ಬಿಜೆಪಿಗೆ ಕಾರ್ಯಕ್ರಮಗಳನ್ನು ನೀಡಲು ತಾಕತ್ತಿಲ್ಲ; ದೇಶದ ಹೆಸರಿನಲ್ಲಿ ರಾಜಕೀಯ: ಮಾಜಿ ಸಂಸದ ಕಿಡಿ
ಬೆಂಗಳೂರು, ಸೆಪ್ಟೆಂಬರ್ 06: ಕೇಂದ್ರದಲ್ಲಿ 9 ವರ್ಷಗಳಾದರೂ ಮೋದಿಯವರು ಒಂದೇ ಒಂದು ಆಶ್ವಾಸನೆ ಈಡೇರಿಸಿಲ್ಲ. ಅದಕ್ಕೆ ಇಂಡಿಯಾವನ್ನು ಭಾರತ ಎಂದು ಬದಲಾಯಿಸಲು ಹೊರಟಿದ್ದಾರೆ ಎಂದು ಮಾಜಿ ಸಂಸದ ವಿ ಎಸ್ ಉಗ್ರಪ್ಪ ಕಿಡಿಕಾರಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿಗೆ ಕಾರ್ಯಕ್ರಮಗಳನ್ನು ನೀಡಲು ತಾಕತ್ತಿಲ್ಲ ಅದಕ್ಕೆ ಹೆಸರು ಬದಲಾವಣೆ ರಾಜಕೀಯ ಮಾಡುತ್ತಿದ್ದಾರೆ. ಬಹಳ ಶಿಸ್ತು ಇರುವ ಪಕ್ಷ ಎಂದು ಹೇಳುತ್ತಾರೆ ಆದರೆ ಅಶಿಸ್ತಿನಿಂದ ಬಿಜೆಪಿ ಮೂಲೆ ಸೇರುತ್ತಿದೆ, ಸೇರುತ್ತದೆ ಎಂದು ಕೇಂದ್ರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿಯವರ ನಾಯಕತ್ವ ಕರ್ನಾಟಕದಲ್ಲಿ ವಿಫಲಾಗಿದೆ, ಒಡೆದ ಮನೆಯಾಗಿ ಯಾರು ನಾಯಕರಿಲ್ಲದೇ, ಕಾಂಗ್ರೆಸ್ ಸರ್ಕಾರದ ವಿರುದ್ದ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಆದರೆ ನಮ್ಮ ಜನ ಬುದ್ದಿವಂತರಿದ್ದು ಬಿಜೆಪಿಯವರ ಮಾತನ್ನು ನಂಬುವುದಿಲ್ಲ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಬಿಜೆಪಿಯನ್ನು ರಾಷ್ಟ- ರಾಜ್ಯದಲ್ಲಿ ಸೋಲಿಸಲಿದ್ದಾರೆ.
ಇನ್ನೂ ದಲಿತರ ಬಗ್ಗೆಯಾಗಲಿ ಅಥವಾ ಸಮಾಜದ ಯಾವುದೇ ವರ್ಗದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಯವರಿಗೆ ಇಲ್ಲ. ಲೋಕಸಭಾ ಚುನಾವಣೆ ನಡೆದರೆ ಬಿಜೆಪಿ ಸೋಲುವುದು ಖಚಿತ, ಬಿಜೆಪಿ ಕರ್ನಾಟಕದಲ್ಲಿ ಒಡೆದ ಮನೆ, ಚುನಾವಣೆ ನಡೆದು 3 ತಿಂಗಳಾದರೂ ವಿರೋಧ ಪಕ್ಷದ, ವಿಧಾನಪರಿಷತ್ ನಾಯಕನಿಲ್ಲ, ವಿಪ್ಗಳನ್ನು ಆಯ್ಕೆ ಮಾಡಿಲ್ಲ. ಇದೆಲ್ಲಾ ನೋಡಿದರೆ ಬಿಜೆಪಿಯಲ್ಲಿ ಏನೂ ಸರಿಯಿಲ್ಲ.
ಬಸವಣ್ಣ ಅವರು ಶ್ರೇಣಿಕೃತ ವ್ಯವಸ್ಥೆಯ ವಿರುದ್ದ ದನಿ ಎತ್ತಿದವರು. ವರ್ಗರಹಿತ, ಜಾತಿ ರಹಿತ ಸಮಾಜದ ನಿರ್ಮಾಣಕ್ಕೆ ಲಿಂಗಾಯತ ಧರ್ಮವನ್ನು ಸ್ಥಾಪಿಸಿದವರು. ಆದರೆ ಇಂದು ಭಾರತೀಯ ಜನತಾ ಪಾರ್ಟಿಯವರು ಲಿಂಗಾಯತ ಹಾಗೂ ದಲಿತರ ಬಗ್ಗೆ ಮಾತನಾಡಲು ಪ್ರಾರಂಭ ಮಾಡಿದ್ದಾರೆ. ಆರ್ ಎಸ್ ಎಸ್ ನ ಎರಡನೇ ಸರಸಂಚಾಲಕರಾದ ಗೋಳವಾಳ್ಕರ್ ಅವರ "ಬಂಚ್ ಆಫ್ ಥಾಟ್ಸ್" ಅಲ್ಲಿ ಶ್ರೇಣೀಕೃತ ಸಮಾಜದ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಬಿಜೆಪಿಯವರಿಗೂ ಬಸವಣ್ಣನವರ, ದಲಿತರ ವಿಚಾರಧಾರೆಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಲ್ಲಿ ವೀರಶೈವರಿಗೆ ಸ್ಥಾನಮಾನ ಕೊಟ್ಟಿಲ್ಲ ಎಂದು ಹೇಳುತ್ತಾರೆ. ವಿರೇಂದ್ರ ಪಾಟೀಲರು ನಮ್ಮ ರಾಜ್ಯದ ಗೌರವಾನ್ವಿತ ನಾಯಕರು, ಇಂದಿರಾ ಗಾಂಧಿ ಅವರ ವಿರುದ್ದ ಚಿಕ್ಕಮಗಳೂರಿನಲ್ಲಿ ಸೋತ ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡು, ಕೇಂದ್ರದ ಮಂತ್ರಿ ಮಾಡಲಾಯಿತು. ರಾಜ್ಯ ಕಾಂಗ್ರೆಸ್ ಅಧ್ಯಕ್ಷರನ್ನಾಗಿ, ಮುಖ್ಯಮಂತ್ರಿಳನ್ನಾಗಿ ಮಾಡಿದ್ದು ಕಾಂಗ್ರೆಸ್ ಪಕ್ಷ ಎಂದು ತಿಳಿಸಿದ್ದಾರೆ.
ದಲಿತರ ವಿಚಾರವಾಗಿ ಬಿಜೆಪಿಯವರು ಸುಳ್ಳು ಹೇಳುತ್ತಾರೆ. ನಮ್ಮ ಹಿರಿಯ ನಾಯಕರಾದ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ, ಕೇಂದ್ರ ಸಚಿವರನ್ನಾಗಿ, ವಿರೋಧ ಪಕ್ಷದ ನಾಯಕನ್ನಾಗಿ ಮಾಡಿದ್ದು ಕಾಂಗ್ರೆಸ್ ಪಕ್ಷ. ಮಹಾರಾಷ್ಟ್ರದಲ್ಲಿ, ಪಂಜಾಬಿನಲ್ಲಿ ದಲಿತರನ್ನು ಮುಖ್ಯಮಂತ್ರಿಗಳಾನ್ನಾಗಿ ಮಾಡಿದ್ದು ಕಾಂಗ್ರೆಸ್ ಪಕ್ಷ. ದೇಶದಲ್ಲಿ ಇರುವ ಪ್ರಮುಖ ದಲಿತ ನಾಯಕರ ಹೆಸರು ಹೇಳುತ್ತಾ ಹೋದರೆ ಅವರೆಲ್ಲಾ ಕಾಂಗ್ರೆಸ್ ಪಕ್ಷದಿಂದ ಬಂದವರು. ರಾಜ್ಯಪಾಲರನ್ನಾಗಿ, ಲೋಕಸಭಾ ಸ್ಪೀಕರ್ಗಳನ್ನಾಗಿ ಮಾಡಿ ಕಾಂಗ್ರೆಸ್ ಪಕ್ಷ ದಲಿತರಿಗೆ ಗೌರವ ನೀಡಿದೆ ಎಂದು ಹೇಳಿದ್ದಾರೆ.
ಬಿಜೆಪಿಯುವರು ಬಂಗಾರು ಲಕ್ಷ್ಮಣ್ ಅವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡಿದರು. ಅವರು ಯಾರ ಬಳಿಯೋ 5 ಲಕ್ಷ ಹಣ ಪಡೆದರು ಎಂದು ರಾಜಕೀಯವಾಗಿ ಅವರನ್ನು ಮುಗಿಸಲಾಯಿತು.
ಗೋವಿಂದ ಕಾರಜೋಳ ಅವರೇ ನಿಮಗೆ ಸಾಮಾಜಿಕ ನ್ಯಾಯದ ಬಗ್ಗೆ ಬದ್ದತೆ ಇಲ್ಲ. ನೀವು ಸಮಾಜ ಕಲ್ಯಾಣ ಸಚಿವರಾಗಿದ್ದಾಗ ಏಕೆ ಕಾಂತರಾಜು ಆಯೋಗದ ಜಾತಿ ಗಣತಿ ವರದಿಯನ್ನು ಏಕೆ ಜಾರಿಗೆ ತರಲಿಲ್ಲ ಎಂದು ಹೇಳಿದ್ದಾರೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್












Click it and Unblock the Notifications