ನ್ಯಾಷನಲ್ ಹೆರಾಲ್ಡ್ ಕೇಸ್: ರಾಹುಲ್ ಇಡಿ ವಿಚಾರಣೆ ಬಗ್ಗೆ ಉಗ್ರಪ್ಪ ಕಿಡಿ
ಬೆಂಗಳೂರು, ಜೂ. 15: ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಜನರ ಮುಂದೆ ಇಡುವ ಪ್ರಾಮಾಣಿಕ ಪ್ರಯತ್ನ ರಾಹುಲ್ ಗಾಂಧಿ ಮಾಡುತ್ತಿದ್ದಾರೆ. ಅವರ ವಿರುದ್ಧ ಇಡಿ ತನಿಖೆ ನಡೆಸಿ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಕಿಡಿಕಾರಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಕೇಸಿನಲ್ಲಿ ರಾಹುಲ್ ಗಾಂಧಿಯನ್ನು ಇಡಿ ವಿಚಾರಣೆಗೆ ಒಳಪಡಿಸುತ್ತಿರುವ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಗ್ರಪ್ಪ, ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿ ಮಾತನಾಡಿದ ಅವರು, ಈ ನೆಲದ ಕಾನೂನು ಹಾಗೂ ಅದರ ವಿಧಿ ವಿಧಾನಗಳು, ದೇಶದ ಸಂವಿಧಾನ ಹಾಗೂ ಸ್ವಾತಂತ್ರ್ಯ ಚಳುವಳಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅರಿವಿದ್ದಿದ್ದರೆ, ಅವರು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಥವಾ ಕಾಂಗ್ರೆಸ್ ನಾಯಕರ ಮೇಲೆ ಸೇಡಿನ ರಾಜಕಾರಣ ಮಾಡುತ್ತಿರಲಿಲ್ಲ ಎಂದು ಹೇಳಿದರು.
ಮೋದಿ ಅವರು ದೇಶದ ಜನರಿಗೆ ಕೊಟ್ಟ ಆಶ್ವಾಸನೆಗಳನ್ನು ಈಡೇರಿಸಲು ಸಾಧ್ಯವಾಗಲಿಲ್ಲ. ಬೆಲೆ ಏರಿಕೆ ಗಗನಕ್ಕೇರುತ್ತಿದೆ. ನಿರುದ್ಯೋಗ ಸಮಸ್ಯೆ ಬೃಹದಾಕಾರವಾಗಿ ಬೆಳೆದಿದೆ. ಪಾಕಿಸ್ತಾನ ಹಾಗೂ ಚೀನಾದಿಂದ ಭಾರತದ ಗಡಿ ಕಾಪಾಡುವಲ್ಲಿ ವಿಫಲರಾಗಿದ್ದಾರೆ. ರೈತರ ಸಮಸ್ಯೆ ಹೆಚ್ಚಿದೆ. ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುತ್ತೇವೆ ಎಂದವರು, ಈಗ 18 ತಿಂಗಳಲ್ಲಿ 10 ಲಕ್ಷ ಸರ್ಕಾರಿ ಹುದ್ದೆಗಳನ್ನು ತುಂಬಲು ಘೋಷಿಸಿದ್ದಾರೆ. ಇಂದು ಈ ಎಲ್ಲ ವಿಚಾರಗಳನ್ನು ಜನರ ಮುಂದೆ ಇಡುವ ಪ್ರಾಮಾಣಿಕ ಪ್ರಯತ್ನವನ್ನು ರಾಹುಲ್ ಗಾಂಧಿ ಅವರು ಮಾಡುತ್ತಿದ್ದು, ಅವರ ವಿರುದ್ಧ ಇಡಿ ತನಿಖೆ ಮಾಡಿಸಿ ಅವರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕೆಲಸಗಾರರಿಗೆ ವೇತನ ನೀಡಲು ಸಾಧ್ಯವಾಗದ ಕಾರಣ
1938ರಲ್ಲಿ ಬ್ರಿಟೀಷರ ವಿರುದ್ಧದ ಧ್ವನಿಯನ್ನು ಪಸರಿಸಲು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಆಗಿನ ಕಾಂಗ್ರೆಸ್ ಅಧ್ಯಕ್ಷ ನೆಹರೂ ಅರಂಭಿಸಿದ್ದರು. 500ಕ್ಕೂ ಹೆಚ್ಚು ಸ್ವಾತಂತ್ರ್ಯ ಹೋರಾಟಗಾರರು ಷೇರುದಾರರಾಗಿದ್ದರು. ನೆಹರೂ ಅವರು ಪ್ರಧಾನಮಂತ್ರಿಯಾದ ಬಳಿಕ ಈ ಸಂಸ್ಥೆಯ ಮುಖ್ಯಸ್ಥ ಸ್ಥಾನ ಬಿಟ್ಟರು. 2008ರಲ್ಲಿ ಸುಮಾರು 90.25 ಲಕ್ಷ ಸಾಲ ಆಗಿ ಕೆಲಸಗಾರರಿಗೆ ವೇತನ ನೀಡಲು ಸಾಧ್ಯವಾಗದ ಕಾರಣ ಆ ಸಾಲವನ್ನು ಕಾಂಗ್ರೆಸ್ ಪಕ್ಷ ತೀರಿಸಿರುತ್ತದೆ.
ನಂತರ 2010ರಲ್ಲಿ ರಾಹುಲ್ ಗಾಂಧಿ ಅವರ ನೇತೃತ್ವದ ಯಂಗ್ ಇಂಡಿಯಾದಲ್ಲಿ ಸೋನಿಯಾ ಗಾಂಧಿ, ಮೋತಿಲಾಲ್ ವೊಹ್ರಾ, ಆಸ್ಕರ್ ಫರ್ನಾಂಡೀಸ್ ಇತರರು ಇದರ ಸದಸ್ಯರಾಗಿದ್ದರು. 2010ರಲ್ಲಿ 1057 ಷೇರುದಾರರಿದ್ದರು. ಅದರಲ್ಲಿ ಶಾಂತಿ ಭೂಷಣ ಅವರ ತಂದೆ, ಅಲಹಬಾದ್ ಹೈಕೋರ್ಟ್ ಮುಖ್ಯನ್ಯಾಯಾಧೀಶರಾಗಿದ್ದ ಮಾರ್ಕಂಡಯ್ಯ ಕಟ್ಜು ಅವರ ತಂದೆ ಅವರು ಇದರ ಷೇರುದಾದರಿದ್ದರು. ಇವರ ಅನುಮತಿ ಆಧಾರದಲ್ಲಿ ಯಂಗ್ ಇಂಡಿಯಾ ಲಿಮಿಟೆಡ್‌ಗೆ ಈ ನ್ಯಾಷನಲ್ ಹೆರಾಲ್ಡ್‌ನ ಆಸ್ತಿಯನ್ನು ವರ್ಗಾವಣೆ ಮಾಡಲಾಯಿತು. 50 ಲಕ್ಷ ಹಣವನ್ನು ನೀಡಲಾಗಿತ್ತು ಎಂದು ಉಗ್ರಪ್ಪ ನ್ಯಾಷನಲ್ ಹೆರಾಲ್ಡ್ ಕೇಸಿನ ಬಗ್ಗೆ ವಿವರಿಸಿದರು.

ಯಂಗ್ ಇಂಡಿಯಾದ ಷೇರು ಇರುವುದು 5 ಲಕ್ಷ
ಸುಬ್ರಮಣಿಯನ್ ಸ್ವಾಮಿ ಅವರು 2011ರಲ್ಲಿ ಪ್ರಕರಣ ದಾಖಲಿಸುತ್ತಾರೆ. ಯಂಗ್ ಇಂಡಿಯಾದ ಷೇರು ಇರುವುದು 5 ಲಕ್ಷ. 50 ಲಕ್ಷ ಕೋಟ್ಟಿರುವುದು ಕಾನೂನು ಬಾಹಿರ. 90.25 ಕೋಟಿ ಕೊಟ್ಟಿರುವುದು ಕಾನೂನು ಬಾಹಿರ ಎಂದು ಆರೋಪಿಸುತ್ತಾರೆ. ಈ ಸಂದರ್ಭದಲ್ಲಿ ನಮ್ಮ ಪಕ್ಷದವರು ಇದು ಹಣಕಾಸು ಅವ್ಯವಹಾರ ಅಲ್ಲ ಎಂದು ಹೇಳುತ್ತಾರೆ. ಇಲ್ಲಿ ನಾವು ಯಾವುದೇ ಕಪ್ಪು ಹಣ ನೀಡಿಲ್ಲ, ಅಕ್ರಮ ಚಟುವಟಿಕೆಯಿಂದ ಹಣ ಪಡೆದಿಲ್ಲ. ಸ್ವಾತಂತ್ರ್ಯದ ಹೋರಾಟದಲ್ಲಿ ಕೋಡುಗೆ ನೀಡಿರುವ ಪತ್ರಿಕೆ ಉಳಿಸಲು ಕಾಂಗ್ರೆಸ್ ದೇಣಿಗೆ ಕೊಟ್ಟಿದೆ ಎಂದು ಸ್ಪಷ್ಟಪಡಿಸಿದ್ದರು.

ಇಡಿ ಅವರು ಹೇಗೆ ಪ್ರಕರಣ ನಡೆಸುತ್ತಿದ್ದಾರೆ?
2014ರಲ್ಲಿ ಮೋದಿ ಅವರು ಪ್ರಧಾನಿಯಾದ ನಂತರ ಇದೇ ಸುಬ್ರಮಣಿಯನ್ ಸ್ವಾಮಿ ಅವರು ಈ ಪ್ರಕರಣವನ್ನು ಆದಾಯ ತೆರಿಗೆ ಇಲಾಖೆಯಿಂದ ತನಿಖೆ ಮಾಡಿಸಲು ಅಂದಿನ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರಿಗೆ ಪತ್ರ ಬರೆಯುತ್ತಾರೆ. ನಂತರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದಾಗ ಇದು ಕಾನೂನು ಚೌಕಟ್ಟಿನಲ್ಲಿ ಇತ್ಯರ್ಥವಾಗಲಿ ಎಂದು ಹೇಳಿದಾಗ 2015ರಲ್ಲಿ ಪ್ರಕರಣ ಖುಲಾಸೆಯಾಗುತ್ತದೆ. ಖುಲಾಸೆಯಾದ ಪ್ರಕರಣವನ್ನು ಮತ್ತೆ ಆರಂಭಿಸಿದ್ದಾರೆ. ದೆಹಲಿ ಹೈಕೋರ್ಟ್ ವಜಾಗೋಳಿಸಿದ ಪ್ರಕರಣವನ್ನು ಇಡಿ ಅವರು ಹೇಗೆ ಪ್ರಕರಣ ನಡೆಸುತ್ತಿದ್ದಾರೆ? ಇದು ರಾಜಕೀಯ ಷಡ್ಯಂತ್ರವಲ್ಲದೇ ಮತ್ತೇನು ಅಲ್ಲ ಎಂದು ಉಗ್ರಪ್ಪ ಪ್ರಶ್ನೆ ಮಾಡಿದರು.

ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಜನರ ಮುಂದೆ ಇಡುತ್ತಿರುವ ರಾಹುಲ್
ಕಳೆದ 40 ವರ್ಷಗಳಿಂದ ನಾನು ಕಾನೂನು ಅಭ್ಯಾಸ ಮಾಡುತ್ತಿದ್ದು, ನನ್ನ ಜೀವನದಲ್ಲಿ ನಾನು ಈ ರೀತಿ ಇಡಿಯವರು ಸಂಸದರೊಬ್ಬರನ್ನು ಕಿರುಕುಳ ನೀಡಲು ವಿಚಾರಣೆ ಮಾಡುತ್ತಿರುವುದನ್ನು ನೋಡಿಲ್ಲ. 50 ಲಕ್ಷಕ್ಕೆ ನ್ಯಾಷನಲ್ ಹೆರಾಲ್ಡ್ ಆಸ್ತಿ ವರ್ಗಾವಣೆಯಾಗಿರುವುದು ಅಕ್ರಮವಾದರೆ, ಚಾಲುಕ್ಯ ವಿವಿಗೆ ರಾಜ್ಯ ಸರ್ಕಾರ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 116,16 ಎಕರೆ ಜಾಗವನ್ನು ಕಡಿಮೆ ಬೆಲೆಗೆ ನೀಡಿರುವುದು ಕೂಡ ಅಕ್ರಮವಾಗುತ್ತದೆ ಎಂದು ಬಿಜೆಪಿ ಸರ್ಕಾರ ಮೇಲೆ ಭ್ರಷ್ಟಾಚಾರ ಆರೋಪ ಮಾಡಿದರು.
ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಜನರ ಮುಂದೆ ಇಡುತ್ತಿರುವ ರಾಹುಲ್ ಗಾಂಧಿ ಅವರ ಖ್ಯಾತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯವರು ಭಯಭೀತರಾಗಿದ್ದು, ಈ ರೀತಿಯ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ದೇಶದಲ್ಲಿ ಘೋಷಿತ ತುರ್ತುಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications