವಾರ ಮತದಾನ ನಡೆಯುತ್ತಿರುವ 14 ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ಸರ್ಕಾರಿ ಕಚೇರಿ, ಶಾಲಾ ಕಾಲೇಜು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಎಲ್ಲಾ ವ್ಯವಹಾರ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಸಂವಿಧಾನಾತ್ಮಕ ಅಥವಾ ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುಕೂಲವಾಗುವಂತೆ ರಜೆ ಘೋಷಣೆ ಮಾಡಲಾಗಿದೆ.
ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಎಲ್ಲಾ ವ್ಯವಹಾರ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು, ಹಾಗೂ ಇತರ ಸಂಸ್ಥೆಗಳು ಮತದಾನ ದಿನದಂದು ನೌಕರರಿಗೆ ವೇತನ ಸಹಿತ ರಜೆ ನೀಡಬೇಕು ಎಂದು ಕಾರ್ಮಿಕ ಇಲಾಖೆ ಸಹ ಆದೇಶ ಹೊರಡಿಸಿದೆ.
ಆದರೆ ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಿಸಿದ ಇಲಾಖೆ ಹಾಗೂ ಸಂಘ ಸಂಸ್ಥೆಗಳು ವ್ಯವಸ್ಥೆ ಮಾಡಬೇಕು ಎಂದು ಸೂಚಿಸಲಾಗಿದೆ.
-
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications